Asianet Suvarna News Asianet Suvarna News

President Oath Ceremony: 64 ವರ್ಷದ ದ್ರೌಪದಿ ಮುರ್ಮು ಇನ್ನು ದೇಶದ ಸುಪ್ರೀಂ ಕಮಾಂಡರ್!

ಆದಿವಾಸಿ ಮಹಿಳೆ ಒಡಿಶಾ ಮೂಲದ ದ್ರೌಪದಿ ಮುರ್ಮು ದೇಶದ 15ನೇ ರಾಷ್ಟ್ರಪತಿಯಾಗಿ, ಸುಪ್ರೀಂ ಕಮಾಂಡರ್‌ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಬೆಳಗ್ಗೆ 10.15ಕ್ಕೆ ಸೆಂಟ್ರಲ್‌ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ 64 ವರ್ಷದ ದ್ರೌಪದಿ ಮುರ್ಮು ಅವರಿಗೆ ದೇಶದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಪ್ರಮಾಣ ವಚನ ಬೋಧನೆ ಮಾಡಿದರು.

President Oath Ceremony Draupadi Murmu is now supreme commander of India san
Author
Bengaluru, First Published Jul 25, 2022, 10:14 AM IST

ನವದೆಹಲಿ (ಜುಲೈ 25): ದೇಶದ ರಾಷ್ಟ್ರಪತಿಯಾಗಿ ಆಯ್ಕೆಯಾದ 2ನೇ ಮಹಿಳೆ, ರಾಷ್ಟ್ರಪತಿಯಾಗಿ ಆಯ್ಕೆಯಾದ ಮೊದಲ ಆದಿವಾಸಿ ಮಹಿಳೆ ಎನಿಸಿಕೊಂಡಿದ್ದ 64 ವರ್ಷದ ದ್ರೌಪದಿ ಮುರ್ಮು ಸೋಮವಾರ ದೇಶದ 15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಪ್ರಮಾಣವಚನ ಬೋಧನೆ ಮಾಡಿದರು. ಇದಕ್ಕೂ ಮುನ್ನ ರಾಷ್ಟ್ರಪತಿ ಭವನದಲ್ಲಿ ನಿರ್ಗಮಿತ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಹಾಗು ಅವರ ಕುಟುಂಬಸ್ಥರನ್ನು ಭೇಟಿ ಮಾಡಿದರು. ರಾಷ್ಟ್ರಪತಿ ಕೋವಿಂದ್‌ ಹಾಗೂ ಅವರ ಪತ್ನಿ ಹೂಗುಚ್ಛ  ನೀಡಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಿದರು. ದೇಶದ ಅತ್ಯಂತ ಕಿರಿಯ ರಾಷ್ಟ್ರಪತಿಯಾಗಿರುವ ದ್ರೌಪದಿ ಮುರ್ಮು, ವಿಶ್ವದ ಅತ್ಯಂತ ಬಲಾಢ್ಯ ಸೇನಾಪಡೆಗಳಲ್ಲಿ ಒಂದಾಗಿರುವ ಭಾರತೀಯ ಸೇನೆಯ ಸುಪ್ರೀಂ ಕಮಾಂಡರ್‌ ಕೂಡ ಆಗಿರಲಿದ್ದಾರೆ. ರಾಷ್ಟ್ರಪತಿ ಭವನಕ್ಕೆ ಆಗಮಿಸುವ ಮುನ್ನ ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿ ಅವರ ಸಮಾಧಿಗೆ ಗೌರವ ಸಲ್ಲಿಸಿದರು.

Follow Us:
Download App:
  • android
  • ios