ಚುನಾವಣೆ ಬಂದಾಗ ಮಾತ್ರ ಮೋದಿ ಕರ್ನಾಟಕಕ್ಕೆ ಭೇಟಿ ಕೊಡ್ತಾರೆ: ರಾಹುಲ್ ಗಾಂಧಿ ಆಕ್ರೋಶ
ಭ್ರಷ್ಟಾಚಾರದಿಂದ ಮಾಡಿದ ಹಣದಿಂದ ಸರ್ಕಾರ ರಚನೆ ಮಾಡಿದ್ದಾರೆ. ಈಗ ರಾಜ್ಯದಲ್ಲಿ ಯಾರನ್ನೇ ಕೇಳಿ 40 ಅಂದ್ರೆ ಏನೆಂದು ಎಂದು. ಎಲ್ಲರೂ ಭ್ರಷ್ಟಾಚಾರ ಅಂತಾರೆ ಎಂದು ವ್ಯಂಗ್ಯವಾಡಿದ್ದಾರೆ. ಈ ಬಾರಿಯೂ ಬಿಜೆಪಿಯವರು ಮತ್ತದೇ ಕಳ್ಳತನ ಸರ್ಕಾರ ಮಾಡಲು ಪ್ರಯತ್ನ ಮಾಡುತ್ತಾರೆ. ಹಾಗಾಗಿ, ಅವರಿಗೆ 40 ಅಂದ್ರೆ ತುಂಬಾ ಪ್ರೀತಿ ಹಾಗಾಗಿ, ಅವರಿಗೆ 40 ಸ್ಥಾನ ನೀಡಿ ಕಾಂಗ್ರೆಸ್ 150 ಸ್ಥಾನ ನೀಡಿ ಎಂದು ಮನವಿ ಮಾಡಿದ ರಾಹುಲ್ ಗಾಂಧಿ.
ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು
ಚಿಕ್ಕಮಗಳೂರು(ಮೇ.02): ಪ್ರಧಾನಿ ನರೇಂದ್ರ ಮೋದಿಯವರೇ, ನೀವು ಹೋದಲ್ಲೆಲ್ಲಾ ಬರೀ ನಿಮ್ಮ ಬಗ್ಗೆಯೇ ಹೇಳುತ್ತೀರಾ, ನಿಮ್ಮ ಬಗ್ಗೆ ನೀವೇ ಹೇಳುವುದನ್ನ ಬಿಟ್ಟು ಜನರ ಬಗ್ಗೆ, ಸರ್ಕಾರ ಅಧಿಕಾರಕ್ಕೆ ಬಂದರೆ ಜನರಿಗೆ ಏನು ಕೊಡ್ತೀರಾ ಅದನ್ನ ಹೇಳಿ ಎಂದು ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ರೋಡ್ ಶೋ ನಡೆಸಿ ತೆರೆದ ವಾಹನದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಬಿಜೆಪಿಯವರಿಗೆ 40 ಅಂದರೆ ತುಂಬಾ ಪ್ರೀತಿ. ಅವರಿಗೆ ಈ ಬಾರಿ 40 ಸ್ಥಾನಗಳನ್ನಷ್ಟೆ ಕೊಡಿ ಎಂದು ಮತದಾರರಿಗೆ ಮನವಿ ಮಾಡಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ
ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಕೈ ಅಭ್ಯರ್ಥಿಗಳ ಪರ ಮತಪ್ರಚಾರ ಮಾಡಿದ ರಾಹುಲ್ ಗಾಂಧಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದೊಂದು ಕಳ್ಳ ಸರ್ಕಾರ. ಈ ಸರ್ಕಾರ ಜನರ ಆಶೀರ್ವಾದದಿಂದ ಆದ ಸರ್ಕಾರವಲ್ಲ. ಕಳ್ಳತನ ಮಾಡಿದ ಸರ್ಕಾರ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗ್ಯಾರಂಟಿ ಈಡೇರಿಸದಿದ್ದರೆ ಓಟು ಕೇಳಲು ಬರಲ್ಲ: ಡಿ.ಕೆ.ಶಿವಕುಮಾರ್ ಶಪಥ
ಭ್ರಷ್ಟಾಚಾರದಿಂದ ಮಾಡಿದ ಹಣದಿಂದ ಸರ್ಕಾರ ರಚನೆ ಮಾಡಿದ್ದಾರೆ. ಈಗ ರಾಜ್ಯದಲ್ಲಿ ಯಾರನ್ನೇ ಕೇಳಿ 40 ಅಂದ್ರೆ ಏನೆಂದು ಎಂದು. ಎಲ್ಲರೂ ಭ್ರಷ್ಟಾಚಾರ ಅಂತಾರೆ ಎಂದು ವ್ಯಂಗ್ಯವಾಡಿದ್ದಾರೆ. ಈ ಬಾರಿಯೂ ಬಿಜೆಪಿಯವರು ಮತ್ತದೇ ಕಳ್ಳತನ ಸರ್ಕಾರ ಮಾಡಲು ಪ್ರಯತ್ನ ಮಾಡುತ್ತಾರೆ. ಹಾಗಾಗಿ, ಅವರಿಗೆ 40 ಅಂದ್ರೆ ತುಂಬಾ ಪ್ರೀತಿ ಹಾಗಾಗಿ, ಅವರಿಗೆ 40 ಸ್ಥಾನ ನೀಡಿ ಕಾಂಗ್ರೆಸ್ 150 ಸ್ಥಾನ ನೀಡಿ ಎಂದು ಮನವಿ ಮಾಡಿದ್ದಾರೆ. ನರೇಂದ್ರ ಮೋದಿಯವರು ಚುನಾವಣೆ ಸಮಯದಲ್ಲಿ ಮಾತ್ರ ರಾಜ್ಯಕ್ಕೆ ಭೇಟಿ ಕೊಡ್ತಾರೆ. ಆದರೆ, ಭ್ರಷ್ಟಾಚಾರದ ಬಗ್ಗೆ ಮಾತನಾಡಲ್ಲ. ಮೋದಿಯವರು ಕಂಟ್ರಾಕ್ಟರ್ ಸಂಘದ ಅಧ್ಯಕ್ಷ ಕೆಂಪಣ್ಣನವರ ಪತ್ರ ಉತ್ತರ ಕೊಡಲಿಲ್ಲಿ ಎಂದು ಲೇವಡಿ ಮಾಡಿದ್ದಾರೆ. ಭಾಷಣದ ವೇಳೆಯೂ ನಾವು ನಮ್ಮ ನಾಯಕರ ಎಲ್ಲರ ಹೆಸರು ಹೇಳುತ್ತೇವೆ. ಆದರೆ, ಮೋದಿಯವರು ಯಾರ ಹೆಸರನ್ನೂ ಹೇಳಲ್ಲ. ಬೊಮ್ಮಾಯಿ, ಬಿ.ಎಸ್.ವೈ ಸೇರಿದಂತೆ ಯಾರ ಹೆಸರನ್ನೂ ಹೇಳಲ್ಲ ಎಂದರು.