ಹಾಸನದ ಸಾವಿರಾರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ದೌರ್ಜನ್ಯ ಮಾಡಿದ್ದಾರೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಆ ವಿಡಿಯೋದಲ್ಲಿರುವ ಮಹಿಳೆಯರ ಪರಿಸ್ಥಿತಿ ಹೇಗಾಗಿರಬಾರದು. ಅವರ ಮನೆಯಲ್ಲಿ‌ ಅವರಿಗೆ ಹೇಗೆ ನೋಡುತ್ತಿದ್ದಾರೆ ಎನ್ನುವ ಪರಿಕಲ್ಪನೆ ಯಾರಿಗೂ ಇಲ್ಲ:  ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ  

ಬೆಳಗಾವಿ(ಏ.30): ಹಾಸನ ಸಂಸದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣನವರ ವಿಡಿಯೋ ಲೀಕ್ ಮಾಡಿದ್ದು‌ ಅವರ ಮೈತ್ರಿಕೂಟದವರೇ ಎಂದು ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಹೇಳಿದ್ದಾರೆ. 

ಇಂದು(ಮಂಗಳವಾರ) ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ನಯನಾ ಮೋಟಮ್ಮ ಅವರು, ಹಾಸನದ ಸಾವಿರಾರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. 

ಪ್ರಜ್ವಲ್‌ನ ರಾಸಲೀಲೆ ಬಗ್ಗೆ ಬಿಜೆಪಿಗೆ ಮೊದಲೇ ಗೊತ್ತಿದೆ, ಮೋದಿ ಇದಕ್ಕೆ ಉತ್ತರ ಕೊಡಬೇಕು: ಸುಪ್ರಿಯಾ ಶ್ರಿನೆಟ್

ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಆ ವಿಡಿಯೋದಲ್ಲಿರುವ ಮಹಿಳೆಯರ ಪರಿಸ್ಥಿತಿ ಹೇಗಾಗಿರಬಾರದು. ಅವರ ಮನೆಯಲ್ಲಿ‌ ಅವರಿಗೆ ಹೇಗೆ ನೋಡುತ್ತಿದ್ದಾರೆ ಎನ್ನುವ ಪರಿಕಲ್ಪನೆ ಯಾರಿಗೂ ಇಲ್ಲ. ಇದನ್ನು‌ ಲೀಕ್ ಮಾಡಿದವರ‌ ವಿರುದ್ಧವೂ ಎಸ್‌ಐಟಿ ತಂಡ ತನಿಖೆ ನಡೆಸುತ್ತಿದೆ ಎಂದು ನಯನಾ ಮೋಟಮ್ಮ ತಿಳಿಸಿದ್ದಾರೆ.