ಮೇ. 6ರಂದು ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ ಅವರು ಸಹ ರಾಜ್ಯಕ್ಕೆ ಆಗಮಿಸಲಿದ್ದು ಹುಬ್ಬಳ್ಳಿಯಲ್ಲಿ ಪಕ್ಷದಿಂದ ಆಯೋಜಿಸಿರುವ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮತಯಾಚಿಸಲಿದ್ದಾರೆ.

ಬೆಂಗಳೂರು(ಮೇ.05):  ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳ ಪ್ರಚಾರ ಚುರುಕಾಗಿದ್ದು ಕಾಂಗ್ರೆಸ್‌ ರಾಷ್ಟ್ರೀಯ ನಾಯಕರಾದ ಪ್ರಿಯಾಂಕಾ ಗಾಂಧಿ ಮೇ 6 ಮತ್ತು ರಾಹುಲ್‌ ಗಾಂಧಿ 7 ಮತ್ತು 8ರಂದು ರಾಜಧಾನಿಯಲ್ಲಿ ರೋಡ್‌ ಶೋ ನಡೆಸಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪಕ್ಷದ ಮಾಹಿತಿಯ ಪ್ರಕಾರ, ಪ್ರಿಯಾಂಕಾ ಗಾಂಧಿ ಅವರು ಶನಿವಾರ ನಗರದ ಕೇಂದ್ರ ಭಾಗವಾದ ಗಾಂಧಿ ನಗರ ಮತ್ತು ವಿಜಯನಗರ ವಿಧಾನ ಸಭಾ ಕ್ಷೇತ್ರಗಳಲ್ಲಿ ರೋಡ್‌ ಶೋ ನಡೆಸಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.

ಬಿಜೆಪಿಗೆ ಕೇವಲ 40 ಸೀಟು ಮಾತ್ರ ನೀಡಿ: ರಾಹುಲ್‌ ಗಾಂಧಿ

ರಾಹುಲ್‌ ಗಾಂಧಿ ಅವರು ಭಾನುವಾರ ಹಾಗೂ ಸೋಮವಾರ ನಗರದ ಹೊರವಲಯದ ಹಲವು ಕ್ಷೇತ್ರಗಳಲ್ಲಿ ರೋಡ್‌ ಶೋ ನಡೆಸಲಿದ್ದು ಯಾವ್ಯಾವ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಬೇಕು ಎಂಬುದು ಇನ್ನೂ ಅಂತಿಮವಾಗಿಲ್ಲ. ಮತ್ತೊಂದೆಡೆ ಮೇ. 6ರಂದು ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ ಅವರು ಸಹ ರಾಜ್ಯಕ್ಕೆ ಆಗಮಿಸಲಿದ್ದು ಹುಬ್ಬಳ್ಳಿಯಲ್ಲಿ ಪಕ್ಷದಿಂದ ಆಯೋಜಿಸಿರುವ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮತಯಾಚಿಸಲಿದ್ದಾರೆ.