ರಾಜಸ್ಥಾನ ಚುನಾವಣೆಗೆ 7 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಕರ್ನಾಟಕಕ್ಕಿಲ್ಲದ ಇನ್ನೆರಡು ಗ್ಯಾರಂಟಿ ಯಾವುವು?
ಕರ್ನಾಟಕದ ಮಾದರಿಯಲ್ಲಿಯೇ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ 7 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು, ಕರ್ನಾಟಕಕ್ಕೆ ಇಲ್ಲದ ಎರಡು ಗ್ಯಾರಂಟಿಗಳ ಮಾಹಿತಿ ಇಲ್ಲಿದೆ ನೋಡಿ.

ರಾಜಸ್ಥಾನ (ನ.21): ದೇಶದಲ್ಲಿ ಲೋಕಸಭಾ ಚುನಾವಣೆಗೂ ಮುನ್ನ ಪಂಚರಾಜ್ಯಗಳ ಚುನಾವಣೆ ನಡೆಯಲಿದೆ. ಇನ್ನೆರಡು ದಿನಗಳಾದರೆ ನ.25ರಂದು ರಾಜಸ್ಥಾನದ 200 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಕಾಂಗ್ರೆಸ್‌ನಿಂದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಇಲ್ಲಿ 7 ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಕರ್ನಾಟಕದಲ್ಲಿ 5 ಗ್ಯಾರಂಟಿ ಘೋಷಣೆ ಮಾಡಿ ಅಧಿಕಾರ ಹಿಡಿದ ಕರ್ನಾಟಕ ಈಗ, ರಾಜಸ್ಥಾನದಲ್ಲಿ 7 ಗ್ಯಾರಂಟಿ ಘೋಷಣೆ ಮಾಡಿದ್ದು, ಗೆಲ್ಲುವ ತವಕದಲ್ಲಿದೆ.
ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ 2,000 ರೂ. ಕೊಟ್ಟಿದೆ. ಆದರೆ, ರಾಜಸ್ಥಾನದಲ್ಲಿ ವಾರ್ಷಿಕ 10,000 ರೂ. ನೀಡುವುದಾಗಿ ಕಾಂಗ್ರೆಸ್ ಹೇಳಿದೆ. ಗೊಧನ್ ಯೋಜನೆಯಡಿ ಸರ್ಕಾರವು ಹಸುವಿನ ಸಗಣಿ ಪ್ರತಿ ಕೆಜಿಗೆ 2 ರೂ.ಯಲ್ಲಿ ಖರೀದಿ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್/ಟ್ಯಾಬ್ಲೆಟ್ ವಿತರಿಸಲಾಗುವುದು ಎಂದು ಘೋಷಣೆ ಮಾಡಿದೆ.
ಬೆಂಗಳೂರು ವಿದ್ಯುತ್ ತಂತಿ ತುಳಿದು ಸಾವು ಪ್ರಕರಣ: ಇಲಿ ಮೇಲೆ ಆರೋಪ ಹೊರಿಸಿದ ಬೆಸ್ಕಾಂ
ರಾಜಸ್ಥಾನ ವಿಧಾನಸಭೆ ಚುನಾವಣೆ (Rajasthan Assembly Elections) ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಭರ್ಜರಿ ಪ್ರಣಾಳಿಕೆ (Manifesto) ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪ್ರಣಾಳಿಕೆ ಬಿಡುಗಡೆ ಮಾಡಿದರು. ಪ್ರಣಾಳಿಕೆಯಲ್ಲಿ ರಾಜಸ್ಥಾನದ ಜನರಿಗೆ 7 ಗ್ಯಾರಂಟಿ (Congress Guarantee) ಘೋಷಿಸಿದ್ದು ಜೊತೆಗೆ ಜಾತಿ ಸಮೀಕ್ಷೆ ಮಾಡಲಾಗುತ್ತದೆ ಎಂದು ತಿಳಿಸಿದೆ. ಜೊತೆಗೆ, ಯುವಜನರಿಗೆ ಹೆಚ್ಚಾಗಿ ಉದ್ಯೋಗ ಅವಕಾಶ ಕಲ್ಪಿಸಿಕೊಡುವುದಾಗಿ ತಿಳಿಸಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಜಾತಿ ಗಣತಿ, ಪ್ರತಿ ಪಂಚಾಯತ್ ಮಟ್ಟದಲ್ಲಿ ಉದ್ಯೋಗ ಸೃಷ್ಟಿ ಮಾಡಲಾಗುವುದೆಂದು ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ.
