ನನಗೆ ಪ್ರೀತಿ ತೋರಿಸಿದರೆ ಅಚ್ಚುಕಟ್ಟಾಗಿ ಕೆಲಸಮಾಡುತ್ತೇನೆ. ಏನಾದರೂ ಬಲವಂತ ಮಾಡಿದರೆ ರಾಜಕೀಯವನ್ನೇ ಬಿಡುತ್ತೇನೆ. ಒಬ್ಬ ಬಿಜೆಪಿ ಕಾರ್ಯಕರ್ತನಾಗಿ ಮೋದಿ ಅವರು ಪ್ರಧಾನಿ ಆಗಬೇಕು ಎಂದು ಪ್ರಚಾರ ಆರಂಭಿಸಿದ್ದೇನೆ. ನಾಳೆ ಸಿಮೆಂಟ್ ಮಂಜು, ಜಿಲ್ಲಾ ಬಿಜೆಪಿ ಅಧ್ಯಕ್ಷರು ಆಲೂರಿನಲ್ಲಿ ಪ್ರಚಾರ ಮಾಡಲು ಸೂಚನೆ ಕೊಟ್ಟಿದ್ದೇನೆ ಎಂದು ತಿಳಿಸಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ 

ಹಾಸನ(ಏ.11): ಹೈಕಮಾಂಡ್ ಸೂಚನೆಗೆ ಮಣಿದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ನಗರದ ವಿದ್ಯಾನಗರದಲ್ಲಿ ಬುಧವಾರ ಪ್ರಚಾರ ನಡೆಸಿದರು. ಮೈತ್ರಿ ಅಭ್ಯರ್ಥಿ ಪರ ಇದೇ ಮೊದಲ ಬಾರಿಗೆ ಬೆಂಬಲಿಗರೊಂದಿಗೆ ಕರಪತ್ರಗಳನ್ನು ಹಂಚುವ ಮೂಲಕ ಮತಯಾಚನೆ ಮಾಡಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಮಾಧ್ಯಮದೊಂದಿಗೆ ಮಾತನಾಡಿ, ನನಗೆ ಪ್ರೀತಿ ತೋರಿಸಿದರೆ ಅಚ್ಚುಕಟ್ಟಾಗಿ ಕೆಲಸಮಾಡುತ್ತೇನೆ. ಏನಾದರೂ ಬಲವಂತ ಮಾಡಿದರೆ ರಾಜಕೀಯವನ್ನೇ ಬಿಡುತ್ತೇನೆ. ಒಬ್ಬ ಬಿಜೆಪಿ ಕಾರ್ಯಕರ್ತನಾಗಿ ಮೋದಿ ಅವರು ಪ್ರಧಾನಿ ಆಗಬೇಕು ಎಂದು ಪ್ರಚಾರ ಆರಂಭಿಸಿದ್ದೇನೆ. ನಾಳೆ ಸಿಮೆಂಟ್ ಮಂಜು, ಜಿಲ್ಲಾ ಬಿಜೆಪಿ ಅಧ್ಯಕ್ಷರು ಆಲೂರಿನಲ್ಲಿ ಪ್ರಚಾರ ಮಾಡಲು ಸೂಚನೆ ಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ. 

Lok Sabha Election 2024: ಪ್ರೀತಂಗೆ ಹಾಸನಕ್ಕೆ ಬರಬೇಡಿ ಎಂದಿದ್ದೇನೆ: ರಾಧಾಮೋಹನ್

ನಾವು ಈ ಚುನಾವಣೆಯನ್ನು ಸವಾಲಾಗಿ ತೆಗೆದುಕೊಂಡಿದ್ದೇವೆ. ನಮ್ಮ ಅಭ್ಯರ್ಥಿಗೆ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರಕ್ಕಿಂತ ಒಂದು ಮತವನ್ನು ಹೆಚ್ಚು ಕೊಡಿಸಲು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದೇನೆ ಎಂದು ಹೇಳಿದರು.