ಕಟ್ಟಡ ಕಾರ್ಮಿಕರ ಮಕ್ಕಳಿಗೆ 71000 ರು.ನ ಲ್ಯಾಪ್‌ಟಾಪ್‌: ಸಚಿವ ಸಂತೋಷ್‌ ಲಾಡ್‌

ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್‌ ಖರೀದಿಗಾಗಿ ಇ-ಟೆಂಡರ್‌ ಕರೆದು ಅರ್ಹ ಸಂಸ್ಥೆಯನ್ನು ಆಯ್ಕೆ ಮಾಡಿ 7 ಸಾವಿರ ಲ್ಯಾಪ್‌ಟಾಪ್‌ಗಳನ್ನು ಖರೀದಿಸಿದ್ದು, ಪ್ರತಿ ಲ್ಯಾಪ್‌ಟಾಪ್‌ಗೆ 71,093 ಸಾವಿರದಂತೆ ಖರ್ಚು ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌.ಲಾಡ್‌ ತಿಳಿಸಿದ್ದಾರೆ. 

Purchase of laptops worth 71 thousand rupees for children of construction workers Says Minister Santosh Lad gvd

ವಿಧಾನ ಪರಿಷತ್ (ಫೆ.16): ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್‌ ಖರೀದಿಗಾಗಿ ಇ-ಟೆಂಡರ್‌ ಕರೆದು ಅರ್ಹ ಸಂಸ್ಥೆಯನ್ನು ಆಯ್ಕೆ ಮಾಡಿ 7 ಸಾವಿರ ಲ್ಯಾಪ್‌ಟಾಪ್‌ಗಳನ್ನು ಖರೀದಿಸಿದ್ದು, ಪ್ರತಿ ಲ್ಯಾಪ್‌ಟಾಪ್‌ಗೆ 71,093 ಸಾವಿರದಂತೆ ಖರ್ಚು ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌.ಲಾಡ್‌ ತಿಳಿಸಿದ್ದಾರೆ. 

ದಸ್ಯ ಡಾ.ತಳವಾರ್‌ ಸಾಬಣ್ಣ ಅವರ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿರುವ ಸಚಿವರು, ಕಾರ್ಮಿಕ ಇಲಾಖೆಯಲ್ಲಿ ಪ್ರಾದೇಶಿಕವಾರು 1400 ಲ್ಯಾಪ್‌ಟಾಪ್‌ನಂತೆ ಒಟ್ಟು 5 ಪ್ರಾದೇಶಿಕದಲ್ಲಿ 7 ಸಾವಿರ ಲ್ಯಾಪ್‌ಟಾಪ್‌ಗಳನ್ನು 2022-23ನೇ ಸಾಲಿನ ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ ಎಂದರು. ಇ-ಟೆಂಡರ್‌ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಸಂಸ್ಥೆಯು ಲ್ಯಾಪ್‌ಟಾಪ್‌ಗೆ ನಿಗದಿಪಡಿಸಿದ 71,093 ದರಕ್ಕಿಂತ ಕಡಿಮೆ ದರದಲ್ಲಿ ಅಂದರೆ, 71,046ರಂತೆ ಸರಬರಾಜು ಮಾಡಿದೆ ಎಂದು ಹೇಳಿದ್ದಾರೆ. 

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮಗಳ ಅನ್ವಯ ಮಂಡಳಿಯಲ್ಲಿ ಲ್ಯಾಪ್‌ಟಾಪ್‌ ಖರೀದಿಗಾಗಿ ಇ-ಟೆಂಡರ್‌ ಕರೆದು ಅರ್ಹ ಸಂಸ್ಥೆಯನ್ನು ಆಯ್ಕೆ ಮಾಡಿ ಲ್ಯಾಪ್‌ಟಾಪ್‌ಗಳನ್ನು ಪೂರೈಕೆ ಮಾಡಲಾಗಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಯಾವುದೇ ನಷ್ಟ ಉಂಟಾಗಿರುವುದಿಲ್ಲ. ಜೊತೆಗೆ ನೋಂದಾಯಿತ ಕಟ್ಟಡ ಕಾರ್ಮಿಕರ ಇಬ್ಬರು ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಒಂದನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ಕಲಿಗೆ ಭಾಗ್ಯದಡಿ ಶೈಕ್ಷಣಿಕ ಸಹಾಯಧನ ನೀಡಲಾಗುತ್ತಿದೆ. ಮಂಡಳಿ ಪ್ರಾರಂಭವಾದಾಗಿನಿಂದ ಈವರೆಗೆ ಒಟ್ಟು 21.77 ಲಕ್ಷ ವಿದ್ಯಾರ್ಥಿಗಳಿಗೆ 1,490.94 ಕೋಟಿಗಳಷ್ಟು ಶೈಕ್ಷಣಿಕ ಸಹಾಯ ಧನವನ್ನಾಗಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸೋಮಣ್ಣಗೆ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್‌ ನೀಡಿ: ಸಂಸದ ಬಸವರಾಜು

ಕಾರ್ಮಿಕರ ನಕಲಿ ಕಾರ್ಡ್‌ ಹಾವಳಿ ತಡೆಗೆ ಜಿಲ್ಲಾವಾರು ಕೇಂದ್ರ: ರಾಜ್ಯದಲ್ಲಿ ಕಾರ್ಮಿಕರ ನಕಲಿ ಕಾರ್ಡ್‌ಗಳ ಹಾವಳಿಗೆ ಕಡಿವಾಣ ಹಾಕಲು ಜಿಲ್ಲಾವಾರು ಕೇಂದ್ರಗಳನ್ನು ಆರಂಭಿಸಿ ಮುಂದಿನ ಆರು ತಿಂಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಭರವಸೆ ನೀಡಿದ್ದಾರೆ. ಮಂಗಳವಾರ ಪ್ರಶ್ನೋತ್ತರ ಕಲಾಪ ವೇಳೆ ಬಿಜೆಪಿ ಸದಸ್ಯ ಸಿದ್ದು ಸವದಿ ಪ್ರಶ್ನೆಗೆ ಉತ್ತರಿಸಿದ ಅವರು, 2016ರಲ್ಲಿ 12 ಲಕ್ಷ ಕಾರ್ಮಿಕರ ನೋಂದಣಿ ಇದ್ದು, ಈಗ 50 ಲಕ್ಷಕ್ಕೂ ಹೆಚ್ಚು ನೋಂದಣಿಯಾಗಿವೆ. ಇದರಲ್ಲಿ ಶೇ.60ಕ್ಕೂ ಹೆಚ್ಚು ನಕಲಿ ಕಾರ್ಡ್‌ದಾರರು ಇದ್ದಾರೆ. ಸರ್ಕಾರದಿಂದ ಬರುವ ಯೋಜನೆಗಳ ಲಾಭ ಪಡೆಯಲು ಬಹಳಷ್ಟು ಮಂದಿ ನೋಂದಣಿಯಾಗಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ನಕಲಿ ಕಾರ್ಡ್‌ಗಳ ಹಾವಳಿಗೆ ಕಡಿವಾಣ ಹಾಕಲು ಇಲಾಖೆ ತೀರ್ಮಾನಿಸಿದೆ. ಜಿಲ್ಲಾವಾರು ಕೇಂದ್ರಗಳನ್ನು ಆರಂಭಿಸಿ ಅಲ್ಲಿ ಪರಿಶೀಲನೆ ನಡೆಸಲಾಗುತ್ತದೆ ಎಂದು ಹೇಳಿದರು.

Latest Videos
Follow Us:
Download App:
  • android
  • ios