ಕಬ್ಬು ಬೆಳೆಗಾರರು ನಡೆಸಿದ ಸಂಘಟಿತ ಹೋರಾಟಕ್ಕೆ ಕಡೆಗೂ ಮಣಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿ ಟನ್ ಕಬ್ಬಿಗೆ 3300 ರು. ದರ ನಿಗದಿಪಡಿಸಿ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

ಬೆಂಗಳೂರು (ನ.08): ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಕಬ್ಬು ಬೆಳೆಗಾರರು ನಡೆಸಿದ ಸಂಘಟಿತ ಹೋರಾಟಕ್ಕೆ ಕಡೆಗೂ ಮಣಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿ ಟನ್ ಕಬ್ಬಿಗೆ 3300 ರು. ದರ ನಿಗದಿಪಡಿಸಿ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ನೆರೆ-ಬರ ಪರಿಹಾರ ಇರಲಿ, ಗೊಬ್ಬರ ವಿತರಣೆ ಇರಲಿ, ಖರೀದಿ ಕೇಂದ್ರಗಳ ತೆರೆಯುವಿಕೆ ಇರಲಿ. ಈ ಸರ್ಕಾರ ಬಂದಾಗಿನಿಂದ ಕಳೆದ ಎರಡೂವರೆ ವರ್ಷಗಳಲ್ಲಿ ರೈತರಿಗೆ ಸಂಬಂಧಪಟ್ಟ ಬಹುತೇಕ ನಿರ್ಧಾರಗಳು ಘೋಷಣೆ, ಭರವಸೆಗಳಿಗೆ ಮಾತ್ರ ಸೀಮಿತವಾಗಿರುವುದರಿಂದ ಕಾಂಗ್ರೆಸ್‌ ಸರ್ಕಾರ ಈ ನಿರ್ಧಾರವನ್ನೂ ಪ್ರಾಮಾಣಿಕವಾಗಿ ಜಾರಿ ಮಾಡುವ ಬಗ್ಗೆ ನಮಗೆ ಅನುಮಾನಗಳಿವೆ ಎಂದೂ ಅವರು ಹೇಳಿದ್ದಾರೆ.

ಕಬ್ಬು ಕಟಾವು, ಲೋಡಿಂಗ್‌, ಸಾಗಣೆ ಮತ್ತು ಅನ್‌ಲೋಡಿಂಗ್‌ ಸಂದರ್ಭದಲ್ಲಿ ರೈತರಿಗೆ ಆಗುವ ಸುಲಿಗೆ ಮತ್ತು ವಂಚನೆ, ಸಕ್ಕರೆ ಕಾರ್ಖಾನೆಗಳಲ್ಲಿ ತೂಕ ಹಾಕುವ ಸಂದರ್ಭದಲ್ಲಿ ಆಗುವ ಮೋಸ, ಕಬ್ಬು ಪೂರೈಸಿದ 14 ದಿನಗಳೊಳಗೆ ರೈತರಿಗೆ ಸಂಪೂರ್ಣ ಹಣ ಪಾವತಿ ಮಾಡಬೇಕು ಎಂಬ ನಿಯಮವಿದ್ದರೂ ಬಿಲ್ ಪಾವತಿ ವಿಳಂಬ ಆಗುವುದು, ಈ ರೀತಿ ಅನೇಕ ಸಮಸ್ಯೆಗಳನ್ನ ನಮ್ಮ ರೈತರು ಎದುರಿಸುತ್ತಲೇ ಇದ್ದಾರೆ. ಈ ಬಾರಿ ಇವು ಯಾವ ಸಮಸ್ಯೆಯೂ ಬರದಂತೆ ರೈತರಿಗೆ ಸಕಾಲಕ್ಕೆ ತಮಗೆ ಸಿಗಬೇಕಾದ ನ್ಯಾಯಯುತ ಹಣ ಸಿಗುವಂತೆ ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಅವರು ಪ್ರಕಟಣೆ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

ಗುಂಡಿ ಬಿದ್ದ ರಸ್ತೆಗಳು, ರೈತರ ಗೋಳು ಕೇಳೋರಿಲ್ಲ

ನವೆಂಬರ್ ಕ್ರಾಂತಿಯಾಗಿ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ನಾನು ಹೇಳಿದ್ದ ಭವಿಷ್ಯ ನಿಜವಾಗಿದೆ, ಸಿದ್ದರಾಮಯ್ಯ ರಾಜೀನಾಮೆ ನೀಡಿ ಗಂಟು ಮೂಟೆ ಕಟ್ಟಲು ಸಿದ್ದರಾಗಿದ್ದಾರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸತ್ತಿದೆ, ಸತ್ತ ಹೆಣವನ್ನು ಡಿ.ಕೆ. ಶಿವಕುಮಾರ್ ಅಥವಾ ಬೇರೆ ಯಾರಾದರೂ ಹೊರಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಪೊಲೀಸರು ಸಿಬ್ಬಂದಿ ಕೊರತೆಯ ನೆಪವೊಡ್ಡಿ ಮುಂದೂಡುತ್ತಿದ್ದಾರೆ, ಚುನಾವಣೆಗಳನ್ನು ಶಾಸಕರು ಮತ್ತು ಸಂಸದರು ಹೇಳಿದ್ದಾರೆ ಎಂದು ಮುಂದೂಡುವುದಲ್ಲ, ಚುನಾವಣೆಗಳನ್ನು ನಿಯಮಬದ್ಧವಾಗಿ ನಡೆಸಬೇಕು,

