ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವು ಇದೀಗ ರಾಜ್ಯ ಸರ್ಕಾರ ಮತ್ತು ಜೆಡಿಎಸ್‌ ನಡುವೆ ಪ್ರತಿಷ್ಠೆ ವಿಚಾರವಾಗಿ ಮಾರ್ಪಾಟ್ಟಿದ್ದು, ಆರೋಪ- ಪ್ರತ್ಯಾರೋಪ ಮುಂದುವರಿದಿದೆ. 

ಬೆಂಗಳೂರು (ಮೇ.10): ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವು ಇದೀಗ ರಾಜ್ಯ ಸರ್ಕಾರ ಮತ್ತು ಜೆಡಿಎಸ್‌ ನಡುವೆ ಪ್ರತಿಷ್ಠೆ ವಿಚಾರವಾಗಿ ಮಾರ್ಪಾಟ್ಟಿದ್ದು, ಆರೋಪ- ಪ್ರತ್ಯಾರೋಪ ಮುಂದುವರಿದಿದೆ. ಒಕ್ಕಲಿಗ ಸಮುದಾಯವನ್ನು ಹಿಂದಿಟ್ಟುಕೊಂಡು ರಾಜ್ಯದಲ್ಲಿ ನಡೆದ ಘಟನೆಗೆ ರಕ್ಷಣೆ ಪಡೆಯುವುದಿಲ್ಲ. ಒಕ್ಕಲಿಗ ನಾಯಕ ಎಂಬುದಾಗಿ ಎಲ್ಲಿಯೂ ಹೇಳಿಲ್ಲ. ಏಕಾಂಗಿಯಾಗಿ ಹೋರಾಟ ನಡೆಸಿದ್ದೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಕಂದಾಯ ಸಚಿವ ಕೃಷ್ಣಬೈರೇಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬುಧವಾರ ಜೆಡಿಎಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಒಕ್ಕಲಿಗ ಸಚಿವರು, ಸಂಸದರು, ಶಾಸಕರು ನನ್ನ ವಿರುದ್ಧ ಮಾತನಾಡಿದ್ದು, ಅವರ ಉದ್ದೇಶ ಇರುವುದು ನೊಂದವರಿಗೆ ನ್ಯಾಯ ಕೊಡಿಸುವು ದಲ್ಲ. ನನ್ನ ವಿರುದ್ಧ ದಾಳಿ ಮಾಡುವುದಷ್ಟೇ ಅವರ ಗುರಿಯಾಗಿದೆ. ಅವರು ಪೆನ್‌ಡ್ರೈವ್ ಗಳನ್ನು ಹಂಚಿಕೆ ಮಾಡಿದ ತಮ್ಮ ಪಕ್ಷದ, ಸರ್ಕಾರದ 'ಖಳನಾಯಕ' ನನ್ನು ರಕ್ಷಣೆ ಮಾಡಿಕೊಳ್ಳಲು ಜಾತಿ ಅಸ್ತ ಬಳಕೆ ಮಾಡಿದ್ದಾರೆ. ನಾನು ಅಂತಹ ಕೆಲಸ ಮಾಡಲ್ಲ. ಇಲ್ಲಿ ನಾನು ಜಾತಿಯನ್ನು ಎಳೆದು ತರುವುದಿಲ್ಲ. ಏಕಾಂಗಿ ಯಾಗಿಯೇ ಇದೆಲ್ಲವನ್ನೂ ಎದುರಿಸುತ್ತೇನೆ ಎಂದು ತಿರುಗೇಟು ನೀಡಿದರು. ಸಚಿವ ಕೃಷ್ಣ ಬೈರೇಗೌಡ ಅವರು ಪ್ರಪಂಚದಲ್ಲಿಯೇ ಅತಿ ದೊಡ್ಡ ಲೈಂಗಿಕ ಹಗರಣ ಎಂದಿದ್ದಾರೆ.

ಪ್ರಜ್ವಲ್‌ ರೇವಣ್ಣ ಕೇಸ್‌ಗೂ ಪ್ರಧಾನಿ ಮೋದಿಗೂ ಏನು ಸಂಬಂಧ?: ಎಚ್‌.ಡಿ.ಕುಮಾರಸ್ವಾಮಿ

ಅಷ್ಟು ದೊಡ್ಡದಾದ ಲೈಂಗಿಕ ಹಗರಣದಲ್ಲಿ ನೊಂದ ಮಹಿಳೆಯರ ಅಶ್ಲೀಲ ಡಿ.ಕೆ.ಶಿವಕುಮಾರ್ ದೃಶ್ಯಗಳನ್ನು ಪೆನ್‌ಡ್ರೈವ್ ಗಳಲ್ಲಿ ತುಂಬಿಸಿ ಹಾದಿಬೀದಿಯಲ್ಲಿ ಹಂಚಬಾರದು ಎನ್ನುವುದು ಗೊತ್ತಿರಲಿಲ್ಲವೇ? ವಿದೇಶದಲ್ಲಿ ಓದಿಕೊಂಡು ಬಂದ ಅವರಿಗೆ ಇನ್ನೂ ಸಾಮಾನ್ಯ ತಿಳಿವಳಿಕೆ ಇಲ್ಲವೇ? ಪೆನ್‌ಡ್ರೈವ್ ಗಳನ್ನು ಹಂಚಿದ್ದನ್ನು ಅವರು ಸಮರ್ಥನೆ ಮಾಡುತ್ತಾರೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದರು. ಉಪಮುಖ್ಯಮಂತ್ರಿ ಮತ್ತು ನನ್ನ ನಡುವೆ ಒಕ್ಕಲಿಗ ನಾಯಕತ್ವಕ್ಕೆ ನಡೆಯುತ್ತಿರುವ ಹೋರಾಟ ಎಂದು ಬಿಂಬಿಸಲು ನಾನು ಹೊರಟಿದ್ದಾರೆ. ಮೊದಲಿನಿಂದಲೂ ಏಕಾಂಗಿಯಾಗಿಯೇ ಹೋರಾಟ ಮಾಡಿದ್ದು, ಈಗಲೂ ಮಾಡುತ್ತಿದ್ದೇನೆ. ಈ ಮೊದಲು ಕಾಂಗ್ರೆಸ್‌ನಲ್ಲಿ 80 ಶಾಸಕರು ಇದ್ದರು. ಜೆಡಿಎಸ್‌ ನಲ್ಲಿ 28 ಶಾಸಕರಷ್ಟೇ ಇದ್ದೆವು. ಎಲ್ಲಾದರೂ ನಿಮಗೆ ಹೆದರಿದೆವಾ? ಪಲಾಯನ ಮಾಡಿದೆವಾ ಎಂದು ಕಿಡಿಕಾರಿದರು.