* ಈ ಸಂದರ್ಭದಲ್ಲಿ ಕೋವಿಡ್ ನಿರ್ವಹಣೆ ಅಷ್ಟೇ ನಮ್ಮ ಆದ್ಯತೆ* ಹುಬ್ಬಳ್ಳಿಯಲ್ಲಿ ಕೇಂದ್ರ  ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ* ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ  ಪ್ರತಿಕ್ರಿಯೆ

ಹುಬ್ಬಳ್ಳಿ, (ಜೂನ್.12): ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಇಲ್ಲ ಎಂದು ಬಿಜೆಪಿ ಹೈಕಮಾಂಡ್ ಸ್ಪಷ್ಟಪಡಿಸಿದ್ದು, ಆ ಬಗ್ಗೆ ಚರ್ಚೆ ಅಪ್ರಸ್ತುತ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. 

Add Asianetnews Kannada as a Preferred SourcegooglePreferred

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸಂಕಷ್ಟದಲ್ಲಿ ಯಾರು ಸಹ ನಾಯಕತ್ವ ಬದಲಾವಣೆ. ಭಿನ್ನ ಅನಿಸಿಕೆ ಕುರಿತು ಹೇಳಿಕೆ ನೀಡಬಾರದು ಎಂದರು.

ನಾಯಕತ್ವ ಬದಲಾವಣೆ ಚರ್ಚೆ ಮಧ್ಯೆ ದಿಲ್ಲಿಗೆ: ಸ್ಪಷ್ಟನೆ ಕೊಟ್ಟ ಬಿಜೆಪಿ ಶಾಸಕ

ಸರ್ಕಾರ ಎಲ್ಲ ರೀತಿಯಿಂದ ಒಳ್ಳೆ ಕೆಲಸ ಮಾಡ್ತಿದೆ. ಯಡಿಯೂರಪ್ಪ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಈ ವಯಸ್ಸಿನಲ್ಲಿಯೂ ಕೋವಿಡ್ ನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಹಾಗಾಗಿ ಈ ಸಂದರ್ಭದಲ್ಲಿ ಯಡಿಯೂರಪ್ಪ ರನ್ನು ಬದಲಾಯಿಸುವ ಪ್ರಶ್ನೆಯಿಲ್ಲ. ರಾಜ್ಯ ಉಸ್ತುವಾರಿ ಅರುಣಸಿಂಗ್ ಅವರೂ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು.

 ಶಾಸಕ ಅರವಿಂದ ಬೆಲ್ಲದ ಅವರು, ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದಾಗಿ ನನಗೆ ತಿಳಿಸಿದ್ದಾರೆ. ಬೇರೆಯವರು ಯಾರು ದೆಹಲಿಗೆ ಹೋಗಿದ್ದಾರೆ. ಯಾಕೆ ಹೋಗಿದ್ದಾರೆ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

ಜನಪ್ರತಿನಿಧಿಗಳಿಗೆ ಅಧಿಕಾರವೊಂದೇ ಅಲ್ಲ, ಜನರ ಕಣ್ಣೀರು ಒರೆಸುವ ಕೆಲಸ ಮಾಡಬೇಕು. ಇದೀಗ ನಮ್ಮೆಲ್ಲರ ಮುಂದೆ ಇರುವುದು ಕೋವಿಡ್ ನಿಯಂತ್ರಣವಷ್ಟೇ ಎಂದು ಹೇಳಿದರು.