ಬಿಜೆಪಿಗೆ ಪ್ರಿಯಾಂಕ್ ಖರ್ಗೆಯೇ ಟಾರ್ಗೆಟ್: ಡಾ.ಮೂರ್ತಿ ಕಿಡಿ
ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಪಕ್ಷದಲ್ಲಿರುವ ದಲಿತ ನಾಯಕರು ಬೆಳೆಯುವುದು ಇಷ್ಟವಿಲ್ಲ. ಈ ಕಾರಣಕ್ಕೆ ಸುಖಾಸುಮ್ಮನೆ ಕಾಂಗ್ರೆಸ್ ಪಕ್ಷದ ದಲಿತ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಬಿಟ್ ಕಾಯಿನ್, ಪಿಎಸ್‌ಐ ಪರೀಕ್ಷಾ ಹಗರಣ ಸೇರಿದಂತೆ ಹಲವು ಭ್ರಷ್ಟಾಚಾರದ ಹಗರಣವನ್ನು ಬಯಲಿಗೆಳೆದ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಬಿಜೆಪಿ ಟಾರ್ಗೆಟ್ ಮಾಡಿದ್ದು, ಅವರ ವಿರುದ್ದ ಇಲ್ಲಸಲ್ಲದ ಸಂಚು ರೂಪಿಸಿದೆ ಎಂದು ಕಿಡಿಕಾರಿದ ಕಾಂಗ್ರೆಸ್ ಮುಖಂಡ ಡಾ.ಮೂರ್ತಿ
ಮಂಡ್ಯ(ಜ.05): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರ ನಡೆ ಖಂಡಿಸಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಶನಿವಾರ ನಗರದಲ್ಲಿ ತಮಟೆ ಚಳವಳಿ ನಡೆಸಲಾಯಿತು.
ನಗರದ ಜಯಚಾಮರಾಜೇಂದ್ರ ವೃತ್ತದ ಬಳಿ ಸೇರಿದ ನೂರಾರು ಮಂದಿ ವಿವಿಧ ಪ್ರಗತಿಪರ ಸಂಘಟನೆ ಕಾರ್ಯಕರ್ತರು ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಮುಖಂಡ ಡಾ.ಮೂರ್ತಿ ಮಾತನಾಡಿ, ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಪಕ್ಷದಲ್ಲಿರುವ ದಲಿತ ನಾಯಕರು ಬೆಳೆಯುವುದು ಇಷ್ಟವಿಲ್ಲ. ಈ ಕಾರಣಕ್ಕೆ ಸುಖಾಸುಮ್ಮನೆ ಕಾಂಗ್ರೆಸ್ ಪಕ್ಷದ ದಲಿತ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಬಿಟ್ ಕಾಯಿನ್, ಪಿಎಸ್‌ಐ ಪರೀಕ್ಷಾ ಹಗರಣ ಸೇರಿದಂತೆ ಹಲವು ಭ್ರಷ್ಟಾಚಾರದ ಹಗರಣವನ್ನು ಬಯಲಿಗೆಳೆದ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಬಿಜೆಪಿ ಟಾರ್ಗೆಟ್ ಮಾಡಿದ್ದು, ಅವರ ವಿರುದ್ದ ಇಲ್ಲಸಲ್ಲದ ಸಂಚು ರೂಪಿಸಿದೆ ಎಂದು ಕಿಡಿಕಾರಿದರು.
ಶ್ರೀರಂಗಪಟ್ಟಣ: 70ಕ್ಕೂ ಹೆಚ್ಚು ಆರ್‌ಟಿಸಿಯಲ್ಲಿ ವಕ್ಫ್ ಹೆಸರು, ಸಾರ್ವಜನಿಕರು, ರೈತರಲ್ಲಿ ಆತಂಕ!
ಐಟಿಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವರಾಗಿ ಭ್ರಷ್ಟಾ ಚಾರ ಮುಕ್ತ ಆಡಳಿತ ನಡೆಸುತ್ತಿರುವ ಪ್ರಿಯಾಂಕ್ ಖರ್ಗೆಯವರ ಶ್ರೇಯಸ್ಸನ್ನು ಬಿಜೆಪಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಐಟಿಬಿಟಿ ಇಲಾಖೆಗೆ ಅಂತಾರಾಷ್ಟ್ರೀಯ ವಿದೇಶಿ ಬಂಡವಾಳ ಆಕರ್ಷಿಸುವ ಸಲುವಾಗಿ ಜೊತೆಗೆ ರಾಜ್ಯದ ನಿರುದ್ಯೋಗ ಸಮಸ್ಯೆ ನಿವಾರಿ ಸಲು ಹಗಲಿರುಳು ಶ್ರಮಿಸುತ್ತಿರುವ ಪ್ರಿಯಾಂಕ್ ವಿರುದ್ಧ ಬಿಜೆಪಿ ಕೋಮುವಾದದ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ ಅವರು ನಿತ್ಯವೂ ಪ್ರಿಯಾಂಕ್ ಖರ್ಗೆ ಜಪ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದೂ ವರೆ ವರ್ಷ ಕಳೆದಿದೆ. ಸರ್ಕಾರದಿಂದ ಹಲವು ಜನಪ್ರಿಯ ಕಾರ್ಯಕ್ರಮಗಳು ಜಾರಿಯಾಗಿವೆ. ಬಿಜೆಪಿ ವಿರೋಧ ಪಕ್ಷವಾಗಿದ್ದುಕೊಂಡು ಜನರ ನೋವುಗಳನ್ನು ಅರಿತು ಒಂದೇ ಒಂದು ಒಳ್ಳೆಯ ಕೆಲಸವನ್ನು ಮಾಡಿಲ್ಲ. ಕೇವಲ ಕಾಂಗ್ರೆಸ್ ನಾಯಕರ ತೇಜೋವಧೆ ಮಾಡುವುದು, ದಲಿತ ಮುಖಂಡರ ವಿರುದ್ಧ ಸಂಚು ರೂಪಿಸುವುದೇ ಇವರ ಕೆಲಸವಾಗಿದೆ ಎಂದು ಕಿಡಿಕಾರಿದರು.
ಗುತ್ತಿಗೆದಾರ ಸಚಿನ್ ಪಾಂಚಾಳ್ ಬರೆದಿರುವ ಡೆತ್ ನೋಟಲ್ಲಿ ರಾಜು ಕಪನೂರ್‌ಹಾಗೂ ಅವರ ಸೋದರ ಸಂಬಂಧಿಗಳ ಹೆಸರು ಮಾತ್ರ ಉಲ್ಲೇಖವಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ, ಬಿಜೆಪಿ ಕಾರ್ಯಕರ್ತರು ಪ್ರಿಯಾಂಕ್ ಖರ್ಗೆ ಅವರೊಂದಿಗೆ ಕಾಣಿಸಿಕೊಂಡಿರುವ ರಾಜು ಕಪನೂರ್‌ಅವರ ಫೋಟೋಗಳನ್ನು ಮುಂದಿಟ್ಟುಕೊಂಡು ಉದ್ದೇಶಪೂರ್ವಕವಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
ಈ ಸರ್ಕಾರ ಸತ್ತು ಹೋಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ
ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಅವರ ಪಾತ್ರ ಏನೂ ಇಲ್ಲ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಇದರ ಬಗ್ಗೆ ಸಿಐಡಿ ತನಿಖೆಯಾಗಿ ಸತ್ಯಾಸತ್ಯತೆ ಹೊರಬರಲಿ. ಇಡೀ ಸಮುದಾಯ ಹಾಗೂ ಕಾಂಗ್ರೆಸ್ ಪಕ್ಷ ಪ್ರಿಯಾಂಕ್ ಖರ್ಗೆ ಪರ ಇದೆ. ಕಳಂಕ ರಹಿತ ಖರ್ಗೆಯವರ ವಿರುದ್ಧ ಚ್ಯುತಿ ತರುವ ಕುತಂತ್ರ ಕೆಲಸ ಹೀಗೆ ಮುಂದುವರೆದರೆ ರಾಜ್ಯದ ಮೂಲೆ ಮೂಲೆಯಲ್ಲಿಯೂ ಬಿಜೆಪಿ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಪ್ರಗತಿಪರ ಮುಖಂಡರಾದ ಸುಂಡಹಳ್ಳಿ ಮಂಜುನಾಥ್, ದಸಂಸ ಕೃಷ್ಣ, ಚಂದಗಾಲು ವಿಜಯಕುಮಾರ್, ಚಿನಕುರಳಿ ರಮೇಶ್, ಕೆಪಿಸಿಸಿ ಉಪಾಧ್ಯಕ್ಷ ರಮೇಶ್, ಬಸವರಾಜು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್, ನಾಗರಾಝ್, ಶ್ರೀಧರ್, ಎಂ.ವಿ.ಕೃಷ್ಣ, ಬೇವಿನಹಳ್ಳಿ ಕನಕಮ್ಮ, ಅಮ್ಮದ್ ಪಾಷ, ಜಯರಾಂ ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರಿದ್ದರು.