ಪ್ರಧಾನಿ ಹೇಳಿದಂತೆ ರಾಯ್‌ ಬರೇಲಿಯಿಂದಲೂ ರಾಹುಲ್ ಗಾಂಧಿ ಸ್ಪರ್ಧೆ..!

ರಾಯ್ ಬರೇಲಿ ಹಾಗೂ ಅಮೇಥಿ ಕ್ಷೇತ್ರಗಳಿಗೆ ಕೊನೆಗೂ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರು ಪ್ರಕಟ ಮಾಡಿದ್ದು, ಈ ಮೂಲಕ ಇತರ ರಾಜಕೀಯ ಪಕ್ಷಗಳ, ಕಾಂಗ್ರೆಸಿಗರು ಹಾಗೂ ಸ್ಥಳೀಯರ ಬಹುದಿನಗಳ ಕುತೂಹಲಕ್ಕೆ ಕೊನೆಗೂ ಬ್ರೇಕ್ ಹಾಕಿದೆ.

Rahul Gandhi contest from Amethi as PM modi mentioned in the Asianet network so exclusive interview akb

ನವದೆಹಲಿ: ರಾಯ್ ಬರೇಲಿ ಹಾಗೂ ಅಮೇಥಿ ಕ್ಷೇತ್ರಗಳಿಗೆ ಕೊನೆಗೂ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರು ಪ್ರಕಟ ಮಾಡಿದ್ದು, ಈ ಮೂಲಕ ಇತರ ರಾಜಕೀಯ ಪಕ್ಷಗಳ, ಕಾಂಗ್ರೆಸಿಗರು ಹಾಗೂ ಸ್ಥಳೀಯರ ಬಹುದಿನಗಳ ಕುತೂಹಲಕ್ಕೆ ಕೊನೆಗೂ ಬ್ರೇಕ್ ಹಾಕಿದೆ. ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಅಖಾಡಕ್ಕೆ ಇಳಿದಿದ್ದು, ಅಮೇಥಿ ಕ್ಷೇತ್ರದಿಂದ ಕಿಶೋರ್ ಲಾಲ್ ಶರ್ಮಾ ಅವರನ್ನು ಕಣಕ್ಕಿಳಿಸಲಾಗಿದೆ. ಈ ಎರಡು ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನವಾಗಿದ್ದು, ಈ ಎರಡೂ ಕ್ಷೇತ್ರಗಳಲ್ಲಿ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಇತ್ತೀಚೆಗೆ ಏಷ್ಯಾನೆಟ್‌ಗೆ ನೀಡಿದ ಎಕ್ಸ್‌ಕ್ಲೂಸಿವ್ ಸಂದರ್ಶನದಲ್ಲಿ ಪ್ರಧಾನಿ ಮೋದಿಯವರು ರಾಹುಲ್ ಗಾಂಧಿ ಮತ್ತೊಂದು ಕ್ಷೇತ್ರದಿಂದಲೂ ಕಣಕ್ಕಿಳಿಯುತ್ತಾರೆ ಎಂದು ಹೇಳಿದ್ದರು. ಅದರಂತೆ ಈಗ ರಾಹುಲ್ ಗಾಂಧಿ ಕೇರಳದ ವಯನಾಡ್ ಮಾತ್ರವಲ್ಲದೇ ಉತ್ತರ ಪ್ರದೇಶದ ರಾಯ್ ಬರೇಲಿಯಿಂದಲೂ ಲೋಕಸಭಾ ಚುನಾವಣೆಗೆ ಕಣಕ್ಕೆ ಇಳಿದಿದ್ದು, ಎರಡು ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಈ ಹಿಂದೆ ರಾಯ್ ಬರೇಲಿ ಕ್ಷೇತ್ರವನ್ನು ರಾಹುಲ್ ಅಮ್ಮ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದರು. ಆದರೆ ಇತ್ತೀಚೆಗೆ ಅವರು ರಾಜ್ಯಸಭಾ ಸದಸ್ಯರಾಗಿರುವುದರಿಂದ ಈ ಕ್ಷೇತ್ರದಲ್ಲಿ ಪುತ್ರ ರಾಹುಲ್ ಕಣಕ್ಕಿಳಿದಿದ್ದಾರೆ. ಹಾಗೆಯೇ ಕಾಂಗ್ರೆಸ್‌ನಿಂದ ಗಾಂಧಿ ಕುಟುಂಬವೇ ಹೆಚ್ಚಾಗಿ ಸ್ಪರ್ಧೆ ಮಾಡುವ ಮತ್ತೊಂದು ಕ್ಷೇತ್ರವಾದ ಅಮೇಥಿಯಿಂದ ಗಾಂಧಿ ಕುಟುಂಬಕ್ಕೆ ನಿಷ್ಠಾವಂತನಾದ ಕಿಶೋರಿ ಲಾಲ್ ಶರ್ಮಾ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಇಲ್ಲಿ ರಾಹುಲ್ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಮಾಡ್ತಾರೆ ಎಂದು ಸುದ್ದಿಯಾಗಿತ್ತು. ಆದರೆ ಅವರು ಸ್ಪರ್ಧೆಗೆ ಒಪ್ಪದ ಕಾರಣ ಈಗ ಕಿಶೋರಿ ಲಾಲ್ ಶರ್ಮಾ ಕಣಕ್ಕಿಳಿದಿದ್ದಾರೆ.

