Asianet Suvarna News Asianet Suvarna News

ಇತಿಹಾಸದಲ್ಲಿಯೇ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ರಾಹುಲ್ ಗಾಂಧಿ ಐತಿಹಾಸಿಕ ಸಭೆ


ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಲಾಗಿರು ಅಮೃತಮಹೋತ್ಸವದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಅದಕ್ಕೂ ಮುನ್ನ ರಾಹುಲ್ ಗಾಂಧಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ಐತಿಹಾಸಿಕ ಸಭೆ ನಡೆಸಲಿದ್ದಾರೆ.ಈ ಬಗ್ಗೆ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.
 

Rahul Gandhi Meeting With Karnataka Congress Leaders In Hubballi On August 2nd Says DK Shiakumar rbj
Author
Bengaluru, First Published Jul 31, 2022, 7:58 PM IST

ಹುಬ್ಬಳ್ಳಿ, (ಜುಲೈ.31): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 15ನೇ ಜನ್ಮದಿನದ ಅಮೃತಮಹೋತ್ಸವಕ್ಕೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ಆಗಸ್ಟ್ 2ರಂದು ಹುಬ್ಬಳ್ಳಿ ಆಗಮಿಸಲಿದ್ದು, ರಾಜ್ಯ ಕಾಂಗ್ರೆಸ್‌ ನಾಯಕರ ಸಭೆ ನಡೆಸಲಿದ್ದಾರೆ.

ಇನ್ನು ಈ ಬಗ್ಗೆ ಹಬ್ಬಳ್ಳಿಯಲ್ಲಿ ಇಂದು(ಭಾನುವಾರ) ಸುದ್ದಿಗಾರರಿಗೆ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಆಗಷ್ಟ್ 2 ರಂದು  ಸಂಜೆ 6 ಗಂಟೆಗೆ ಹುಬ್ಬಳ್ಳಿಗೆ  ರಾಹುಲ್ ಗಾಂಧಿ ಆಗಮಿಸಲಿದ್ದು, ಅಂದು ಸಂಜೆ ರಾಹುಲ್ ಗಾಂಧಿ ಕಾಂಗ್ರೆಸ್ ಮುಖಂಡ ಜತೆಗೆ ಸಭೆ ನಡೆಸಲಿದ್ದಾರೆ. ಪ್ರಸಕ್ತ ರಾಜಕೀಯ ವಿಚಾರಗಳ ಕುರಿತು ಸಭೆ ಮಾಡಲಿದ್ದಾರೆ. ಇತಿಹಾಸದಲ್ಲಿಯೇ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ರಾಹುಲ್ ಗಾಂಧಿ ಐತಿಹಾಸಿಕ ಸಭೆ ನಡೆಸಲಿದ್ದಾರೆ. ಎಂದರು.

ಸಿದ್ದರಾಮೋತ್ಸವಕ್ಕೆ ಜನ ಸೇರಿಸುವ ಹೊಣೆಹೊತ್ತುಕೊಂಡ ಬಿಜೆಪಿ ಹಿರಿಯ ನಾಯಕನ ಪುತ್ರ

ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್  ಹೋರಾಟ ರೂಪಿಸಲಿದ್ದು, ಪ್ರತಿ ಕ್ಷೇತ್ರದಿಂದ ಪಾದಯಾತ್ರೆ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ತತ್ತರಿಸಿದ್ದಾರೆ. ಪ್ರತಿಭಟಿಸುವಂತೆ ಕೈ  ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಪ್ರವೀಣ್ ಹತ್ಯೆ ವಿಚಾರವಾಗಿ ಮಾತನಾಡಿದ ಡಿಕೆಶಿ,  ರಾಜ್ಯದಲ್ಲಿ ಪದೇ ಪದೇ ಇಂತಹ ಹತ್ಯೆಗಳು ನಡೆಯುತ್ತಿವೆ.
ಇಂತಹ ಹತ್ಯೆಗಳಿಗೆ ನಮ್ಮ ಖಂಡನೆ ಇದೆ. ಸರ್ಕಾರ ಅಂತಹ ಸಾವುಗಳಿಗೆ ನ್ಯಾಯ ಒದಗಿಸಿಕೊಡುವ ಕೆಲಸ ಮಾಡಬೇಕಿದೆ.
ತನಿಖೆಯ ವಿಚಾರದಲ್ಲಿ ನಾವು ಭಾಗಿಯಾಗುವುದಿಲ್ಲ. ಸಾವಿಗೆ ನ್ಯಾಯ ಕೊಡಿಸುವ ವಿಚಾರ ಸರ್ಕಾರಕ್ಕೆ ಇದ್ರೆ ನ್ಯಾಯ ಒದಗಿಸಲಿ. ಸಾವು ಯಾರದ್ದೇ ಆದ್ರೂ ಅದು ಮನುಷ್ಯನ ಸಾವು ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಸರ್ಕಾರದಿಂದ ರಾಷ್ಟ್ರಧ್ವಜ ಸಂಹಿತೆ ಜಾರಿ ವಿಚಾರವಾಗಿ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ಸ್ವತಂತ್ರದ ಬಗ್ಗೆ ಗೌರವ ಇಲ್ಲ.
ರಾಷ್ಟ್ರಧ್ವಜದ ಬಗ್ಗೆ ಮಾತನಾಡುವವರಿಗೆ ಅದರ ಇತಿಹಾಸ ಗೊತ್ತಿಲ್ಲ. ಇತಿಹಾಸ ಗೊತ್ತಿಲ್ಲದೇ ರಾಷ್ಟ್ರಧ್ವಜದ ಬಗ್ಗೆ ಮಾತನಾಡುತ್ತಾರೆ ಎಂದು ಪರೋಕ್ಷವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿಗೆ ಟಾಂಗ್ ನೀಡಿದರು.

ಸ್ವಪಕ್ಷದ ವಿರುದ್ಧವೇ ಬಿಜೆಪಿ ಕಾರ್ಯಕರ್ತರ ಧಂಗೆ ಬಗ್ಗೆ ಮಾತನಾಡಿ, ಅವರಿಗೆ ಅವರ ಸರ್ಕಾರದ ಮೇಲೆ ನಂಬಿಕೆ ಇತ್ತು. ಆದ್ರೆ ಸರ್ಕಾರ ಅವರ ನಂಬಿಕೆ ಕಳೆದುಕೊಂಡಿದೆ. ಮುಖ್ಯಮಂತ್ರಿಗಳೇ ಮಾದರಿ ಪೊಲೀಸರಿಗೆ ಪ್ರೋತ್ಸಾಹ ನೀಡಿದ್ರು, ಯಾವುದೇ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ‌ಕೈಗೊಂಡಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅಂತಾ ನಾವು ಹೇಳಬೇಕಿಲ್ಲ. ಈ ಬಗ್ಗೆ ಅವರ ರಾಷ್ಟ್ರೀಯ ನಾಯಕರೇ ಹೇಳಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಇವರ ಕೈಯಿಂದ ಆಗಲ್ಲ. ಬಿಜೆಪಿ ಕಾರ್ಯಕರ್ತರ ನೋವಿನಲ್ಲಿ ನಾನೂ ಇದ್ದೇನೆ. ಹತ್ಯೆಗೊಳಗಾಗಿ ಅಸುನೀಗಿದ ಮೂವರೂ ಅಮಾಯಕರು. ಅವರ ಮನೆಗೆ ಒಂದು ದಿನ ಭೇಟಿ ನೀಡಲಿದ್ದೇನೆ ಎಂದು ಹೇಳಿದರು.

Follow Us:
Download App:
  • android
  • ios