ನಾಡಿದ್ದು ಕರ್ನಾಟಕಕ್ಕೆ ರಾಹುಲ್ ಗಾಂಧಿ: ಕೋಲಾರದಲ್ಲಿ ಜೈ ಭಾರತ್ ರ‍್ಯಾಲಿ
ಭಾರತ್ ಜೋಡೋ ಯಾತ್ರೆಯ ನಂತರ ಹಾಗೂ ತಮ್ಮ ಲೋಕಸಭಾ ಸದಸ್ಯತ್ವ ರದ್ದಿನ ತೀರ್ಪು ಪ್ರಕಟವಾದ ಬಳಿಕ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ರಾಹುಲ್ ಗಾಂಧಿ.
ಬೆಂಗಳೂರು(ಏ.14): ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ಏ.16ರಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಅಂದು ಬೆಳಗ್ಗೆ 11 ಗಂಟೆಗೆ ಕೋಲಾರದಲ್ಲಿ ನಡೆಯಲಿರುವ ‘ಜೈ ಭಾರತ ಸಮಾವೇಶ’ದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಪಾಲ್ಗೊಳ್ಳಲಿದ್ದಾರೆ.
ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಭಾರತ್ ಜೋಡೋ ಯಾತ್ರೆಯ ನಂತರ ಹಾಗೂ ತಮ್ಮ ಲೋಕಸಭಾ ಸದಸ್ಯತ್ವ ರದ್ದಿನ ತೀರ್ಪು ಪ್ರಕಟವಾದ ಬಳಿಕ ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಏ.16ರಂದು ಬೆಳಗ್ಗೆ 11 ಗಂಟೆಗೆ ಕೋಲಾರದಲ್ಲಿ ನಡೆಯಲಿರುವ ‘ಜೈ ಭಾರತ ಸಮಾವೇಶ’ದಲ್ಲಿ ಪಾಲ್ಗೊಂಡು ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಉಪಸ್ಥಿತರಿರುವರು ಎಂದು ತಿಳಿಸಿದ್ದಾರೆ.
ಮೋದಿ ಸರ್‌ನೇಮ್ ಕೇಸ್, ಪಾಟ್ನಾ ಕೋರ್ಟ್‌ನಿಂದ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ!
ಅದೇ ದಿನ ಸಂಜೆ 6.10ಕ್ಕೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಭವನದ ಹಿಂಭಾಗದಲ್ಲಿ ನಿರ್ಮಿಸಿರುವ ನೂತನ ಕಟ್ಟಡ ‘ಇಂದಿರಾ ಗಾಂಧಿ ಭವನ’ವನ್ನು ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಲಿದ್ದು, ರಾಹುಲ್ ಗಾಂಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.