ಆದರೆ ಚುನಾವಣೆಯನ್ನು ಮುಂದೂಡಿ ಸದಸ್ಯರಿಗೆ ಹಣದ ಆಮಿಷವೊಡ್ಡುವ ಕೆಲಸ ನಡೆಯುತ್ತಿದೆ, ಆದ್ದರಿಂದ ಮಾಜಿ ಶಾಸಕ ಹರ್ಷವರ್ಧನ್ ಅವರ ಮನವಿ ಮೇರೆಗೆ ಇಲ್ಲಿಗೆ ಬಂದು ಈ ಬಗ್ಗೆ ಉಪವಿಭಾಗದ ಡಿವೈಎಸ್ಪಿ ಹಾಗೂ ತಹಸೀಲ್ದಾರ್ ಅವರಿಗೆ ಮುಂದಿನ ಒಂದು ವಾರದಲ್ಲಿ ಚುನಾವಣೆ ನಡೆಸುವಂತೆ ತಾಕೀತು ಮಾಡಲಾಗಿದೆ, ಮತ್ತೆ ಚುನಾವಣೆ ಮುಂದೂಡಿ ಅವ್ಯವಹಾರ ನಡೆಸಿದರೆ ತಹಸೀಲ್ದಾರ್ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸತ್ತಿದೆ, ಗುಂಡಿ ಬಿದ್ದ ರಸ್ತೆಗಳು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಕೊಲೆ ಸುಲಿಗೆಗಳು ಅಧಿಕವಾಗಿವೆ, ರಾಜ್ಯದಲ್ಲಿ ಎರಡು ಸಾವಿರ ಮಂದಿ ರೈತರು ಆ*ಹತ್ಯೆ ಮಾಡಿಕೊಂಡಿದ್ದಾರೆ, ಇವತ್ತು ಮಂಡ್ಯದಲ್ಲಿ ರೈತನೊಬ್ಬ ಪೆಟ್ರೋಲ್ ಸುರಿದುಕೊಂಡು ಆ*ಹತ್ಯೆ ಮಾಡಿಕೊಂಡಿದ್ದಾನೆ.

ಅಲ್ಲದೆ, ಮಾನವ ಮತ್ತು ಪ್ರಾಣಿ ಸಂಘರ್ಷದಿಂದಾಗಿ ರೈತರ ಪ್ರಾಣ ಹಾನಿಯಾಗುತ್ತಿದೆ ಇದನ್ನು ತಡೆಗಟ್ಟಲು ಸರ್ಕಾರ ವಿಫಲವಾಗಿದೆ, ನಮ್ಮ ಸರ್ಕಾರದ ಅವಧಿಯಲ್ಲಿ ಕಾಡು ಪ್ರಾಣಿಗಳ ಹಾವಳಿ ತಡೆಯಲು ಬೇಲಿ ನಿರ್ಮಿಸಲು ಅನುದಾನ ಬಿಡುಗಡೆಯಾಗಿತ್ತು, ಅದನ್ನು ಕಾಂಗ್ರೆಸ್ ಸರ್ಕಾರ ಪೂರ್ಣಗೊಳಿಸಿಲ್ಲ ಜೊತೆಗೆ ನಮ್ಮ ಸರ್ಕಾರದ ಅವಧಿಯಲ್ಲಿ 213 ಕೋಟಿ ಖರ್ಚು ಮಾಡಿ ಕೆರೆಗಳನ್ನು ತುಂಬಿಸಲಾಗಿತ್ತು, ಈ ಸರ್ಕಾರ ಉಚಿತ ಯೋಜನೆಗಳಿಂದಾಗಿ ಪಾಪರ್ ಆಗಿದೆ, ಈ ಸರ್ಕಾರ ಹೆಣ್ಣು ಮಕ್ಕಳನ್ನು ಬಸ್ ಹತ್ತಿಸಿ ಇಳಿಸುವುದು ಬಿಟ್ಟರೆ, ಏನನ್ನು ಮಾಡಿಲ್ಲ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ, ಈ ಸರ್ಕಾರ ತೊಲಗುವವರೆಗೆ ಜನರ ಸಂಕಷ್ಟ ತಪ್ಪಿದ್ದಲ್ಲ ಎಂದು ಹೇಳಿದರು.