ಈ ಹಿಂದೆಯೂ ತಮಿಳರು ಪ್ರಧಾನಿಯಾಗುವ ಅವಕಾಶ ಎರಡು ಬಾರಿ ಬಂದಿತ್ತು. ಆದರೆ ಡಿಎಂಕೆಯಿಂದಾಗಿ ಈ ಅವಕಾಶ ಕೈತಪ್ಪಿತು ಎಂದು ಎಂದು ಶಾ ದೂರಿದರು ಎನ್ನಲಾಗಿದೆ. ಜೊತೆಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಕನಿಷ್ಠ 20 ಸ್ಥಾನ ಗೆಲ್ಲಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು ಎನ್ನಲಾಗಿದೆ.

ಚೆನ್ನೈ(ಜೂ.12): ಮುಂಬರುವ ದಿನಗಳಲ್ಲಿ ತಮಿಳುನಾಡಿನ ನಾಯಕರೊಬ್ಬರನ್ನು ದೇಶದ ಪ್ರಧಾನಿ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ, ಹಿರಿಯ ಬಿಜೆಪಿ ನಾಯಕ ಅಮಿತ್‌ ಶಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಹೊತ್ತಿನಲ್ಲೇ ವ್ಯಕ್ತವಾದ ಈ ಹೇಳಿಕೆ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ತಮಿಳುನಾಡು ಪ್ರವಾಸ ಕೈಗೊಂಡಿರುವ ಅಮಿತ್‌ ಶಾ, ಭಾನುವಾರ ರಾಜ್ಯ ಬಿಜೆಪಿಯ ಹಿರಿಯ ನಾಯಕರೊಂದಿಗೆ ಆಪ್ತ ಸಮಾಲೋಚನಾ ಸಭೆ ನಡೆಸಿದ್ದಾರೆ. ಈ ವೇಳೆ ಅವರು ಮುಂಬರುವ ದಿನಗಳಲ್ಲಿ ತಮಿಳರೊಬ್ಬರು ಈ ದೇಶದ ಪ್ರಧಾನಿಯಾಗಲಿದ್ದಾರೆ ಎನ್ನುವ ರೀತಿಯ ಮಾತುಗಳನ್ನು ಆಡಿದರು ಎಂದು ಸಭೆಯಲ್ಲಿ ಭಾಗಿಯಾಗಿದ್ದ ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ಆದರೆ ಈ ಕುರಿತು ಅಮಿತ್‌ ಶಾ ಹೆಚ್ಚಿನ ವಿವರ ನೀಡಲಿಲ್ಲ ಎಂದೂ ಹೇಳಿದ್ದಾರೆ.

ಶರದ್‌ ಪವಾರ್‌ಗೆ ಬಿಜೆಪಿ ಕಾರ್ಯಕರ್ತನಿಂದ್ಲೇ ಜೀವ ಬೆದರಿಕೆ: ಅಜಿತ್ ಪವಾರ್ ಸ್ಫೋಟಕ ಹೇಳಿಕೆ

ಈ ಹಿಂದೆಯೂ ತಮಿಳರು ಪ್ರಧಾನಿಯಾಗುವ ಅವಕಾಶ ಎರಡು ಬಾರಿ ಬಂದಿತ್ತು. ಆದರೆ ಡಿಎಂಕೆಯಿಂದಾಗಿ ಈ ಅವಕಾಶ ಕೈತಪ್ಪಿತು ಎಂದು ಎಂದು ಶಾ ದೂರಿದರು ಎನ್ನಲಾಗಿದೆ. ಜೊತೆಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಕನಿಷ್ಠ 20 ಸ್ಥಾನ ಗೆಲ್ಲಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು ಎನ್ನಲಾಗಿದೆ.

ತಮಿಳ್ನಾಡಲ್ಲಿ ಬಿಜೆಪಿ 20 ಸೀಟು ಗೆಲ್ಲಬೇಕು

ಈ ಹಿಂದೆಯೂ ತಮಿಳರು ಪ್ರಧಾನಿಯಾಗುವ ಅವಕಾಶ ಎರಡು ಬಾರಿ ಬಂದಿತ್ತು. ಆದರೆ ಡಿಎಂಕೆಯಿಂದಾಗಿ ಈ ಅವಕಾಶ ಕೈತಪ್ಪಿತು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಮಿಳುನಾಡಿನಲ್ಲಿ ಕನಿಷ್ಠ 20 ಸ್ಥಾನ ಗೆಲ್ಲಲು ಪ್ರಯತ್ನಿಸಬೇಕು ಅಂತ ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.