Asianet Suvarna News Asianet Suvarna News
breaking news image

ರಾಹುಲ್‌ ಗಾಂಧಿಗೆ ಷರತ್ತುಬದ್ಧ ಜಾಮೀನು ನೀಡಿದ ಬೆಂಗಳೂರು ಕೋರ್ಟ್, 75 ಲಕ್ಷ ಶ್ಯೂರಿಟಿ ಕೊಟ್ಟ ಡಿಕೆ ಸುರೇಶ್

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಗೆ ಬೆಂಗಳೂರು ಕೋರ್ಟ್ ಷರತ್ತು ಬದ್ದ ಜಾಮೀನು ನೀಡಿದೆ. 

Rahul Gandhi granted condition  bail from Bengaluru court in BJP defamation Case gow
Author
First Published Jun 7, 2024, 11:15 AM IST

ಬೆಂಗಳೂರು (ಜೂ.7): ಭ್ರಷ್ಟಾಚಾರ ಕುರಿತು ದಿನಪತ್ರಿಕೆಗಳಿಗೆ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದ ಮೇಲೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಗೆ ಬೆಂಗಳೂರಿನ 42ನೇ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ)   ಷರತ್ತು ಬದ್ದ ಜಾಮೀನು ನೀಡಿದೆ. ಜೊತೆಗೆ ಮುಂದಿನ ವಿಚಾರಣೆಯನ್ನು ಜುಲೈ 30ಕ್ಕೆ  ಮುಂದೂಡಿದೆ. ಮಾಜಿ ಸಂಸದ ಡಿ.ಕೆ.ಸುರೇಶ್ ಅವರು 75 ಲಕ್ಷ ಮೌಲ್ಯದ ಆಸ್ತಿದ ದಾಖಲೆಯನ್ನ ಶ್ಯೂರಿಟಿ ಆಗಿ ನೀಡಿದ್ದಾರೆ.

ಬಿಜೆಪಿಯಿಂದಲೂ ನಿಗಮ ಹಣ ಅಕ್ರಮ ವರ್ಗ: ದಾಖಲೆಗಳು ಸಿಕ್ಕಿವೆ ಎಂದ ಡಿ.ಕೆ.ಶಿವಕುಮಾರ್‌

ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಕೋರ್ಟ್‌ಗೆ  ಖುದ್ದು ಹಾಜರಾಗಲು ಶುಕ್ರವಾರ  ಬೆಂಗಳೂರಿಗೆ ಆಗಮಿಸಿದ್ದರು. ಕೋರ್ಟ್ ವಿಚಾರಣೆಗೆ ಹಾಜರಾಗಲು ರಾಹುಲ್ ಸಹಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಸಮನ್ಸ್‌ ಜಾರಿ ಮಾಡಿತ್ತು.  ಜೂ.1ರಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಖುದ್ದು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದರು.

ಲೋಕಸಭೆಯಲ್ಲಿ ರಾಹುಲ್‌ಗೆ ವಿಪಕ್ಷ ನಾಯಕ ಹೊಣೆ?

 ರಾಹುಲ್‌ಗಾಂಧಿ 3ನೇ ಸಮನ್ಸ್‌ಗೂ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ  ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಾಧೀಶರು ವಿಚಾರಣೆಯನ್ನು ಜೂ.7ಕ್ಕೆ ಮುಂದೂಡಿದ್ದರು. ಇಂದು ವಿಚಾರಣೆಗೆ ಹಾಜರಾದ ರಾಹುಲ್ ಗೆ ಕೋರ್ಟ್ ಕಂಡೀಷನಲ್ ಬೇಲ್ ನೀಡಿದೆ. ಬೇಲ್‌ ಪಡೆದ ರಾಹುಲ್ ಮತ್ತೆ ದೆಹಲಿಗೆ ವಾಪಸ್ಸಾಗಿದ್ದಾರೆ.

Latest Videos
Follow Us:
Download App:
  • android
  • ios