ವರ್ಗ ದಂಧೆ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ
ನಾವು ಅಧಿಕಾರಕ್ಕೆ ಬಂದು ಎರಡು ತಿಂಗಳೂ ಆಗಿಲ್ಲ. ಆಗಲೇ 5 ಭರವಸೆಗಳಲ್ಲಿ ಮೂರು ಈಡೇರಿಸಿದ್ದೇವೆ. ಎಲ್ಲಾ ಸರ್ಕಾರಗಳಲ್ಲೂ ಸಾಮಾನ್ಯ ವರ್ಗಾವಣೆ ಸಹಜ. ಈ ಬಗ್ಗೆ ವರ್ಗಾವಣೆ ದಂಧೆ, ಭ್ರಷ್ಟಾಚಾರ ಎಂದು ಆರೋಪಿಸಿರುವ ಬಸವರಾಜ ಬೊಮ್ಮಾಯಿ, ಎಚ್.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ಖಂಡ ತುಂಡವಾಗಿ ಅಲ್ಲಗೆಳೆಯುತ್ತಿದ್ದೇನೆ. ಯಾವುದೇ ಕಾರಣಕ್ಕೂ ನಮಲ್ಲಿ ವರ್ಗಾವಣೆ ದಂಧೆ ಆಗಿಲ್ಲ ಎಂದು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಧಾನಸಭೆ(ನ.17): ‘ನಮ್ಮ ಸರ್ಕಾರದಲ್ಲಿ ಯಾವುದೇ ವರ್ಗಾವಣೆ ದಂಧೆ ನಡೆದಿಲ್ಲ. ನಾವು ಕೊಟ್ಟಗ್ಯಾರಂಟಿಗಳನ್ನು ಈಡೇರಿಸುತ್ತಿರುವುದರಿಂದ ರಾಜಕೀಯ ಭಯ ಹಾಗೂ ಅಭದ್ರತೆಯಿಂದ ಪ್ರತಿಪಕ್ಷಗಳ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ. ನನ್ನ ರಾಜಕೀಯ ಇತಿಹಾಸದಲ್ಲಿ ವರ್ಗಾವಣೆ ದಂಧೆ ನಡೆಸಿರುವುದಾಗಿ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಬಗೆಗಿನ ಚರ್ಚೆಗೆ ಉತ್ತರ ನೀಡಿದ ಅವರು, ‘ನಾವು ಅಧಿಕಾರಕ್ಕೆ ಬಂದು ಎರಡು ತಿಂಗಳೂ ಆಗಿಲ್ಲ. ಆಗಲೇ 5 ಭರವಸೆಗಳಲ್ಲಿ ಮೂರು ಈಡೇರಿಸಿದ್ದೇವೆ. ಎಲ್ಲಾ ಸರ್ಕಾರಗಳಲ್ಲೂ ಸಾಮಾನ್ಯ ವರ್ಗಾವಣೆ ಸಹಜ. ಈ ಬಗ್ಗೆ ವರ್ಗಾವಣೆ ದಂಧೆ, ಭ್ರಷ್ಟಾಚಾರ ಎಂದು ಆರೋಪಿಸಿರುವ ಬಸವರಾಜ ಬೊಮ್ಮಾಯಿ, ಎಚ್.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ಖಂಡ ತುಂಡವಾಗಿ ಅಲ್ಲಗೆಳೆಯುತ್ತಿದ್ದೇನೆ. ಯಾವುದೇ ಕಾರಣಕ್ಕೂ ನಮಲ್ಲಿ ವರ್ಗಾವಣೆ ದಂಧೆ ಆಗಿಲ್ಲ’ ಎಂದು ಸಮರ್ಥಿಸಿಕೊಂಡರು.
ಕುಮಾರಸ್ವಾಮಿ ಹೇಳೋದೆಲ್ಲ ಶೇ. 99 ಸುಳ್ಳು, ಜೆಡಿಎಸ್ ಸೆಕ್ಯುಲರ್ ಆಗಿಲ್ಲ: ಸಿಎಂ ಸಿದ್ದರಾಮಯ್ಯ
‘ಇನ್ನು ನಾನು ಮೊದಲ ಬಾರಿಗೆ 1983ರಲ್ಲಿ ಶಾಸಕನಾಗಿ ಆಯ್ಕೆಯಾಗಿದ್ದೆ. ಬಳಿಕ ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ, ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಇಷ್ಟುಸುದೀರ್ಘ ರಾಜಕಾರಣದಲ್ಲಿ ಯಾವತ್ತೂ ಕೂಡ ನನಗೆ ವರ್ಗಾವಣೆಯಲ್ಲಿ ಭ್ರಷ್ಟಾಚಾರ ಮಾಡಿರುವ ಆರೋಪ, ಕಳಂಕ ನನ್ನ ಮೇಲೆ ಇಲ್ಲ’ ಎಂದು ಸ್ಪಷ್ಟಪಡಿಸಿದರು.
‘ನಾನು ಮೊದಲ ಸಚಿವ ಸಂಪುಟ ಸಭೆಯಲ್ಲೇ ಯಾವ ಕಾರಣಕ್ಕೂ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯಬಾರದು ಎಂದು ಸಚಿವರಿಗೆ ಸ್ಪಷ್ಟವಾಗಿ ಸೂಚಿಸಿದ್ದೇನೆ’ ಎಂದು ಹೇಳಿದರು.
‘ಇನ್ನು ನನ್ನ ಇಲಾಖೆಗಳಾದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ವಾಣಿಜ್ಯ ತೆರಿಗೆ, ಖಜಾನೆ ಇಲಾಖೆಗಳಲ್ಲಿ ಯಾವ ವರ್ಗಾವಣೆಯನ್ನೂ ಮಾಡಿಲ್ಲ. ಹೀಗಾಗಿ ಭ್ರಷ್ಟಾಚಾರ ನಡೆಯಲು ಸಾಧ್ಯವೇ ಇಲ್ಲ. ನಮಗೆ ಕಣ್ಣಿಗೆ ಕಾಣದೆ ಯಾವುದಾದರೂ ಭ್ರಷ್ಟಾಚಾರ ಆಗಿದ್ದರೆ ಗೊತ್ತಿಲ್ಲ. ಆದರೆ ಗೊತ್ತಿದ್ದೂ ಯಾವುದೇ ಅಕ್ರಮ, ಅವ್ಯವಹಾರ ನಡೆಯಲು ಬಿಟ್ಟಿಲ್ಲ, ಬಿಡುವುದೂ ಇಲ್ಲ’ ಎಂದು ಸ್ಪಷ್ಟವಾಗಿ ಹೇಳಿದರು.