ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷರಾಗಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕೆಪಿಸಿಸಿ ಸಂವಹನ ಮತ್ತು ಸಾಮಾಜಿಕ ಜಾಲತಾಣದ ವಿಭಾಗದ ಸಹ ಅಧ್ಯಕ್ಷ ಸ್ಥಾನಕ್ಕೆ ಮನ್ಸೂರ್ ಅಲಿ ಖಾನ್
ಬೆಂಗಳೂರು (ಜು.8): ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷರಾಗಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಉಪಾಧ್ಯಕ್ಷರನ್ನಾಗಿ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರನ್ನು ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ.
ಕೆಪಿಸಿಸಿ ಸಂವಹನ ಮತ್ತು ಸಾಮಾಜಿಕ ಜಾಲತಾಣದ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ, ಸಹ ಅಧ್ಯಕ್ಷ ಸ್ಥಾನಕ್ಕೆ ಮನ್ಸೂರ್ ಅಲಿ ಖಾನ್, ಮುಖ್ಯ ವಕ್ತಾರ ಹಾಗೂ ಸಂಚಾಲಕರನ್ನಾಗಿ ಪರಿಷತ್ ಸದಸ್ಯ ನಾಗರಾಜ್ ಯಾದವ್‌ರನ್ನು ನೇಮಿಸಲಾಗಿದೆ.
ಸಿದ್ದರಾಮೋತ್ಸವ ಮಾಡಲು ಹೊರಟಿರುವುದು ಕಾಂಗ್ರೆಸ್‌ನ ಶಿಖಂಡಿತನ: KS ESHWARAPPA
ಉಳಿದಂತೆ ಉಪಾಧ್ಯಕ್ಷರಾಗಿ ದಿನೇಶ್ ಗೂಳಿಗೌಡ, ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಅವರನ್ನು ನೇಮಿಸಲಾಗಿದೆ. ವಕ್ತಾರರು ಹಾಗೂ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿಗಳನ್ನಾಗಿ ಲಾವಣ್ಯ ಬಲ್ಲಾಳ್, ಕವಿತಾ ರೆಡ್ಡಿ, ಡಾ. ನಾಗಲಕ್ಷ್ಮೇ, ಐಶ್ವರ್ಯ ಮಹದೇವ್ ಅವರನ್ನು ನೇಮಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
