ಪ್ರಧಾನಮಂತ್ರಿ ನರೇಂದ್ರ ಮೋದಿ ಸದ್ಯದಲ್ಲೇ ಕಾರವಾರ, ಅಂಕೋಲಾ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದಾರೆ ಎಂದು ಶಾಸಕಿ ರೂಪಾಲಿ ನಾಯ್ಕ ತಿಳಿಸಿದ್ದಾರೆ.

ಕಾರವಾರ (ಏ.21) : ಪ್ರಧಾನಮಂತ್ರಿ ನರೇಂದ್ರ ಮೋದಿ ಸದ್ಯದಲ್ಲೇ ಕಾರವಾರ, ಅಂಕೋಲಾ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದಾರೆ ಎಂದು ಶಾಸಕಿ ರೂಪಾಲಿ ನಾಯ್ಕ ತಿಳಿಸಿದ್ದಾರೆ.

ಏ. 30ರಿಂದ ಮೇ 3ರ ಒಳಗಡೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಈ ಹಿನ್ನೆಲೆ ಪ್ರಧಾನಮಂತ್ರಿ ಅವರ ಸಭೆಗಾಗಿ ಕಾರವಾರ ಹಾಗೂ ಅಂಕೋಲಾ ನಡುವಣ ಹಟ್ಟಿಕೇರಿ ಟೋಲ್‌ ಸಮೀಪದಲ್ಲಿ ಗುರುವಾರ ಸ್ಥಳ ಪರಿಶೀಲನೆ ನಡೆಸಲಾಗಿದೆ.

ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯ್ಕ, ವಿಧಾನ ಪರಿಷತ್‌ ಸದಸ್ಯ ಗಣಪತಿ ಉಳ್ವೇಕರ, ಪಕ್ಷದ ರಾಜ್ಯ ಹಾಗೂ ಜಿಲ್ಲೆಯ ಪದಾಧಿಕಾರಿಗಳು ಮತ್ತಿತರರು ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಹಾಜರಿದ್ದರು.

ಬದಲಾದ ಅಭ್ಯರ್ಥಿ ಬೆನ್ನಲ್ಲೇ ಶಿಗ್ಗಾವಿ ಕಾಂಗ್ರೆಸ್ಸಿನಲ್ಲಿ ಬಂಡಾಯ!

ಮೋದಿ ಆಗಮನ: ಬಿಜೆಪಿ ಪಾಳಯದಲ್ಲಿ ಸಂಚಲನ:

ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ರಾರ‍ಯಲಿ ನಡೆಸಲಿದ್ದಾರೆ ಎನ್ನುವುದು ಇಡೀ ಜಿಲ್ಲೆಯ ಬಿಜೆಪಿ ಪಾಳಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಮೋದಿ(Narendra Modi) ಕಾರ್ಯಕ್ರಮದ ದಿನಾಂಕ ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲ. ಏ. 30ರಿಂದ ಮೇ 3ರೊಳಗೆ ಕಾರ್ಯಕ್ರಮ ನಡæಸಲು ತಯಾರಿ ನಡæಸಲಾಗುತ್ತಿದæ. ಅಂಕೋಲಾ ತಾಲೂಕಿನ ಹಟ್ಟಿಕೇರಿ ಬಳಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ನರೇಂದ್ರ ಮೋದಿ ಅಂಕೋಲಾದಲ್ಲಿ ಸಭೆ ನಡೆಸಿದ್ದಲ್ಲಿ ಅದು ಇಡೀ ಜಿಲ್ಲೆಯ ಎಲ್ಲ ಆರೂ ಬಿಜೆಪಿ ಅಭ್ಯರ್ಥಿಗಳಿಗೆ ಬೂಸ್ಟರ್‌ ಡೋಸ್‌ನಂತೆ ಆಗಲಿದೆ. ಅದರಲ್ಲೂ ಕಾರವಾರ ಅಂಕೋಲಾ ವಿಧಾನಸಭೆ ಕ್ಷೇತ್ರದ ಬಿಜಿಪಿ ಅಭ್ಯರ್ಥಿ ರೂಪಾಲಿ ನಾಯ್ಕ ಅವರಿಗೆ ಮತ್ತಷ್ಟುಬಲ ಬಂದಂತಾಗಲಿದೆ. ಜಿಲ್ಲೆಯ ಎಲ್ಲ ಆರೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳು ಈಗ ಮೋದಿ ಆಗಮನದ ನಿರೀಕ್ಷೆಯಲ್ಲಿದ್ದಾರೆ.

