Prajwal Revanna Sex Scandal: ಡಿಕೆ ಬ್ರದರ್ಸ್, ದೇವೇಗೌಡ ನಿವಾಸಕ್ಕೆ ಹೆಚ್ಚಿನ ಭದ್ರತೆ
ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನದ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರ ನಿವಾಸಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಬೆಂಗಳೂರು (ಮೇ.06): ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನದ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರ ನಿವಾಸಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ರೇವಣ್ಣ ಬಂಧನದಿಂದ ಭಾವುಕರಾಗಿರುವ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶನಿವಾರ ರಾತ್ರಿಯಿಂದಲೇ ಪದ್ಮನಾಭನಗರದ ದೇವೇಗೌಡರ ನಿವಾಸ ಮತ್ತು ಸದಾಶಿವನಗರದ ಶಿವಕುಮಾರ್ ಮತ್ತು ಸುರೇಶ್ ನಿವಾಸದ ಬಳಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ನನಗೆ, ಯೋಗಿ ಆದಿತ್ಯನಾಥ್‌ಗೆ ಮಕ್ಕಳು ಇಲ್ಲ, ನಿಮ್ಮ ಮಕ್ಕಳಿಗಾಗಿ ದುಡಿಯುತ್ತೇವೆ: ಪ್ರಧಾನಿ ಮೋದಿ ಭಾವುಕ
ನಾಗರಿಕ ಪೊಲೀಸ್ ಜತೆಗೆ ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿದೆ. ರೇವಣ್ಣ ಬಂಧನಕ್ಕೆ ಜೆಡಿಎಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಳೆನರಸೀಪುರ, ಹಾಸನ ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿಯೂ ಪ್ರತಿಭಟನೆಗಳಾಗುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.
ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಮ್ ಆದ್ಮಿ ಪಕ್ಷ ಒತ್ತಾಯ: ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡ ಸಂಸದ ಪ್ರಜ್ವಲ ರೇವಣ್ಣ ಹಾಗೂ ಅವರ ತಂದೆ ಎಚ್.ಡಿ. ರೇವಣ್ಣ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಬಿ.ಇ.ಜಗದೀಶ್, ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳನ್ನು ಪೂಜಿಸುತ್ತೇವೆ, ಗೌರವದಿಂದ ಕಾಣುತ್ತೇವೆ. ಆದರೆ ಪ್ರಜ್ವಲ್ ರೇವಣ್ಣ ಅವರು ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರವೆಸಗಿ ನಂತರ ವಿಡಿಯೋ ಮಾಡಿ ಮಾನಹಾನಿ ಮಾಡಿದ್ದಾರೆ. ಇಂತಹ ನೀಚ ಕೃತ್ಯ ಅಕ್ಷಮ್ಯವಾಗಿದ್ದು ಆರೋಪಿಗಳು ಯಾವುದೇ ಕಾರಣದಿಂದ ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳಬಾರದು ಎಂದರು.
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಮೊಮ್ಮಕ್ಕಳು ದೇಶಕ್ಕೆ ಹಾಗೂ ಮಹಿಳಾ ಕುಲಕ್ಕೆ ಕಳಂಕ ತಂದಿದ್ದಾರೆ. ದೇವೇಗೌಡರು ಮೊಮ್ಮಕ್ಕಳನ್ನು ಹೇಗೆ ಬೆಳೆಸಿದ್ದಾರೆ ಎನ್ನುವುದನ್ನು ಸಮಾಜ ನೋಡುತ್ತಿದೆ. ಹಣ ಹಾಗೂ ಅಧಿಕಾರದ ಮನೋಭಾವ ಮನುಷ್ಯನನ್ನು ಅದೆಷ್ಟು ಕೀಳು ಮಟ್ಟಕ್ಕೆ ಒಯ್ಯುತ್ತದೆ ಎಂಬುದಕ್ಕೆ ಇದೇ ಸಾಕ್ಷಿ ಎಂದರು. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಹೊರಗಡೆ ಇದ್ದರೆ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದ್ದು, ಹಣದಿಂದ ಸಂತ್ರಸ್ತರನ್ನು ಕೊಂಡುಕೊಳ್ಳುವ ಹುನ್ನಾರ ನಡೆಯುತ್ತಿದೆ. ಜೆಡಿಎಸ್‍ನವರು ಇಂತಹ ಕೃತ್ಯಗಳಿಂದ ಹೊರಬರುವ ಸಲುವಾಗಿ ಬಿಜೆಪಿಯೊಂದಿಗೆ ಕೈಜೋಡಿಸಿದ್ದಾರೆ.
ರೇವಣ್ಣ ಅಲ್ಲ, ಪ್ರಜ್ವಲ್ ನನ್ನ ಮೇಲೆ ರೇಪ್ ಮಾಡಿದ್ದಾರೆ: ಅಪಹರಣವಾಗಿದ್ದ ಮಹಿಳೆ
ಹೆಣ್ಣು ಮಕ್ಕಳ ಮೇಲಿನ ಪ್ರಕರಣಗಳಲ್ಲಿ ಗಂಭೀರವಾದ ಶಿಕ್ಷೆಗಳು ಆಗುತ್ತಿಲ್ಲ. ರಮೇಶ್ ಜಾರಕಿಹೊಳಿರವರ ಪ್ರಕರಣ ಹಾಗೆ ನಿಂತುಹೋಗಿದೆ. ಮಹಿಳೆಯರಿಗೆ ನ್ಯಾಯ ಎನ್ನುವುದು ಬರೀ ಭಾಷಣಕ್ಕೆ ಮಾತ್ರ ಸೀಮಿತವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಮಾತನಾಡಿ, ಪ್ರಜ್ವಲ್ ಕುಟುಂಬದಲ್ಲಿ ತಾತ ಮಾಜಿ ಪ್ರಧಾನಿ, ತಂದೆ ಮಾಜಿ ಸಚಿವ, ಚಿಕ್ಕಪ್ಪ ಮಾಜಿ ಮುಖ್ಯಮಂತ್ರಿ, ಚಿಕ್ಕಮ್ಮ ಮಾಜಿ ಶಾಸಕಿ, ತಾಯಿ ಮಾಜಿ ಜಿಪಂ ಸದಸ್ಯೆ, ತಮ್ಮ ಎಂಎಲ್‍ಸಿಯಾಗಿದ್ದಾರೆ. ಅಧಿಕಾರ, ಹಣ ಹಾಗೂ ಯೌವ್ವನದ ಮದದಿಂದ ಈ ರೀತಿ ಆಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕಿದೆ ಎಂದರು.