Asianet Suvarna News Asianet Suvarna News

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನದ ಹಿಂದೆ ಪ್ರಹ್ಲಾದ್ ಜೋಶಿ ಕೈವಾಡ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನದ ಹಿಂದೆ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಅವರ ಕೈವಾಡವಿದೆ. ಲೋಕಸಭೆ ಚುನಾವಣೆಗಾಗಿ ಬಿಜೆಪಿ ಕರಸೇವಕನ ಬಗ್ಗೆ ಇಷ್ಟೆಲ್ಲಾ ವಿವಾದ ಮಾಡುತ್ತಿದೆ. ಈ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಪಾತ್ರವಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಆರೋಪಿಸಿದ್ದಾರೆ.

Prahlad Joshi behind the arrest of Karasevaka Srikanth Pujar Jagdish Shettar is a serious allegation rav
Author
First Published Jan 6, 2024, 7:33 AM IST | Last Updated Jan 6, 2024, 7:33 AM IST

ಹುಬ್ಬಳ್ಳಿ (ಜ.6): ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನದ ಹಿಂದೆ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಅವರ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ 7ರಿಂದ 8 ವರ್ಷಗಳ ಕಾಲ ಅಧಿಕಾರದಲ್ಲಿತ್ತು ಮತ್ತು ಪ್ರತಿಪಕ್ಷ ನಾಯಕ ಆರ್ ಅಶೋಕ್ 5 ವರ್ಷ ಗೃಹ ಸಚಿವರಾಗಿದ್ದರು. ಆದರೂ ಈ ಕರಸೇವಕನ ವಿರುದ್ಧದ ಕೇಸ್‌ಗಳನ್ನು ಏಕೆ ವಾಪಸ್ ತೆಗೆದುಕೊಳ್ಳಲಿಲ್ಲ? ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ.

ಲೋಕಸಭೆ ಚುನಾವಣೆಗಾಗಿ ಬಿಜೆಪಿ ಕರಸೇವಕನ ಬಗ್ಗೆ ಇಷ್ಟೆಲ್ಲಾ ವಿವಾದ ಮಾಡುತ್ತಿದೆ. ಈ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಪಾತ್ರವಿದೆ. ಪೂಜಾರಿ ಬಂಧನದ ಹಿಂದೆ ಅವರ ಕೈವಾಡವಿದೆ ಎಂದು ಶೆಟ್ಟರ್ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.

ಸಂಕಷ್ಟಕ್ಕೆ ಸಿಲುಕಿದ್ದ ಶಬರಿಮಲೆ ಭಕ್ತರಿಗೆ ಆಶ್ರಯ; ಕೋಮು ಸೌಹಾರ್ದತೆಗೆ ಸಾಕ್ಷಿಯಾದ ತಿತಿಮತಿ ಜಾಮಾ ಮಸೀದಿ!

ಬಿಜೆಪಿ ಈಗ ಏಕೆ ಪ್ರತಿಭಟನೆ ನಡೆಸುತ್ತಿದೆ ಎಂದು ಪ್ರಶ್ನಿಸಿದ ಅವರು, ಅಧಿಕಾರದಲ್ಲಿದ್ದಾಗ ಈ ಪ್ರಕರಣಗಳನ್ನು ಹಿಂಪಡೆಯಲು ಯಾವುದೇ ಪ್ರಯತ್ನ ಮಾಡಲಿಲ್ಲ. ನಾನೂ ಹತ್ತು ತಿಂಗಳು ರಾಜ್ಯದ ಮುಖ್ಯಮಂತ್ರಿಯಾಗಿದ್ದೆ. ಕರಸೇವಕನಿಗೆ ಸಹಾಯ ಮಾಡುವ ನನ್ನ ಪ್ರಯತ್ನ ದಾಖಲೆಗಳಲ್ಲಿದೆ ಎಂದಿದ್ದಾರೆ.

ಕೇವಲ ಹಿಂದೂ ಮತಗಳನ್ನು ಪಡೆಯಲು ಬಿಜೆಪಿ ಇದೆಲ್ಲವನ್ನೂ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

'ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಮತ್ತು ಬಸವರಾಜ ಬೊಮ್ಮಾಯಿ ಇಷ್ಟು ದಿನ ಮೌನ ವಹಿಸಿದ್ದು ಏಕೆ? ಶ್ರೀಕಾತ್ ಪೂಜಾರಿ ಬಂಧನದ ನಂತರವೇ ಬಿಜೆಪಿಗೆ ಕರಸೇವಕನ ನೆನಪಾಯಿತು. ಕರಸೇವಕ ಬಂಧನದ ವಿಚಾರದಲ್ಲಿ ಬಿಜೆಪಿ ನಾಯಕರು ಬೂಟಾಟಿಕೆ ಮಾಡುತ್ತಿದ್ದಾರೆ. ಅವರಿಗೆ ರಾಮಭಕ್ತರ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ಶೆಟ್ಟರ್ ಹೇಳಿದ್ದಾರೆ.

ಕರಸೇವಕ ಶ್ರೀಕಾಂತ್ ಪೂಜಾರಿಗೆ ಕೋರ್ಟ್‌ ಜಾಮೀನು, ನ್ಯಾಯಾಲಯದ ಷರತ್ತುಗಳೇನು?

ಸರಕಾರದ ನಿರ್ದೇಶನದಂತೆ ಕರಸೇವಕನನ್ನು ಬಂಧಿಸಿಲ್ಲ ಎಂದರು.

ಹಿಂದೂ ಮತ್ತು ಮುಸ್ಲಿಮರನ್ನು ವಿಭಜಿಸುವುದು ಬಿಜೆಪಿಯ ಉದ್ದೇಶವಾಗಿದೆ. 10ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಿರುವ ಮಣಿಕಾಂತ್ ರಾಥೋಡ್‌ಗೆ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ನೀಡಿತ್ತು. ಭಾವನೆಗಳನ್ನು ಕೆರಳಿಸಿದರೂ ಬಿಜೆಪಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದರು.

Latest Videos
Follow Us:
Download App:
  • android
  • ios