Lok Sabha Election 2024: ಏ.17ಕ್ಕೆ ಮಂಡ್ಯ, ಕೋಲಾರದಲ್ಲಿ ರಾಹುಲ್ ಗಾಂಧಿ ಪ್ರಚಾರ
ಮೊದಲು ಮಂಡ್ಯ ಜಿಲ್ಲೆಗೆ ತೆರಳಿ ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಕ್ಷೇತ್ರದ ವಿವಿಧೆಡೆ ಪ್ರಚಾರ ನಡೆಸಲಿದ್ದಾರೆ. ನಂತರ ಸಂಜೆ ಕೋಲಾರಕ್ಕೆ ತೆರಳಿ ಪಕ್ಷದ ಅಭ್ಯರ್ಥಿ ಕೆ.ವಿ.ಗೌತಮ್ ಪರವಾಗಿ ಕ್ಷೇತ್ರದ ಹಲವೆಡೆ ಭರ್ಜರಿ ಪ್ರಚಾರ ನಡೆಸಲಿದ್ದಾರೆ.
ಬೆಂಗಳೂರು(ಏ.12): ಎಐಸಿಸಿ ನಾಯಕ ರಾಹುಲ್ ಗಾಂಧಿ ಏ.17ರ ಬುಧವಾರ ರಾಜ್ಯಕ್ಕೆ ಆಗಮಿಸುತ್ತಿದ್ದು, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ಅಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸುವ ರಾಹುಲ್ ಗಾಂಧಿಯವರು ರಾಜ್ಯ ನಾಯಕರೊಂದಿಗೆ ಮೊದಲು ಮಂಡ್ಯ ಜಿಲ್ಲೆಗೆ ತೆರಳಿ ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಕ್ಷೇತ್ರದ ವಿವಿಧೆಡೆ ಪ್ರಚಾರ ನಡೆಸಲಿದ್ದಾರೆ.
ಸೋತ ಅಮೇಥಿ ಕ್ಷೇತ್ರದಿಂದಲೇ ಮತ್ತೆ ರಾಹುಲ್ ಗಾಂಧಿ ಸ್ಪರ್ಧೆ?
ನಂತರ ಸಂಜೆ ಕೋಲಾರಕ್ಕೆ ತೆರಳಿ ಪಕ್ಷದ ಅಭ್ಯರ್ಥಿ ಕೆ.ವಿ.ಗೌತಮ್ ಪರವಾಗಿ ಕ್ಷೇತ್ರದ ಹಲವೆಡೆ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಇದೇ ವೇಳೆ ಬೆಂಗಳೂರಿನಲ್ಲಿ ರೋಡ್ ಶೋ ನಡೆಸುವ ಯೋಜನೆಯೂ ಇದ್ದು, ಅದು ಇನ್ನೂ ಖಚಿತಗೊಂಡಿಲ್ಲ.