ಇನ್ನು ಎಲ್ಲ ಪಕ್ಷಗಳ ಅಭ್ಯರ್ಥಿಗಳು ಹಳ್ಳಿ ಹಳ್ಳಿಗೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ಬಿಸಿಲ ಬೇಗೆಯ ನಡುವೆಯೂ ಅಬ್ಬರದ ಪ್ರಚಾರ ಆರಂಭವಾಗಿದೆ. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳ ರಾಜ್ಯ ನಾಯಕರು ಇನ್ನೊಂದು ಸುತ್ತಿನ ಪ್ರಚಾರ ನಡೆಸಲು ಜಿಲ್ಲೆಗೆ ಆಗಮಿಸಲಿದ್ದಾರೆ.

ಪ್ರಚಾರದ ಅಬ್ಬರ ಶುರು:

ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಗಿದಿದೆ. ಈಗ ಪ್ರಚಾರದ ಅಬ್ಬರ ಶುರುವಾಗಿದೆ. ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಪ್ರಚಾರದಲ್ಲಿ ಮುಂಚೂಣಿಯಲ್ಲಿವೆ. ಪಕ್ಷೇತರರೂ ಕೂಡ ಪ್ರಚಾರದಲ್ಲಿ ತೊಡಗಿದ್ದಾರೆ. ಚುನಾವಣೆ ಘೋಷಣೆಗೆ ಮುನ್ನವೇ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ರಾಜ್ಯ, ರಾಷ್ಟ್ರೀಯ ನಾಯಕರು ಜಿಲ್ಲೆಯಲ್ಲಿ ಒಂದು ಸುತ್ತಿನ ಪ್ರಚಾರ ನಡೆಸಿದ್ದರು.

ಚುನಾವಣೆ ಘೋಷಣೆಯಾದ ತರುವಾಯ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಳಿಯಾಳಕ್ಕೆ ಆಗಮಿಸಿ ಕಾಂಗ್ರೆಸ್‌ ಅಭ್ಯರ್ಥಿ ಆರ್‌.ವಿ. ದೇಶಪಾಂಡೆ ಪರ ಪ್ರಚಾರ ನಡೆಸಿದ್ದಾರೆ.

ಇನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಜೋಯಿಡಾಕ್ಕೆ ಆಗಮಿಸಿ ಜೆಡಿಎಸ್‌ ಅಭ್ಯರ್ಥಿ ಎಸ್‌.ಎಲ್‌. ಘೋಟ್ನೇಕರ್‌ ಪರವಾಗಿ ಪ್ರಚಾರ ನಡೆಸಿದ್ದಾರೆ. ಇದಕ್ಕೂ ಮುನ್ನ ಅವರ ಕುಮಟಾ ಹಾಗೂ ಹೊನ್ನಾವರದಲ್ಲಿ ಪಕ್ಷದ ಅಭ್ಯರ್ಥಿ ಸೂರಜ ನಾಯ್ಕ ಸೋನಿ ಪರವಾಗಿ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.

ಬಿಜೆಪಿ ದುರಾಡಳಿತಕ್ಕೆ ಜನರು ಬೇಸತ್ತಿದ್ದಾರೆ, ಈ ಸಲ 40 ಸೀಟ್‌ಗಳನ್ನೂ ಗೆಲ್ಲಲ್ಲ: ರೋಹನ್ ಗುಪ್ತಾ

ಸಚಿವ ಮುರುಗೇಶ ನಿರಾಣಿ, ಕೋಟ ಶ್ರೀನಿವಾಸ ಪೂಜಾರಿ, ಈಗ ಕಾಂಗ್ರೆಸ್‌ ಪಾಳೆಯ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಈ ಹಿಂದೆ ಜಿಲ್ಲೆಯಲ್ಲಿ ರಾರ‍ಯಲಿ ನಡೆಸಿದ್ದರು.