Asianet Suvarna News Asianet Suvarna News

ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯದ ವಿವಿಧೆಡೆ ಆಕ್ರೋಶ: ಆತ್ಮಹತ್ಯೆ ಬೆದರಿಕೆ ಹಾಕಿದ ಅಭಿಮಾನಿ

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಹಿರಿಯ ಶಾಸಕರೇ ವರಿಷ್ಠರ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜತೆಗೆ, ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. 

Protest in various parts of the state after cabinet expansion gvd
Author
First Published May 28, 2023, 8:14 AM IST

ಬೆಂಗಳೂರು (ಮೇ.28): ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಹಿರಿಯ ಶಾಸಕರೇ ವರಿಷ್ಠರ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜತೆಗೆ, ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಶಾಸಕರಾದ ಎಂ.ಕೃಷ್ಣಪ್ಪ, ಪ್ರಿಯಕೃಷ್ಣ ಅವರ ಬೆಂಬಲಿಗರು ಬೆಂಗಳೂರಿನಲ್ಲಿ ರಾಜಭವನದ ಹೊರಭಾಗದಲ್ಲಿ, ಟಿ.ಬಿ.ಜಯಚಂದ್ರ ಬೆಂಬಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದ ಎದುರು ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. 

ಇದೇ ವೇಳೆ, ಸಂಪುಟದಲ್ಲಿ ಹಾವೇರಿ ಜಿಲ್ಲೆಯಿಂದ ಯಾರಿಗೂ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರಗೊಂಡು ಶನಿವಾರ ನಡೆದ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಿಲ್ಲೆಯ ಐವರು ಶಾಸಕರು ಗೈರು ಹಾಜರಾಗುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಇದೇ ವೇಳೆ, ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಮಂಡ್ಯ ಜಿಲ್ಲೆ ಮಳವಳ್ಳಿಯ ಅನಂತರಾಂ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. 

ದ್ವೇಷದಿಂದ ಕಾಂಗ್ರೆಸ್‌ ಸರ್ಕಾರದ ಆಡಳಿತ ಆರಂಭ: ವಿಜಯೇಂದ್ರ

ಶಾಸಕ ತನ್ವೀರ್‌ ಸೇಠ್‌ಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಅವರ ಬೆಂಬಲಿಗರು ಮೈಸೂರಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಶಿವಮೊಗ್ಗದ ಬಿ.ಕೆ.ಸಂಗಮೇಶ್ವರ್‌, ಜೇವರ್ಗಿಯ ಡಾ.ಅಜಯ್‌ ಸಿಂಗ್‌, ಆಳಂದದ ಬಿ.ಆರ್‌.ಪಾಟೀಲರ ಬೆಂಬಲಿಗರಿಂದಲೂ ಸ್ವಕ್ಷೇತ್ರದಲ್ಲಿ ಪ್ರತಿಭಟನೆಗಳು ನಡೆದಿವೆ. ಶಾಸಕ ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಚಾಮರಾಜನಗರ ಹಾಗೂ ಕೊಳ್ಳೇಗಾಲಗಳಲ್ಲಿ ಉಪ್ಪಾರ ಸಮಾಜದ ನಾಯಕರು ಪ್ರತಿಭಟನೆ ನಡೆಸಿದರು.

ಆತ್ಮಹತ್ಯೆ ಬೆದರಿಕೆ ಹಾಕಿದ ಅಭಿಮಾನಿ: ಈ ಮಧ್ಯೆ, ‘ಶಾಸಕ ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡದಿದ್ದರೆ ಚಾಮರಾಜನಗರದ ಕಾಂಗ್ರೆಸ್‌ ಕಚೇರಿ ಅಥವಾ ಬೆಂಗಳೂರಿನ ಕೆಪಿಸಿಸಿ ಕಚೇರಿಯ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಅವರ ಅಭಿಮಾನಿ ನಲ್ಲೂರು ಮೋಳೆಯ ಚಂದ್ರಶೇಖರ್‌ ಎಂಬುವರು ಪತ್ರ ಬರೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಪತ್ರ ವೈರಲ್‌ ಆಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಾವೇರಿ ಶಾಸಕ ರುದ್ರಪ್ಪ ಲಮಾಣಿ, ‘ನನಗೆ ಸಂಪುಟದಲ್ಲಿ ಅವಕಾಶ ಸಿಗುವ ನಿರೀಕ್ಷೆಯಿತ್ತು. ಆದರೆ, ಕೊನೆ ಗಳಿಗೆಯಲ್ಲಿ ಕೈತಪ್ಪಿದೆ. 

ಶಿವರಾಮ ಕಾರಂತ ಲೇಔಟ್‌ ಭೂ ಪರಿಹಾರಕ್ಕೆ ಮನವಿ ಸಲ್ಲಿಕೆಗೆ ಜೂ.30ರ ಗಡುವು: ಬಿಡಿಎ

ಜಿಲ್ಲೆಯ ಯಾರಿಗೂ ಅವಕಾಶ ಕೊಡದಿರುವುದು ಬೇಸರ ಮೂಡಿಸಿದೆ. ನಮ್ಮಲ್ಲಿ ಯಾರೂ ಸಮರ್ಥರಿಲ್ಲ ಎಂಬ ಲೆಕ್ಕವೇ? ಅದಕ್ಕಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನಾವು ಯಾರೂ ಹೋಗಿಲ್ಲ’ ಎಂದರು. ನನ್ನ ಆತ್ಮಹತ್ಯೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ , ರಾಹುಲ್‌ಗಾಂಧಿ, ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಅವರೇ ಕಾರಣಕರ್ತರು. ನನ್ನ ಸಾವಿನ ನಂತರವೂ ಸಹ ನಮ್ಮ ಉಪ್ಪಾರ ಸಮಾಜ ನಿಮ್ಮ ಪಕ್ಷವನ್ನು ಬಿಟ್ಟು ಉಗ್ರ ಹೋರಾಟ ಮಾಡುತ್ತದೆ.

Follow Us:
Download App:
  • android
  • ios