ಮೋದಿ ರೋಡ್‌ ಶೋಗಾಗಿ ಪಿಯು ಪರೀಕ್ಷೆ ಮುಂದೂಡಿಕೆ: ಸಮಾವೇಶಕ್ಕೆ ವಿದ್ಯಾರ್ಥಿಗಳು

ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರಥಮ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಶಿವಮೊಗ್ಗದ ಮೋದಿ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆ ತರಲು ಸುತ್ತೋಲೆ ಹೊರಡಿಸಿದೆ. 

PUC Exam Postponed For PM Narendra Modi Road Show At Belagavi gvd

ಬೆಂಗಳೂರು (ಫೆ.27): ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರಥಮ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಶಿವಮೊಗ್ಗದ ಮೋದಿ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆ ತರಲು ಸುತ್ತೋಲೆ ಹೊರಡಿಸಿದೆ. ಇದಕ್ಕೆ ರಾಜ್ಯ ಕಾಂಗ್ರೆಸ್‌ ತೀವ್ರ ಟೀಕಾಪ್ರಹಾರ ನಡೆಸಿದೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಪ್ರಧಾನಮಂತ್ರಿ ನರೇಂದ್ರ ಮೋದಿ ಶೋಕಿಗಾಗಿ ವಿದ್ಯಾರ್ಥಿಗಳ ಭವಿಷ್ಯ ಬಲಿಕೊಡುವುದು ನಾಚಿಕೆಗೇಡಿನ ಸಂಗತಿ. ಬಸವರಾಜ ಬೊಮ್ಮಾಯಿ ಅವರೇ, ವಿದ್ಯಾರ್ಥಿಗಳೇನು ಬಿಜೆಪಿಯ ಕಾಲಾಳುಗಳೇ ಎಂದು ಕಿಡಿ ಕಾರಿದೆ.

‘ನರೇಂದ್ರ ಮೋದಿ ಹೇಳುವುದು ‘ಪರೀಕ್ಷಾ ಪೇ ಚರ್ಚಾ’ ಮಾಡುವುದು ‘ಪರೀಕ್ಷಾ ಮೇ ಆಕ್ರಮಣ್‌’. ಪ್ರಧಾನಮಂತ್ರಿಯ ರೋಡ್‌ ಶೋಗಾಗಿ ಪರೀಕ್ಷೆಗಳನ್ನು ಮುಂದೂಡಿರುವ ರಾಜ್ಯ ಬಿಜೆಪಿ ಸರ್ಕಾರ ವಿದ್ಯಾರ್ಥಿಗಳ ಬದುಕಿಗೆ ಕಲ್ಲು ಹಾಕಲು ಹೇಸುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ. ಮೋದಿಯ ಪ್ರಚಾರದ ಹಪಾಹಪಿತನಕ್ಕೆ ವಿದ್ಯಾರ್ಥಿಗಳ ಭವಿಷ್ಯ ಕಿತ್ತುಕೊಳ್ಳಲಾಗುತ್ತಿದೆ’ ಎಂದು ಟೀಕಿಸಿದೆ. ಶಿಕ್ಷಣವಿಲ್ಲದವರಿಗೆ ಶಿಕ್ಷಣದ ಮಹತ್ವ ಅರಿವಾಗುವುದಾದರೂ ವಿದ್ಯಾರ್ಥಿಗಳ ಭವಿಷ್ಯ ಬಲಿಕೊಟ್ಟು ಶೋಕಿ ನಡೆಸಲು ಹೊರಟಿರುವ ಬಸವರಾಜ ಬೊಮ್ಮಾಯಿ ಅವರೇ, ತಮಗೆ ಚುನಾವಣಾ ಪ್ರಚಾರ ಮುಖ್ಯವೇ? ವಿದ್ಯಾರ್ಥಿಗಳ ಭವಿಷ್ಯ ಮುಖ್ಯವೇ ಸ್ಪಷ್ಟಪಡಿಸಿ. ನರೇಂದ್ರ ಮೋದಿ ಅವರು ನಾ ಪಡುಂಗಾ, ನಾ ಪಡನೆದುಂಗಾ ಎನ್ನಲು ಹೊರಟಿದ್ದಾರೆಯೇ ಎಂದು ಪ್ರಶ್ನಿಸಿದೆ.

