ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾತನಾಡಿ, ಹಲವು ಕಾಂಗ್ರೆಸ್ಸಿಗರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಮಧ್ಯಪ್ರದೇಶದ ಕಮಲನಾಥ್‌ ಅವರು ಬಿಜೆಪಿಗೆ ಸೇರಲಿದ್ದಾರೆ. ಅಂತೆಯೇ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರು ಸಹ ಬಿಜೆಪಿ ಬರುತ್ತಾರೆ ಎಂಬ ಮಾತುಗಳು ಕೇಳಿಬಂದಿವೆ ಎಂದರು.  ಆಗ ‘ನಮ್ಮ ಕುಟುಂಬದ ಹೆಣ ಕೂಡ ಬಿಜೆಪಿ ಕಡೆ ಹೋಗಲ್ಲ’ ಎಂದು ಬಿಜೆಪಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ವಿಧಾನಸಭೆ (ಫೆ.23): ‘ನಮ್ಮ ಕುಟುಂಬದ ಹೆಣ ಕೂಡ ಬಿಜೆಪಿ ಕಡೆ ಹೋಗಲ್ಲ’ ಎಂದು ಬಿಜೆಪಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತೀಕ್ಷ್ಣವಾಗಿ ಹೇಳಿದ್ದಾರೆ. ಗುರುವಾರ ಪ್ರತಿಪಕ್ಷದ ಉಪನಾಯಕ ಅರವಿಂದ್‌ ಬೆಲ್ಲದ್‌ ಅವರು ಬಜೆಟ್‌ ಮೇಲಿನ ಚರ್ಚೆ ಮಾಡುತ್ತಿದ್ದ ವೇಳೆ ಮಧ್ಯೆ ಪ್ರವೇಶಿಸಿದ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್‌ ಯತ್ನಾಳ್‌, ಹಲವು ಕಾಂಗ್ರೆಸ್ಸಿಗರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಮಧ್ಯಪ್ರದೇಶದ ಕಮಲನಾಥ್‌ ಅವರು ಬಿಜೆಪಿಗೆ ಸೇರಲಿದ್ದಾರೆ. ಅಂತೆಯೇ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರು ಸಹ ಬಿಜೆಪಿ ಬರುತ್ತಾರೆ ಎಂಬ ಮಾತುಗಳು ಕೇಳಿಬಂದಿವೆ ಎಂದರು. 

ಮಂಡ್ಯ, ಹಾಸನ ಕ್ಷೇತ್ರ ಕೇಳುವ ಅವಕಾಶ ಯಾರಿಗೂ ಇಲ್ಲ ಜೆಡಿಎಸ್ ಅಭ್ಯರ್ಥಿಯೇ ಕಣಕ್ಕೆ : ಸಿಎಸ್ ಪುಟ್ಟರಾಜು

ಯತ್ನಾಳ್‌ ಅವರ ಈ ಮಾತಿನಿಂದ ಕೋಪಗೊಂಡ ಪ್ರಿಯಾಂಕ್‌, ‘ನಮ್ಮ ಕುಟುಂಬದ ಹೆಣನೂ ಹೋಗಲ್ಲ. ನಿಮ್ಮ ರಕ್ತದಲ್ಲಿ ಸಂವಿಧಾನ ಇಲ್ಲ. ನಮ್ಮ ರಕ್ತದಲ್ಲಿ ಆರ್‌ಎಸ್‌ಎಸ್‌ ಇಲ್ಲ’ ಎಂದು ತಿರುಗೇಟು ನೀಡಿದರು

ಆಗ ಬಸನಗೌಡ ಪಾಟೀಲ್‌ ಯತ್ನಾಳ್‌, ಸಂವಿಧಾನವನ್ನು ಸಮರ್ಪಕವಾಗಿ ಜಾರಿ ಮಾಡುತ್ತಿರುವುದು ನಾವೇ ಎಂದು ಸಮರ್ಥಿಸಿಕೊಂಡರು.

ಪ್ರಿಯಾಂಕ್ ಖರ್ಗೆ ಮಾತನಾಡಿ, ನೀವು ಹೇಗೆ ಸಂವಿಧಾನ ಸರಿಯಾಗಿ ಜಾರಿ ಮಾಡಿದ್ದೀರಾ? ಒಂದು ಧರ್ಮಕ್ಕೆ ಮಾತ್ರ ಆದ್ಯತೆ ನೀಡುವುದು ಸಂವಿಧಾನ ಬದ್ಧವೇ? ಎಂದು ಪ್ರಶ್ನಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ಯು.ಟಿ.ಖಾದರ್‌, ಪದೇ ಪದೇ ಈ ರೀತಿ ಮಧ್ಯೆ ಪ್ರವೇಶಿಸಿ ಚರ್ಚೆ ಮಾಡುವುದು ಬೇಡ ಎಂದು ಪ್ರಿಯಾಂಕ್‌ ಖರ್ಗೆ ಮತ್ತು ಯತ್ನಾಳ್‌ ಮಾತುಗಳಿಗೆ ತಡೆ ಹಾಕಿ ಬಜೆಟ್ ಮೇಲಿನ ಚರ್ಚೆ ಮುಂದುವರಿಸಿದರು.