ಆ.20ಕ್ಕೆ ಗೃಹಲಕ್ಷ್ಮೀ ಯೋಜನೆಗೆ ರಾಹುಲ್, ಪ್ರಿಯಾಂಕಾ ಚಾಲನೆ: ಬೆಳಗಾವಿಯಲ್ಲಿ ಲೋಕಾರ್ಪಣೆ
ಗ್ಯಾರಂಟಿ ಯೋಜನೆಗಳಲ್ಲಿಯೇ ಮಹತ್ವದ್ದಾಗಿರುವ ಹಾಗೂ ಮನೆಯೊಡತಿಗೆ ಮಾಸಿಕ 2000 ರು. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಬೆಳಗಾವಿಯಲ್ಲಿ ಆ.20ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಚಾಲನೆ ನೀಡಲಿದ್ದಾರೆ.
ಬೆಂಗಳೂರು (ಆ.09): ಗ್ಯಾರಂಟಿ ಯೋಜನೆಗಳಲ್ಲಿಯೇ ಮಹತ್ವದ್ದಾಗಿರುವ ಹಾಗೂ ಮನೆಯೊಡತಿಗೆ ಮಾಸಿಕ 2000 ರು. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಬೆಳಗಾವಿಯಲ್ಲಿ ಆ.20ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಚಾಲನೆ ನೀಡಲಿದ್ದಾರೆ.
‘ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಆಹ್ವಾನಿಸಿತ್ತು. ಆದರೆ, ಅನಾರೋಗ್ಯದ ನಿಮಿತ್ತ ಸೋನಿಯಾ ಗಾಂಧಿ ಕಾರ್ಯಕ್ರಮದಲ್ಲಿ ಬರಲಾಗುವುದಿಲ್ಲ’ ಎಂದು ತಿಳಿಸಿದ್ದು, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಬೆಳಗಾವಿಯ ಕಾರ್ಯಕ್ರಮಕ್ಕೆ ಆಗಮಿಸಲು ಒಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎನ್‌ಆರ್‌ಐ ಫೋರಂಗೆ ಬಲ ತುಂಬಲು ಅನಿವಾಸಿ ಕನ್ನಡಿಗರ ಆಗ್ರಹ
ಯಶಸ್ಸಿಗೆ ಸಿಎಂ ಸೂಚನೆ: ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಯಶಸ್ವಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಶಾಸಕರು, ಸಚಿವರಿಗೆ ಸೂಚನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಶಾಸಕರೊಂದಿಗೆ ವೀಡಿಯೋ ಸಂವಾದ ನಡೆಸಿದ ಅವರು, ದೇಶದ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ಜನೋಪಯೋಗಿ ಯೋಜನೆಯಾಗುತ್ತಿರುವ ಗೃಹ ಲಕ್ಷ್ಮೀ ಯೋಜನೆಯನ್ನು ಶಾಸಕರು, ಸಚಿವರು ಒಟ್ಟಿಗೆ ಸೇರಿ ಯಶಸ್ವಿಗೊಳಿಸಬೇಕು. ಯೋಜನೆ ಕುರಿತು ನಿಮ್ಮ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಚಾರ ಮಾಡಬೇಕು ಎಂದು ಸೂಚಿಸಿದರು.
ಗೃಹ ಲಕ್ಷ್ಮೀ ಯೋಜನೆ ಮಾದರಿಯಾಗಿಟ್ಟುಕೊಂಡು ಬೇರೆ ರಾಜ್ಯಗಳಲ್ಲೂ ಅದನ್ನು ಜಾರಿ ಮಾಡಲಾಗುತ್ತಿದೆ. ಅದನ್ನು ಗಮನದಲ್ಲಿಟ್ಟುಕೊಂಡು ಯೋಜನೆ ಮತ್ತು ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಬಿಬಿಎಂಪಿ ಕಾಮಗಾರಿ ಬಿಲ್ ಪಾವತಿಗೆ ಕಮಿಷನ್: ಸಿಎಂಗೆ ದೂರು
1 ಕೋಟಿ ದಾಟಿದ ಗೃಹಲಕ್ಷ್ಮೀ ನೋಂದಣಿ: ಗೃಹ ಲಕ್ಷ್ಮೀ ಫಲಾನುಭವಿಗಳ ನೋಂದಣಿ ಸಂಖ್ಯೆ ಮಂಗಳವಾರ 1 ಕೋಟಿ ದಾಟಿದೆ. ಮಂಗಳವಾರ 10.94 ಫಲಾನುಭವಿಗಳು ನೋಂದಣಿಯಾಗಿದ್ದು, ಒಟ್ಟಾರೆ 1.03 ಕೋಟಿ ಮಹಿಳೆಯರಿಂದ ಅರ್ಜಿ ಸಲ್ಲಿಕೆಯಾಗಿದೆ.