Asianet Suvarna News Asianet Suvarna News

ಸಿದ್ದರಾಮಯ್ಯ ಕ್ಷಮೆ ಕೇಳದಿದ್ದರೆ ತಕ್ಕ ಶಾಸ್ತಿ: ಚುನಾವಣಾ ಆಯೋಗಕ್ಕೂ ದೂರು

ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರಿಗಳು ಎಂಬ ಸಿದ್ದರಾಮಯ್ಯ ಹೇಳಿಕೆಯಿಂದ ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಧಕ್ಕೆ ತಂದಿದ್ದಾರೆ. ಕೂಡಲೇ ಅವರು ಕ್ಷಮೆ ಕೇಳಿದಿದ್ದರೆ ಅವರಿಗೆ ತಕ್ಕ ಪಾಠವನ್ನು ಕಲಿಸಬೇಕಾಗುತ್ತದೆ.

Punishment if Siddaramaiah does not apologize Complaint to Election Commission sat
Author
First Published Apr 23, 2023, 7:48 PM IST | Last Updated Apr 23, 2023, 7:48 PM IST

ಬೆಂಗಳೂರು (ಏ.23): ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರಿಗಳು ಎಂಬ ಸಿದ್ದರಾಮಯ್ಯ ಹೇಳಿಕೆಯಿಂದ ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಧಕ್ಕೆ ತಂದಿದ್ದಾರೆ. ಕೂಡಲೇ ಅವರು ಕ್ಷಮೆ ಕೇಳಿದಿದ್ದರೆ ಅವರಿಗೆ ತಕ್ಕ ಪಾಠವನ್ನು ಕಲಿಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ವಿರುದ್ಧ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿರುವ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ ಕಂಕಣವಾಡಿ ಅವರು, ರಾಜ್ಯದಲ್ಲಿ ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರಿಗಳು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆದರೆ, ಅವರ ಹೇಳಿಕೆಯಿಂದ ವೀರಶೈವ ಲಿಂಗಾಯತ ಸಮುದಾಯಕ್ಕೆ ದೊಡ್ಡ ಆಘಾತ ಉಂಟಾಗಿದೆ. ಈ ಹಿಂದೆ ವೀರಶೈವ ಲಿಂಗಾಯತ ಸಮುದಾಯಗಳನ್ನು ಒಡೆದು, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು. ಇದನ್ನು ನಾವು ಮರೆತಿಲ್ಲ ಎಂದು ಕಿರಿಕಾರಿದರು.

ಕಾಂಗ್ರೆಸ್‌ನ್ನ ನಿರ್ಮಾ ಸರ್ಫ್ ಹಾಕಿ ತೊಳೆದ ಸಿದ್ದರಾಮಯ್ಯ: ಮನೆಗೆ ಹೋಗೋದಷ್ಟೇ ಬಾಕಿ

ಲಿಂಗಾಯತರಿಗೆ ಮಹಾದ್ರೋಹ :  ಈಗ ಪುನಃ ರಾಜ್ಯದ ವಿಧಾನಸಭಾ ಚುನಾವಣಾ ಸಮಯದಲ್ಲಿ ನಿಮ್ಮ ಮನಸ್ಸಿನಲ್ಲಿರುವ ಭಾವನೆಗಳನ್ನು ಹೊರ ಹಾಕುತ್ತಿದ್ದೀರಿ. ಇದು ವೀರಶೈವ ಲಿಂಗಾಯತ ಸಮುದಾಯಕ್ಕೆ ಮಾಡಿದ ಬಹುದೊಡ್ಡ ದ್ರೋಹವಾಗಿದೆ. ನೀವು ಅಭ್ಯರ್ಥಿಯಾಗಿ ನಿಂತಿರೋ ವರುಣಾ ಕ್ಷೇತ್ರದಲ್ಲಿ ಸುಮಾರು 70 ಸಾವಿರಕ್ಕೂ ಹೆಚ್ಚು ಲಿಂಗಾಯತ ಮತಗಳಿವೆ. ಅಲ್ಲಿ ಮತಗಳನ್ನು ಸೆಳೆಯಬೇಕು. ಆದರೂ ಈ ರೀತಿಯ ಹೇಳಿಕೆಗಳಿಂದ ಲಿಂಗಾಯತರಿಗೆ ಮಹಾದ್ರೋಹ ಮಾಡ್ತಾ ಇದ್ದೀರಿ. ಈ ತಕ್ಷಣವೇ ಸಿದ್ದರಾಮಯ್ಯ ಅವರೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ. ಇದರಿಂದ ತಕ್ಕದಾದ ಪಾಠವನ್ನು ನೀವು ಕಲಿಯಬೇಕಾಗುತ್ತದೆ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ ಕಂಕಣವಾಡಿ ಎಚ್ಚರಿಕೆ ನೀಡಿದ್ದಾರೆ. 

ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ: ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರಿಗಳು ಎಂದು ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಲಿಂಗಾಯತ ಯುವ ವೇದಿಕೆಯ ಕಾನೂನು ಘಟಕದಿಂದ ದೂರು ಸಲ್ಲಿಕೆ ಮಾಡಲಾಗಿದೆ. ದೂರು ಸಲ್ಲಿಕೆ ಬಳಿಕ ಲಿಂಗಾಯತ ಯುವ ವೇದಿಕೆಯ ಮುಖಂಡ ಬಸವರಾಜ್ ಮಾತನಾಡಿ, ಸಿದ್ದರಾಮಯ್ಯನವರು ಕೇವಲ ಒಬ್ಬ ವ್ಯಕ್ತಿಯನ್ನ ನಿಂದನೆ ಮಾಡಿಲ್ಲ. ಇಡೀ ಲಿಂಗಾಯತ ಸಮುದಾಯವನ್ನ ನಿಂದಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆಗೂ ಮುನ್ನವೇ ಜೆಡಿಎಸ್‌ನ ಒಂದು ವಿಕೆಟ್ ಪತನ: ಕುಮಾರಸ್ವಾಮಿಗೆ ಶಾಕ್!

ಲಿಂಗಾಯತರ ತೇಜೋವಧೆ ಮಾಡಲಾಗಿದೆ: ರಾಜ್ಯದಲ್ಲಿ ಲಿಂಗಾಯತ ಸಿಎಂ ಭ್ರಷ್ಟಾಚಾರ ಅಂತ ಹೇಳಿಕೆ ನೀಡಿರೋದು ಸಮಂಜಸವಲ್ಲ. ನಾವು ಯಾವುದೇ ಪಕ್ಷದ ಪರವಾಗಿ ದೂರು ನೀಡಲು ಬಂದಿಲ್ಲ. ಇಲ್ಲಿ ಲಿಂಗಾಯತ ಸಮುದಾಯವನ್ನ ತೇಜೋವಧೆ ಮಾಡಿದ್ದಾರೆ ಎಂಬುದೇ ನಮ್ಮ ಆಕ್ರೋಶವಾಗಿದೆ. ಕೂಡಲೇ ಸಿದ್ದರಾಮಯ್ಯ ವಿರುದ್ಧ ಸೂಕ್ತ  ಕ್ರಮ ಕೈಗೊಳ್ಳುಬೇಕು. ಜೊತೆಗೆ ಸಿದ್ದರಾಮಯ್ಯ ಕ್ಷಮಯಾಚನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಏಪ್ರಿಲ್‌ 13 ರಿಂದ ಆರಂಭವಾಗಿದ್ದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಏಪ್ರಿಲ್‌ 21ರವರೆಗೆ ಪೂರ್ಣಗೊಂಡಿದೆ. ನಾಮಪತ್ರ ಹಿಂಪಡೆಯಲು ನಾಳೆ ಏಪ್ರಿಲ್‌ 24 ಕೊನೆಯ ದಿನವಾಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

 

Latest Videos
Follow Us:
Download App:
  • android
  • ios