ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ರಾಹುಲ್‌ ಗಾಂಧಿ ಮುಂದಿನ ಪ್ರಧಾನ ಮಂತ್ರಿಯಾಗುತ್ತಾರೆ ಎಂದು ಹೇಳಿದ ಸಚಿವ ಜಮೀರ್ ಅಹಮ್ಮದ್ ಖಾನ್ 

ಹೊಸಪೇಟೆ(ಏ.18): ರಾಹುಲ್ ಗಾಂಧಿ ದೇಶದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್ ಭವಿಷ್ಯ ನುಡಿದರು. 

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ರಾಹುಲ್‌ ಗಾಂಧಿ ಮುಂದಿನ ಪ್ರಧಾನ ಮಂತ್ರಿಯಾಗುತ್ತಾರೆ ಎಂದು ಹೇಳಿದರು. 

ನಿಮ್ಮಿಂದ ಸಿಎಂ ಆಗದ್ದನ್ನೇ ಮರೆತು ಮಂಡ್ಯಕ್ಕೆ ಪಲಾಯನ: ಎಚ್ಡಿಕೆ ವಿರುದ್ಧ ಸಚಿವ ಜಮೀರ್‌ ವಾಗ್ದಾಳಿ

ಬಳ್ಳಾರಿಯ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ರಾಜಕೀಯ ಪುನರ್ಜನ್ಮ ಕೊಡಿ ಎಂದು ಕೇಳುತ್ತಿದಾರೆ. ಹೀಗಾಗಿ ಅವರು ಈಗಾಗಲೇ ಸೋಲು ಒಪ್ಪಿಕೊಂಡಿದ್ದಾರೆ ಎಂದರ್ಥ. ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಜಮೀರ್‌ ಅಹ್ಮದ್‌ ಖಾನ್‌ ವಿಶ್ವಾಸ ವ್ಯಕ್ತಪಡಿಸಿದರು.