ಕೈಯಲ್ಲಿ ಆಗದವನು ಮೈ ಪರಚಿಕೊಂಡ ಎಂಬಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಡವಟ್ಟುಗಳನ್ನು ಮುಚ್ಚಿಕೊಳ್ಳಲು ಕೇಂದದ ಕಡೆಗೆ ಬೊಟ್ಟು ತೋರಿಸುತ್ತಿದ್ದಾರೆ ಎಂದು ಕಿಡಿಕಾರಿದ ವಿರೋಧ ಪಕ್ಷದ ನಾಯಕ ಆ‌ರ್. ಅಶೋಕ್‌ 

ಬೆಂಗಳೂರು(ಮಾ.24):  ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ರಾಜಕೀಯ ಪ್ರೇರಿತವಾಗಿದ್ದು, ಭಾರತೀಯ ಒಕ್ಕೂಟ ವ್ಯವಸ್ಥೆ ಮತ್ತು ಕರ್ನಾಟಕದ ಇತಿಹಾಸದಲ್ಲಿ ಇದೊಂದು ಕರಾಳ ದಿನ ಎಂದು ವಿರೋಧ ಪಕ್ಷದ ನಾಯಕ ಆ‌ರ್. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬರ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವಂತೆ ಸುಪ್ರೀಂಕೋರ್ಟ್‌ಗೆ ರಾಜ್ಯ ಸರ್ಕಾರ ರಿಟ್ ಅರ್ಜಿ ಸಲ್ಲಿಸಿರುವ ಕ್ರಮದ ವಿರುದ್ಧ 'ಎಕ್ಸ್' ಖಾತೆಯ ಮೂಲಕ ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಬರ ಪರಿಹಾರ ಕೋರಿ ಕರ್ನಾಟಕ ಸುಪ್ರೀಂಕೋರ್ಟ್‌ಗೆ

ಕೈಯಲ್ಲಿ ಆಗದವನು ಮೈ ಪರಚಿಕೊಂಡ ಎಂಬಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಡವಟ್ಟುಗಳನ್ನು ಮುಚ್ಚಿಕೊಳ್ಳಲು ಕೇಂದದ ಕಡೆಗೆ ಬೊಟ್ಟು ತೋರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.