ಅಮೇಥಿಯಿಂದ ರಾಹುಲ್ ಗಾಂಧಿ, ಪ್ರಿಯಾಂಕಾಗೆ ರಾಯ್‌ಬರೇಲಿ ಟಿಕೆಟ್: ಯುಪಿ ಕಾಂಗ್ರೆಸ್ ಶಿಫಾರಸು!

 ಇಲ್ಲಿ ಬಿಜೆಪಿಯಿಂದ ಸ್ಮೃತಿ ಇರಾನಿ ಕಣಕ್ಕಿಳಿದಿದ್ದಾರೆ. 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಇಲ್ಲಿ ಸ್ಮೃತಿ ಇರಾನಿ ರಾಹುಲ್ ಗಾಂಧಿ ಅವರನ್ನು 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿದ್ದರು. ಆದರೆ ಇದಕ್ಕೂ ಮೊದಲು 1977ರಲ್ಲಿ ಇಲ್ಲಿ ಇಂದಿರಾ ಗಾಂಧಿ ಸ್ಪರ್ಧಿಸಿ ಸೋತಿದ್ದರು. 1996 -98ರಲ್ಲಿ ಇಲ್ಲಿ ಬಿಜೆಪಿ ಗೆದ್ದಿತ್ತು. 1999ರ ನಂತರ 2014ರವರೆಗೂ ಇಲ್ಲಿ ಸೋನಿಯಾ ಗಾಂಧಿ ಸ್ಪರ್ಧಿಸಿ ಸತತವಾಗಿ 4 ಬಾರಿ ಗೆದ್ದಿದ್ದರು. 

ರಾಹುಲ್ ಗಾಂಧಿ ಸ್ಪರ್ಧಿಸಿದ ಮತ್ತೊಂದು ಕ್ಷೇತ್ರವಾದ ವಯನಾಡ್‌ನಲ್ಲಿ ಈಗಾಗಲೇ ಚುನಾವಣೆ ನಡೆದಿದೆ.

ಸೋನಿಯಾ ಗಾಂಧಿ ರಾಜ್ಯಸಭೆಗೆ, ಅಮ್ಮನ ಕ್ಷೇತ್ರದಿಂದ ಮಗಳು ಪ್ರಿಯಾಂಕಾ ಲೋಕಸಭೆಗೆ ಸ್ಪರ್ಧೆ..?  

ರಾಯ್‌ಬರೇಲಿ ಕ್ಷೇತ್ರದಿಂದ ಕಣಕ್ಕಿಳಿದಿರುವ ರಾಹುಲ್ ಗಾಂಧಿ ಇಂದು ಮಧ್ಯಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.  11 ಗಂಟೆ ವೇಳೆಗೆ ರಾಯ್ ಬರೇಲಿ ತಲುಪಲಿರುವ ರಾಹುಲ್ ಗಾಂಧಿ ಬಳಿಕ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿ ನಂತರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. 

 

Latest Videos
Follow Us:
Download App:
  • android
  • ios