- ರಾಜಸ್ತಾನದಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದ ಸಪ್ತ ಗ್ಯಾರಂಟಿಗಳು
- ಕರ್ನಾಟಕ ದಲ್ಲಿ ಪಂಚ ಗ್ಯಾರಂಟಿ ಘೋಷಣೆ ಮಾಡಿದ್ರೇ ರಾಜಸ್ಥಾನ ದಲ್ಲಿ ಸಪ್ತ ಗ್ಯಾರಂಟಿ ಘೋಷಣ
- ರಾಜ್ಯಸ್ಥಾನ ಸಿಎಂ ಅಶೋಕ್ ಗೆಹಲೋಟ್ ರಿಂದ ಘೋಷಣೆ
- ಗೃಹ ಲಕ್ಷ್ಮಿ ಯೋಜನೆ ಖಾತರಿಯಡಿಯಲ್ಲಿ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ವಾರ್ಷಿಕ ₹ 10,000 ಗೌರವಧನ
- ಪ್ರತಿ ಸಿಲಿಂಡರ್ ಗೆ ₹500ಯಂತೆ ಒಟ್ಟು 1.05 ಕೋಟಿ ಕುಟುಂಬಗಳಿಗೆ ಎಲ್‌ಪಿಜಿ ಸಿಲಿಂಡರ್
- ಗೋಧಾನ ಖಾತ್ರಿಯಡಿ ಪ್ರತಿ ಕೆ.ಜಿ.ಗೆ ಸಗಣಿಗೆ ₹2ರಂತೆ ಖರೀದಿ
- ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಗೆ ಕಾನೂನು
- ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಅಥವಾ ಟ್ಯಾಬ್ಲೆಟ್
- ಪ್ರಾಕೃತಿಕ ವಿಕೋಪದಿಂದ ಆಗುವ ನಷ್ಟವನ್ನು ಸರಿದೂಗಿಸಲು ಪ್ರತಿ ಕುಟುಂಬಕ್ಕೆ ₹15 ಲಕ್ಷದವರೆಗೆ ವಿಮಾ ರಕ್ಷಣೆ, ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ
- ಚಿರಂಜೀವಿ ಆರೋಗ್ಯ ವಿಮಾ ಯೋಜನೆ ₹25 ಲಕ್ಷದಿಂದ ₹50 ಲಕ್ಷಕ್ಕೆ ಏರಿಕೆ ಮಾಡುವ ಭರವಸೆ ನೀಡಿದೆ.
ರೈತರ ಬೆಳೆ ಕಟಾವಿಗೆ ಕಂಟಕವಾಗುವುದೇ 5 ದಿನ ನಿರಂತರ ಮಳೆ? ಹವಾಮಾನ ಇಲಾಖೆ ಎಚ್ಚರಿಕೆ!
ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಸಿಎಂ ಅಶೋಕ್ ಗೆಹ್ಲೋಟ್, ರಾಜ್ಯ ಸರ್ಕಾರದ ವತಿಯಿಂದ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಗಟ್ಟಲು ಪ್ರತ್ಯೇಕ ಕಾನೂನನ್ನು ಜಾರಿಗೊಳಿಸಲಾಗುವುದು. ನಮ್ಮ ಅಧಿಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳು ಹಾಗೂ ಕಾನೂನುಗಳು ಜನರ ಮೇಲೆ ಪ್ರಭಾವ ಬೀರಿದ್ದು, ಮತ್ತೊಮ್ಮೆ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ನಾವು ಘೋಷಿಸಿರುವ ಗ್ಯಾರಂಟಿಗಳನ್ನು ತಕ್ಷಣವೇ ಜಾರಿಗೆ ತರಲಾಗುವುದು. ನಾವು ಹಿಂದಿನ ಚುನಾವಣೆಯಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿದ್ದೇವೆ. ಅದೇ ರೀತಿ ಈ ಬಾರಿಯೂ ಸಹ ನಾವು ನುಡಿದಂತೆ ನಡೆಯುತ್ತೇವೆ ಎಂದು ಹೇಳಿದರು.