Chamarajanagar: ಐಕ್ಯತೆ ಮೂಡಿಸಲು ಭಾರತ್ ಜೋಡೋ ಪಾದಯಾತ್ರೆ: ಆರ್.ಧ್ರುವನಾರಾಯಣ
ಕೋಮು ದ್ವೇಷದ ಮೂಲಕ ಬಿಜೆಪಿ ಒಡೆದಿರುವ ಭಾರತವನ್ನು ಒಗ್ಗೂಡಿಸಲು ಭಾರತ್‌ಜೋಡೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಮನವಿ ಮಾಡಿದರು.
ಹನೂರು (ಸೆ.25): ಕೋಮು ದ್ವೇಷದ ಮೂಲಕ ಬಿಜೆಪಿ ಒಡೆದಿರುವ ಭಾರತವನ್ನು ಒಗ್ಗೂಡಿಸಲು ಭಾರತ್ ಜೋಡೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಮನವಿ ಮಾಡಿದರು. ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಭಾರತ್‌ಜೋಡೋ ಪಾದಯಾತ್ರೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಬಿಜೆಪಿ ದೇಶದಲ್ಲಿ ಉಂಟು ಮಾಡಿರುವ ಸಮಸ್ಯೆಗಳ ಬಗ್ಗೆ ದೇಶದ ಜನತೆಗೆ ತಿಳಿಸಿಕೊಡುವ ಉದ್ದೇಶದಿಂದ ಈ ಭಾರತ್ ಜೋಡೋ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ದಿನಬಳಕೆ ಆಹಾರ ಪದಾರ್ಥಗಳು, ಡಿಸೇಲ್, ಪೆಟ್ರೋಲ್, ಅಡುಗೆ ಅನಿಲ, ಕೀಟನಾಶಕ ಹಾಗೂ ರಸಗೊಬ್ಬರಗಳ ಬೆಲೆಯನ್ನು ಏರಿಸುವ ಮೂಲಕ ಸಾಮಾನ್ಯ ಜನರು ಹಾಗೂ ರೈತರ ಬದುಕನ್ನು ದಮನ ಮಾಡುವ ಕೆಲಸ ಮಾಡುತ್ತಿದ್ದಾರೆ.
ಚಾಮರಾಜನಗರ: ಮಲೆಮಹದೇಶ್ವರ ಸ್ವಾಮಿ ಹೆಸರಿನ ಫೇಸ್‌ಬುಕ್‌ನಲ್ಲಿ ಅಶ್ಲೀಲತೆ
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಂಡ ಪಾದಯಾತ್ರೆ 3570 ಕಿ.ಮೀ ದೂರ ಇದೆ. ಇದು ಸತತ 150 ದಿನಗಳ ಕಾಲ ನಡೆಯಲಿದೆ. 10 ರಾಜ್ಯಗಳು ಹಾಗೂ 2ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಾದಯಾತ್ರೆ ನಡೆಯಲಿದೆ. ಈ ಪಾದಯಾತ್ರೆಗೆ ಜಿಲ್ಲೆಯಲ್ಲಿಯೆ ಕಾಂಗ್ರೆಸ್‌ನ ಭದ್ರಕೋಟೆ ಎಂದು ಸತತ ಮೂರು ವಿಧಾನಸಭಾ ಚುನಾವಣೆಗಳಲ್ಲೂ ಸಾಬೀತುಪಡಿಸಿರುವ ಹನೂರು ಕ್ಷೇತ್ರದಿಂದ 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಆಗಮಿಸುವ ಮೂಲಕ ರಾಹುಲ್ ಗಾಂಧಿ ಅವರ ಪಾದಯಾತ್ರೆಗೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದರು.
ಶಾಸಕ ಆರ್. ನರೇಂದ್ರ ಮಾತನಾಡಿ, ರಾಹುಲ್‌ಗಾಂಧಿ ಹಮ್ಮಿಕೊಂಡಿರುವ ಭಾರತ್‌ಜೋಡೋ ಪಾದಯಾತ್ರೆ ಐತಿಹಾಸಿಕ ಕಾರ್ಯಕ್ರಮ ಬಿಜೆಪಿ ಮಾಡಿರುವ ಮೋಸವನ್ನು ಜನತೆಯ ಮುಂದಿಡಲು ಅನುಕೂಲವಾಗಲಿದೆ. ಭ್ರಷ್ಟಸರ್ಕಾರದ ಆಡಳಿತದಿಂದಾಗಿ ಸಾಮಾನ್ಯ ಜನರು ಪರದಾಡುವಂತಾಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಗುಂಡ್ಲುಪೇಟೆಯಲ್ಲಿ ನಡೆಯುವ ಪಾದಯಾತ್ರೆ ಉದ್ಘಾಟನೆಗೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಬೇಕು. ಪ್ರತಿ ಗ್ರಾಮ ಪಂಚಾಯಿತಿಗೂ ಬಸ್ಸಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
Chamarajanagar: ಮಗು ತಾಯಿ ಮಡಿಲಿಗೆ: ಮಗು ಮಾರಿದ್ದ ತಂದೆ ಜೈಲಿಗೆ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಈಶ್ವರ್, ದೇವರಾಜು, ಕೆಪಿಸಿಸಿ ಸದಸ್ಯ ರಾಮಪುರ ಬಸವರಾಜು ಪ.ಪಂ ಉಪಾಧ್ಯಕ್ಷ ಗಿರೀಶ್, ಸದಸ್ಯರುಗಳಾದ ಸುದೇಶ್, ಸಂಪತ್, ಹರೀಶ್, ಟಿಎಪಿಸಿಎಂಎಸ್ ಅಧ್ಯಕ್ಷ ಚಿಕ್ಕಮಾದನಾಯಕ, ನಿರ್ದೇಶಕ ಮುರುಡೇಶ್ವರ ಸ್ವಾಮಿ, ಸೂಳೇರಿ ಪಾಳ್ಯ ಗ್ರಾ.ಪಂ. ಅಧ್ಯಕ್ಷರಾದ ಮುರುಗೇಶ್, ಸುಧಾ, ಯೂತ್ ಕಾಂಗ್ರೆಸ್ ಅಧ್ಯಕ್ಷ ಗುಂಡಾಪುರ ಮಾದೇಶ್, ಸುರೇಶ್ ಹಿರಿಯ ಮುಖಂಡರಾದ ಪೆದ್ದನಪಾಳ್ಯ ಮಣಿ, ಚಿಕ್ಕತಮ್ಮಯ್ಯ, ಅಜ್ಜಿಪುರ ನಾಗರಾಜು, ಮತೀನ್ ವೆಂಕಟರಮಣನಾಯ್ಡು, ಪಾಳ್ಯ ಕೃಷ್ಣ ಹಾಗೂ ಕಾರ್ಯಕರ್ತರು ಇದ್ದರು.