ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಿಂಗಳಾಂತ್ಯಕ್ಕೆ ಎರಡು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. 

ಬೆಂಗಳೂರು (ಏ.24) : ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಿಂಗಳಾಂತ್ಯಕ್ಕೆ ಎರಡು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೇ 28 ಮತ್ತು 29ರಂದು ರಾಜ್ಯದಲ್ಲಿ ಸಂಚರಿಸಲಿರುವ ನರೇಂದ್ರ ಮೋದಿ ಅವರು ಉತ್ತರ ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. 28ರಂದು ದಾವಣಗೆರೆ, ಉತ್ತರ ಕನ್ನಡ ಮತ್ತು ಬೆಳಗಾವಿಯಲ್ಲಿ ಬಹಿರಂಗ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಂದು ಬೆಳಗಾವಿಯಲ್ಲಿ ವಾಸ್ತವ್ಯ ಹೂಡಲಿದ್ದು, ಮರು ದಿನ 29ರಂದು ಕಲಬುರಗಿ, ಬಳ್ಳಾರಿ, ರಾಯಚೂರು ಅಥವಾ ಕೊಪ್ಪಳದಲ್ಲಿ ಆಯೋಜಿಸುವ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಕರ್ನಾಟಕದ ಮುಸ್ಲಿಂ ಮೀಸಲಾತಿಗೆ ಬಗ್ಗೆ ಕೇಂದ್ರ ಹಿಂದುಳಿದ ಆಯೋಗ ಕಿಡಿ

ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಎರಡು ದಿನಗಳಲ್ಲಿ ಆ ಕ್ಷೇತ್ರಗಳ ಅಭ್ಯರ್ಥಿಗಳ ಪರ 6 ರ್‍ಯಾಲಿ ನಡೆಸಲಿದ್ದಾರೆ.

ಮೊದಲ ಹಂತದ ಪ್ರಚಾರದ ವೇಳೆ ಮೋದಿ ಅವರು ಬೆಂಗಳೂರು, ಮೈಸೂರು, ಚಿಕ್ಕಬಳ್ಳಾಪುರ, ಮಂಗಳೂರಿಗೆ ಭೇಟಿ ನೀಡಿದ್ದರು. 2ನೇ ಹಂತದ ಚುನಾವಣೆ ನಡೆವ ಶಿವಮೊಗ್ಗಕ್ಕೂ ಬಂದಿದ್ದರು.