Asianet Suvarna News Asianet Suvarna News

ಕಾಂಗ್ರೆಸ್‌ನಿಂದ ಮಾತ್ರ ಸರ್ವಜನಾಂಗದ ಏಳಿಗೆ: ರಾಜಾ ವೆಂಕಟಪ್ಪ ನಾಯಕ

ಕ್ಷೇತ್ರದ ಪ್ರತಿಯೊಂದು ಗ್ರಾಮಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಅಧಿಕಾರದಲ್ಲಿದ್ದಾಗ, ಇಲ್ಲದಾಗಲೂ ಸದಾ ರೈತ​ರಪರ ಇದ್ದು, ರೈತರ ಬೆಳೆಗಳಿಗೆ ನೀರು ತಲುಪಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಮುಂದೆಯೂ ಮಾಡುತ್ತೇನೆ. ಹೀಗಾಗಿ ಮತ್ತೊಮ್ಮೆ ನಿಮ್ಮ ಸೇವೆ ಮಾಡಲು ನನಗೆ ಆರ್ಶೀವದಿಸಬೇಕು ಎಂದು ಮನವಿ ಮಾಡಿದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ. 

Prosperity of all Races Only by Congress Says Raja Venkatappa Naik grg
Author
First Published Mar 18, 2023, 1:14 PM IST

ಹುಣಸಗಿ(ಮಾ.18):  ಸರ್ವಜನಾಂಗದ ಏಳಿಗೆ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯವಾಗುತ್ತದೆ ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು. ತಾಲೂಕಿನ ಕುಪ್ಪಿ ಗ್ರಾಮದಲ್ಲಿ ಬಿಜೆಪಿ ತೊರೆದ ಅನೇಕ ಕಾರ್ಯಕರ್ತರನ್ನು ಕಾಂಗ್ರೆಸ್‌ಗೆ ಬರಮಾಡಿಕೊಂಡು ಮಾತನಾಡಿದ ಅವರು, ಕ್ಷೇತ್ರದ ಪ್ರತಿಯೊಂದು ಗ್ರಾಮಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಅಧಿಕಾರದಲ್ಲಿದ್ದಾಗ, ಇಲ್ಲದಾಗಲೂ ಸದಾ ರೈತ​ರಪರ ಇದ್ದು, ರೈತರ ಬೆಳೆಗಳಿಗೆ ನೀರು ತಲುಪಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಮುಂದೆಯೂ ಮಾಡುತ್ತೇನೆ. ಹೀಗಾಗಿ ಮತ್ತೊಮ್ಮೆ ನಿಮ್ಮ ಸೇವೆ ಮಾಡಲು ನನಗೆ ಆರ್ಶೀವದಿಸಬೇಕು ಎಂದು ಮನವಿ ಮಾಡಿದರು.

ಬ್ಲಾಕ್‌ ಕಾಂಗ್ರೆಸ್‌ ತಾಲೂಕಾಧ್ಯಕ್ಷ ಚಂದ್ರಶೇಖರ ದಂಡಿನ್‌ ಮಾತನಾಡಿ, ಬಿಜೆಪಿ ಪಕ್ಷದವರು ಹೇಳುವ ಸುಳ್ಳು ಭರವಸೆಗಳನ್ನು ನಂಬಬೇಡಿ. ಇಲ್ಲಿಯವರಿಗೂ ಅಭಿವೃದ್ಧಿ ಮಾಡದೆ, ಚುನಾವಣೆ ಹತ್ತಿರಲಿದ್ದಾಗ ಅಭಿವೃದ್ಧಿ ತೋರಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಸರಳ ಸಜ್ಜನಿಕೆಯ ರಾಜಾ ವೆಂಕಟಪ್ಪನಾಯಕ ಅವರನ್ನು ಬೆಂಬಲಿಸಬೇಕು ಎಂದರು.

ಯಾದಗಿರಿ: ಬಿಜೆಪಿಯ ಮಾಲಕರೆಡ್ಡಿ ಪುತ್ರಿಗೆ ಕಾಂಗ್ರೆಸ್‌ ಟಿಕೆಟ್‌ ಸಿಗುತ್ತಾ?

ಸುರಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿಮಾತನಾಡಿ, ಕುರುಬ ಜನಾಂಗದ ಮೂವರನ್ನು ಜಿಪಂ ಸದಸ್ಯರನ್ನಾಗಿ ಮಾಡಿದ ಕೀರ್ತಿ ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ ಅವರಿಗೆ ಸಲ್ಲುತ್ತದೆ. ಬಿಜೆಪಿಯಿಂದ ಯಾವುದೇ ಅಭಿವೃದ್ಧಿ ನೀರಿಕ್ಷಿಸಲು ಸಾಧ್ಯವಿಲ್ಲ. ಅದು ಏನಿದ್ದರೂ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. 2023ಕ್ಕೆ ಬಿಜೆಪಿ ಸೋಲು ಖಚಿತ ಎಂದರು.

ಕೆಪಿಸಿಸಿ ಸದಸ್ಯರಾದ ಸಿದ್ದಣ್ಣ ಸಾಹುಕಾರ ಮಲಗಲದಿನ್ನಿ, ಗುಂಡಪ್ಪ ಸೊಲ್ಲಾಪುರ, ಮಲ್ಲಣ್ಣ ಸಾಹುಕಾರ ಮುಧೋಳ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಬಾಪುಗೌಡ ಪಾಟೀಲ್‌, ವೆಂಕೋಬ ಸಾಹುಕಾರ, ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಮುದಿಗೌಡ ಹಣಮರೆಡ್ಡಿ, ಚೆನ್ನಯ್ಯಸ್ವಾಮಿ, ಕೋನಪ್ಪಗೌಡ ತೆಗ್ಗಿನಮನಿ, ಶಾಂತಗೌಡ ಮಾಲಿಪಾಟೀಲ್‌, ನಿಂಗನಾಯ್ಕ ರಾಠೋಡ, ಗೋಪಾಲ ದೊರೆ, ನಿಂಗನಗೌಡ ಬಿರಾದಾರ್‌ ಇತರರಿದ್ದರು.

Follow Us:
Download App:
  • android
  • ios