ಬೆಳ​ಗಾ​ವಿ​ಯಲ್ಲಿಂದು ಮೋದಿ 10.5 ಕಿ.ಮೀ. ರೋಡ್‌ ಶೋ: ವಿಧಾನಸಭೆ ಚುನಾವಣೆಗೆ ಪ್ರಧಾನಿ ರಣಕಹಳೆ

ನಾಚಿಕೆ ಆಗುವುದಿಲ್ಲವೇ?: ಗಾಂಪರ ಗುಂಪಾದ ಬಿಜೆಪಿಗೆ ತಿಳಿದಿರುವುದು ಕಮಿಷನ್‌ ಲೂಟಿಯೇ ಹೊರತು ಶಿಕ್ಷಣದ ಮಹತ್ವವಲ್ಲ. ಶಿವಮೊಗ್ಗದ ಪ್ರಧಾನಿ ಕಾರ್ಯಕ್ರಮದ ಕುರ್ಚಿ ತುಂಬಿಸಲು ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನು ಕರೆಸಲು ಆದೇಶಿಸಿದೆ. ಅಲ್ಲದೆ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಕಾಲೇಜು ಸಮವಸ್ತ್ರ ಧರಿಸಬಾರದು ಎಂದು ಹೇಳಿದೆ. ಪರೀಕ್ಷೆಯ ಆತಂಕದಲ್ಲಿರುವ ವಿದ್ಯಾರ್ಥಿಗಳನ್ನ ಖಾಲಿ ಕುರ್ಚಿ ತುಂಬಿಸಲು ಕರೆಸುವುದಕ್ಕೆ ನಾಚಿಕೆ ಎನಿಸುವುದಿಲ್ಲವೇ ಎಂದು ಕಿಡಿ ಕಾರಿದೆ. ಯಾವುದೇ ಕಾರಣಕ್ಕೂ ಸಮವಸ್ತ್ರ ಹಾಗೂ ಕಪ್ಪು ಬಟ್ಟೆಧರಿಸಬಾರದು ಎಂದಿರುವುದೇಕೆ? ವಿದ್ಯಾರ್ಥಿಗಳ ಗುರುತು ಸಿಕ್ಕರೆ ಮರ್ಯಾದೆ ಹೋಗುತ್ತದೆ ಎಂಬ ದುರಾಲೋಚನೆಯೇ ಎಂದು ಟೀಕಾಪ್ರಹಾರ ನಡೆಸಿದೆ.

ಗುತ್ತಿಗೆ ಕಾರ್ಮಿಕರಿಂದ ಪಾದಯಾತ್ರೆ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿವಿಗಾಗಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರು ಫೆ.27ರಂದು ಪ್ರಧಾನಿ ಮೋದಿ ಅವರ ಗಮನ ಸೆಳೆಯಲು ಕುಟುಂಬ ಸಮೇತ ಪಾದಯಾತ್ರೆ ನಡೆಸಲು ಸಿದ್ಧತೆ ಕೈಗೊಂಡಿದ್ದಾರೆ. ಬೆಳಗ್ಗೆ 6.30ಕ್ಕೆ ಕಾರ್ಖಾನೆ ಮುಂಭಾಗದಿಂದ ಪಾದಯಾತ್ರೆ ಆರಂಭಿಸುತ್ತಿದ್ದು, ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ವಿವಿಧ ಸಂಘ-ಸಂಸ್ಥೆಗಳು, ರಾಜಕೀಯ ಪಕ್ಷಗಳು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. 

ಇಂದು ಶಿವಮೊಗ್ಗ ಏರ್‌ಪೋರ್ಟ್‌ ಲೋಕಾರ್ಪಣೆ: ಬಿಎಸ್‌ವೈ 80ನೇ ಜನ್ಮದಿನದಂದೇ ಮೋದಿ ಉದ್ಘಾಟನೆ

ಈಗಾಗಲೇ ಫೆ.24ರಂದು ಕರೆ ನೀಡಲಾಗಿದ್ದ ಭದ್ರಾವತಿ ಬಂದ್‌ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಪಾದಯಾತ್ರೆ ಸಹ ಯಶಸ್ವಿ ಆಗುವ ಹುಮ್ಮಸ್ಸು ಗುತ್ತಿಗೆ ಕಾರ್ಮಿಕರು ಹೊಂದಿದ್ದಾರೆ. ಈ ಹಿಂದೆ ಗುತ್ತಿಗೆ ಕಾರ್ಮಿಕರು ಖುದ್ದಾಗಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಅವಕಾಶ ನೀಡುವಂತೆ ಜಿಲ್ಲಾಧಿಕಾರಿ ಅವ​ರಿಗೆ ಮನವಿ ಸಲ್ಲಿಸಿದ್ದರು. ಆದರೆ, ಇದಕ್ಕೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ಬೈಕ್‌ ರಾರ‍ಯಲಿ ಬದಲಿಗೆ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ. ಗುತ್ತಿಗೆ ಕಾರ್ಮಿಕರು ಪಾದಯಾತ್ರೆ ನಡೆಸಲು ನಿರ್ಧಸಿರುವುದರಿಂದ ಹೆಚ್ಚಿನ ಪೊಲೀಸ್‌ ಬಂದೋಬಸ್‌್ತ ಕೈಗೊಳ್ಳಲಾಗಿದೆ.

Latest Videos
Follow Us:
Download App:
  • android
  • ios