ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳ ಪಕ್ಷದ ಮುಖಂಡರು ಒತ್ತಾಯ ಮಾಡಿದ್ದಾರೆ. ಆದರೆ, ನಾನು ನನ್ನ ಸುದೀರ್ಘ ರಾಜಕೀಯ ಅನುಭವದಿಂದ ನನ್ನದೇ ಆದ ನಿರ್ಧಾರ ಕೈಗೊಂಡಿದ್ದೆ. ನನ್ನ ಅನುಭವವನ್ನು ಪಕ್ಷಕ್ಕೆ ಧಾರೆ ಎರೆಯಬೇಕು ಎಂಬ ಯೋಚನೆಯಿದೆ. ನೋಡೋಣ ಏನಾಗುತ್ತದೆ ಎಂದು ಮಾರ್ಮಿಕವಾಗಿ ಹೇಳಿದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ

ಬೆಂಗಳೂರು(ಡಿ.29): ಪಕ್ಷದ ಹಿರಿಯ ನಾಯಕರು ನಮ್ಮ ಮನೆಗೆ ಬಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಮತ್ತೆ ಚುನಾವಣೆಗೆ ಕಣಕ್ಕಿಳಿಯುವಂತೆ ಒತ್ತಾಯಿಸಿದ್ದಾರೆ ಎಂದು ಹಾಲಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ಮಾತ್ರವಲ್ಲ. ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳ ಪಕ್ಷದ ಮುಖಂಡರು ಒತ್ತಾಯ ಮಾಡಿದ್ದಾರೆ. ಆದರೆ, ನಾನು ನನ್ನ ಸುದೀರ್ಘ ರಾಜಕೀಯ ಅನುಭವದಿಂದ ನನ್ನದೇ ಆದ ನಿರ್ಧಾರ ಕೈಗೊಂಡಿದ್ದೆ. ನನ್ನ ಅನುಭವವನ್ನು ಪಕ್ಷಕ್ಕೆ ಧಾರೆ ಎರೆಯಬೇಕು ಎಂಬ ಯೋಚನೆಯಿದೆ. ನೋಡೋಣ ಏನಾಗುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡಿರುವುದೇ ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲ್ಲಲು ಕಾರಣ: ಡಿ.ವಿ. ಸದಾನಂದ ಗೌಡ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಅವರು ಬುಧವಾರ ಸದಾನಂದಗೌಡರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು.