Asianet Suvarna News

ಸಿಎಂ ಯೋಗಿ ಆದಿತ್ಯನಾಥ್ ಬದಲಾವಣೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

* ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿ
* ಯುಪಿ ಸಿಎಂ ಯೋಗಿ ಆದಿತ್ಯನಾಥ್ ಬದಲಾವಣೆ ಬಗ್ಗೆ ಪ್ರತಿಕ್ರಿಯೆ
* ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟನೆ ಕೊಟ್ಟ ಸಚಿವ

Pralhad Joshi Reacts On UP CM Yogi Adityanath Leadership Change rbj
Author
Bengaluru, First Published Jun 13, 2021, 4:28 PM IST
  • Facebook
  • Twitter
  • Whatsapp

ಹುಬ್ಬಳ್ಳಿ, (ಜೂನ್.13): ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕೂಗು ಜೋರಾಗುತ್ತಿದೆ. ಇದೇ ರೀತಿ ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬದಲಾವಣೆ ಬಗ್ಗೆ ಮಾತುಗಳು ಕೇಳಿಬರುತ್ತಿವೆ.

ಇನ್ನು ಇದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದು, ಯೋಗಿ ಆದಿತ್ಯನಾಥ್ ಬದಲಾವಣೆ ಕೇವಲ ಊಹಾಪೋಹವಷ್ಟೇ. ಉತ್ತರ ಪ್ರದೇಶ ಸಿಎಂ ಯೋಗಿ ಒಳ್ಳೆಯ ನಾಯಕರಾಗಿದ್ದಾರೆ. ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು. 

ಉತ್ತರ ಪ್ರದೇಶದಲ್ಲಿ ಯೋಗಿ ನಾಯಕತ್ವ ಅಬಾಧಿತ!

ಪ್ರಧಾನಿ ಮೋದಿ ಅವರನ್ನು ಆದಿತ್ಯನಾಥ್ ಭೇಟಿಯಾಗಿದ್ದಾರೆ. ಭೇಟಿಯಾದ ವಿಚಾರಕ್ಕೆ ಸಿಎಂ ಬದಲಾವಣೆ ಎಂಬ ಚರ್ಚೆಯಾಗುತ್ತಿದೆ. ಇಂತಹ ಚರ್ಚೆಗಳೇ ವಿಚಿತ್ರ ಅನಿಸುತ್ತದೆ ಎಂದರು.

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ. ನನಗೆ ಮಾಹಿತಿ ಇಲ್ಲ. ಸಂಪುಟ ವಿಸ್ತರಣೆ ಬಗ್ಗೆ ಪ್ರಧಾನಿ ಮೋದಿ ಅವರು ನಿರ್ಧಾರ ಮಾಡುತ್ತಾರೆ.  ಯಾವಾಗ ಅವಶ್ಯಕವಿದೆಯೋ ಅವಾಗ ಕೇಂದ್ರದ ನಾಯಕರು ವಿಸ್ತರಣೆ ಮಾಡುತ್ತಾರೆ ಎಂದು ತಿಳಿಸಿದರು.

ಇದೇ ವೇಳೆ ಕಾಂಗ್ರೆಸ್ ನಾಯಕತ್ವದ ಬಗ್ಗೆ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಎರಡು ವರ್ಷವಾದರೂ ಕಾಂಗ್ರೆಸ್ ನವರಿಗೆ ತಮ್ಮ ಪಕ್ಷದ ಅಧ್ಯಕ್ಷರನ್ನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಕಾಂಗ್ರೆಸ್‌ನವರು ಕೇವಲ ಬೇಜಾವಾಬ್ದಾರಿತನದ ಹೇಳಿಕೆಗಳನ್ನ‌ ನೀಡುತ್ತಾರೆ ಎಂದು ಕಿಡಿಕಾರಿದರು.

Follow Us:
Download App:
  • android
  • ios