ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭೇಟಿಗೆ ಸಮಯವಕಾಶ ನೀಡದಿರುವುದು ಕುತೂಹಲ ಮೂಡಿಸಿದೆ.

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭೇಟಿಗೆ ಸಮಯವಕಾಶ ನೀಡದಿರುವುದು ಕುತೂಹಲ ಮೂಡಿಸಿದೆ.

Add Asianetnews Kannada as a Preferred SourcegooglePreferred

ಕಳೆದೆರಡು ದಿನದಿಂದ ದೆಹಲಿಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ವಿವಿಧ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ, ವಿಧಾನಪರಿಷತ್‌ ಸದಸ್ಯರ ನೇಮಕ ಸೇರಿ ವಿವಿಧ ವಿಷಯಗಳ ಬಗೆಗಿನ ಚರ್ಚೆಗೆ ಸುರ್ಜೇವಾಲಾ ಹಾಗೂ ರಾಹುಲ್‌ಗಾಂಧಿ ಭೇಟಿಗೆ ಇಬ್ಬರೂ ನಾಯಕರು ಪ್ರಯತ್ನಿಸಿದ್ದರು. ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು. ಆದರೆ, ರಾಹಲ್ ಅವರ ಭೇಟಿಯ ಅವಕಾಶ ದೊರೆಯಲಿಲ್ಲ.

- ಕುತೂಹಲ ಮೂಡಿಸಿದ ರಾಗಾ ನಡೆ

- 3 ದಿನದಿಂದ ದೆಹಲಿಯಲ್ಲಿರುವ ಡಿಸಿಎಂ

- ಎರಡು ದಿನದಿಂದ ಕಾಯುತ್ತಿರುವ ಸಿದ್ದು

ಭವಿಷ್ಯ ಭಾರತದ ನಾಯಕ, ಬಡವರ ಪರ ಧ್ವನಿ ಎತ್ತುವ ರಾಹುಲ್ ಗಾಂಧಿಯವರ ಕೈ ಬಲಪಡಿಸಿ: ಲತಾ ಮಲ್ಲಿಕಾರ್ಜುನ

ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ರಾಜಕೀಯ ಮನೆತನದಿಂದ ಬಂದಿದ್ದು, ಬಡವರ, ಶ್ರಮಿಕರ ಹಾಗೂ ದೇಶಕ್ಕಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.

ಪಟ್ಟಣದ ಕಾಂಗ್ರೆಸ್‌ ಭವನದಲ್ಲಿ ರಾಹುಲ್‌ ಗಾಂಧಿ ಜನ್ಮದಿನ ಉದ್ಘಾಟಿಸಿ ಮಾತನಾಡಿದರು. ರಾಹುಲ್‌ ಗಾಂಧಿ ಏಳು, ಬೀಳು ಸಮಸ್ಯೆ ಕಷ್ಟ ಸಹಿಸಿಕೊಂಡು ಜನರ ಪರವಾಗಿ ಲೋಕಸಭೆಯಲ್ಲಿ ಕೆಲಸ ಮಾಡುತ್ತಿದ್ದು, ವಿಪಕ್ಷ ನಾಯಕರಾಗಿ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

 ಹರಪನಹಳ್ಳಿ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ ಮಾತನಾಡಿ, ದೇಶ ಇಂದು ಸಂಕಷ್ಟದ ಪರಿಸ್ಥಿತಿಯಲ್ಲಿದೆ, ಸಂವಿಧಾನ ಇಕ್ಕಟ್ಟಿನಲ್ಲಿದೆ, ದೇಶ ಹಾಗೂ ಸಂವಿಧಾನ ಉಳಿಸುವ ಸಲುವಾಗಿ ರಾಹುಲ್‌ ಗಾಂಧಿ ಸಾವಿರಾರು ಕಿಮೀ ಪಾದಯಾತ್ರೆ ಮಾಡಿದ್ದರು ಎಂದು ಹೇಳಿದರು.

ದೇಶದ ಭವಿಷ್ಯದ ಮುಂಚೂಣಿ ನಾಯಕ ಹಾಗೂ ಜನರ ಧ್ವನಿಯಾಗಿ ಲೋಕಸಭೆಯಲ್ಲಿ ಕೆಲಸ ಮಾಡುತ್ತಿರುವ ರಾಹುಲ್‌ ಗಾಂಧಿ ಕೈ ನಾವು ನೀವು ಬಲಪಡಿಸಬೇಕಿದೆ ಎಂದು ನುಡಿದರು.

ಕಾಂಗ್ರೆಸ್‌ ಮುಖಂಡ ಬಸವರಾಜ ಸಂಗಪ್ಪನವರ್‌, ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ಕಂಚಿಕೇರಿ ಜಯಲಕ್ಷ್ಮಿ, ಚಿಗಟೇರಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕುಬೇರಗೌಡ, ಪುರಸಭಾ ಅಧ್ಯಕ್ಷೆ ಎಂ. ಫಾತೀಮಾಬಿ, ಪುರಸಭಾ ಹಿರಿಯ ಸದಸ್ಯ ಅಬ್ದುಲ್‌ ರಹಿಮಾನ್, ವಕೀಲರ ಸಂಘದ ಅಧ್ಯಕ್ಷ ಎಚ್‌.ವೆಂಕಟೇಶ, ಮತ್ತಿಹಳ್ಳಿ ಪಿ. ರಾಮಣ್ಣ ಮಾತನಾಡಿದರು.