Karnataka Politics: ಯತ್ನಾಳ್ ಹೇಳಿಕೆ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಸಿದ್ದು ಮಾತು
* ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಸಿದ್ದರಾಮಯ್ಯ
* ಯತ್ನಾಳ್ ಹೇಳಿಕೆ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಸಿದ್ದು ಮಾತು
* ಕರ್ನಾಟಕ ರಾಜಕೀಯ ಧ್ರುವೀಕರಣ ಆಗುತ್ತಾ?
ಮಂಡ್ಯ, (ಡಿ.07): ರಾಜ್ಯದಲ್ಲಿ ಪ್ರಸ್ತುತ ವಿಧಾನಪರಿಷತ್ ಚುನಾವಣೆ(Karnataka MLC Election) ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದರ ಮಧ್ಯೆ ಕಾಂಗ್ರೆಸ್9Congress) ಹಾಗೂ ಬಿಜೆಪಿ(BJP) ನಾಯಕರು ಒಂದಿಲ್ಲೊಂದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸುವ ಹೇಳಿಕೆಗಳನ್ನ ಕೊಡುತ್ತಿದ್ದಾರೆ.
ಹೌದು... ಮುಂದೆ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ (Political Polarization) ಆಗಲಿದೆ ಎಂದು ಬಿಜೆಪಿ ಶಾಸಕರಾರದ ಬಸನಗೌಡ ಪಾಟೀಲ್ ಯತ್ಬಾಳ್ (Basangowda Patil yatnal) ಹಾಗೂ ರಮೇಶ್ ಜಾರಕಿಹೊಳಿ (Ramesh jarkiholi) ಹೇಳಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದರು. ಇದೀಗ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಸಹ ರಾಜಕೀಯ ಧ್ರುವೀಕರಣ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಮಂಡ್ಯದಲ್ಲಿ(Mand ಇಂದು (ಮಂಗಳವಾರ) ಮಾತನಾಡಿರುವ ಸಿದ್ದರಾಮಯ್ಯ, ಮುಂದೆ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ. ವಿವಿಧ ಪಕ್ಷಗಳ ಹಲವಾರು ನಾಯಕರು ಕಾಂಗ್ರೆಸ್ ಪಕ್ಷದತ್ತ ಬರುತ್ತಿದ್ದಾರೆ. ಈಗಾಗಲೇ ಹಲವರು ಬಂದಿದ್ದಾರೆ. ಇನ್ನು ಹಲವರು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಬಾಂಬ್ ಸಿಡಿಸಿದರು.
ಯತ್ನಾಳ್, ರಮೇಶ್ ಜಾರಕಿಹೊಳಿ ಹೇಳಿದ್ದೇನು?
ಡಿಸೆಂಬರ್ 10ರ ಬಳಿಕ ರಾಜ್ಯದಲ್ಲಿ ಬಹಳ ದೊಡ್ಡ ಬದಲಾವಣೆಯಾಗಲಿದೆ ಎಂದು ಹೇಳುವ ಮೂಲಕ ಸಂಚಲನ ಮೂಡಿಸಿದ್ದರು. ಅಲ್ಲದೆ ಬಸನಗೌಡ ಪಾಟೀಲ್ ಯತ್ನಾಳ್, ಪೂರ್ಣ ಸಚಿವ ಸಂಪುಟವೇ ಪುನಾರಚನೆಯಾಗಬಹುದು (Cabinet Expansion) ಎಂದು ಹೇಳುವ ಮೂಲಕ ತೀವ್ರ ಕುತೂಹಲ ಕೆರಳಿಸಿದ್ದರು.
ಇನ್ನು ಅಥಣಿಯಲ್ಲಿ ಮೊನ್ನೆ ನಡೆದಿದ್ದ ವಿಧಾನಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ರಮೇಶ್ ಜಾರಕಿಹೊಳಿ, ಹತ್ತು ದಿನಗಳಲ್ಲಿ ನಾನು ಮತ್ತೆ ಮಂತ್ರಿಯಾಗುತ್ತೇನೆ ಎಂದು ಹೇಳಿದ್ದರು.
ಸುಳಿವು ಕೊಟ್ಟಿರುವ ಬಿಎಸ್‌ವೈ
ಇನ್ನು ರಮೇಶ್ ಜಾರಕಿಹೊಳಿ ಹಾಗೂ ಯತ್ನಾಳ್ ಹೇಳಿದ ಬಳಿಕೆ ಬಿಎಸ್ ಯಡಿಯೂರಪ್ಪ ಸಹ ಸಂಪುಟ ವಿಸ್ತರಣೆ ಬಗ್ಗೆ ಸುಳಿವು ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಬಹದು.
ದಾವಣಗೆರೆ(Davanagere) ತಾಲೂಕಿನ ಆನಗೋಡದಲ್ಲಿ ಡಿ.04 ರಂದು ಮಾತನಾಡಿದ್ದ ಬಿಎಸ್‌ವೈ, ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬೊಮ್ಮಾಯಿ ಉತ್ತರಿಸಲಿದ್ದಾರೆ. ಇಷ್ಟರಲ್ಲೇ ಸಂಪುಟ ವಿಸ್ತರಣೆ ಆಗುವ ನಿರೀಕ್ಷೆ ನನಗೂ ಇದೆ ಎಂದು ಹೇಳಿದ್ದರು.
ಇನ್ನು ಇದೇ ವೇಳೆ ರಮೇಶ್ ಜಾರಕಿಹೊಳಿ ಸಂಪುಟ ಸೇರಲು ನಡೆಸುತ್ತಿರುವ ಕಸರತ್ತು ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಸಚಿವ ಸಂಪುಟ ವಿಸ್ತರಿಸುವ ಅಧಿಕಾರ ಸಿಎಂ ಬೊಮ್ಮಾಯಿಗೆ ಇದೆ. ಯಾರನ್ನ ಸಚಿವರನ್ನಾಗಿ ಮಾಡಬೇಕು, ಬಿಡಬೇಕು ಅನ್ನೋದು ಸಿಎಂಗೆ ಬಿಟ್ಟಿದ್ದು. ಸಂಪುಟ ವಿಸ್ತರಣೆ ಆಗುವ ನಿರೀಕ್ಷೆ ಇದೆ ಎಂದಿದ್ದರು.
ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ. ಆದರೆ ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳಬೇಕು ಎಂಬುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ತೀರ್ಮಾನಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು ಮೊದಲಿಗೆ 29 ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿದ್ದರು. ಆ ಬಳಿಕ ಬೊಮ್ಮಾಯಿ ಅವರು ದೆಹಲಿಗೆ ಭೇಟಿ ಕೊಟ್ಟಾಗಲೆಲ್ಲ ಸಂಪುಟ ವಿಸ್ತರಣೆಯ ಮಾತುಗಳು ಕೇಳಿಬರುತ್ತಲೇ ಇದ್ದವು. ಇದೀಗ ಸ್ವತಃ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಹಿರಂಗವಾಗಿಯೇ ಈ ವಿಚಾರ ಪ್ರಸ್ತಾಪಿಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ
ಇದೀಗ ಸಿದ್ದರಾಮಯ್ಯ ಸಹ ಮುಂದೆ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ ಹೇಳಿರುವುದು ಭಾರೀ ಸಂಚಲನ ಮೂಡಿಸಿದೆ.