ಜೈಪುರ, (ನ.30): ಬಿಜೆಪಿ ಶಾಸಕರೊಬ್ಬರು ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. ರಾಜಸ್ಥಾನದ ರಾಜಸಾಮಂಡ್‌ನ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ ಸಾವನ್ನಪ್ಪಿದ್ದಾರೆ.

ಕೊರೋನಾ ಸೋಂಕಿನಿಂದ ಬಳಲುತ್ತಿದ್ದ 59 ವರ್ಷದ ಮಹೇಶ್ವರಿ ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಕೊರೊನಾ ಲಸಿಕೆ ಬಗ್ಗೆ ಭರವಸೆ, ಜೊತೆಗೆ ಆತಂಕವನ್ನೂ ವ್ಯಕ್ತಪಡಿಸಿದ ಪಿಎಂ; ಕಾರಣ..?

ಕಿರಣ್ ಮಹೇಶ್ವರಿ ಅವರು ರಾಜಸಾಮಂಡ್‌ ಕ್ಷೇತ್ರದಿಂದ ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಇನ್ನು ಇವರ ನಿಧನಕ್ಕೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಸೇರಿದಂತೆ ಹಲವು ಮುಖಂಡರುಗಳು ಸಂತಾಪ ಸೂಚಿಸಿದ್ದಾರೆ.

ಕರ್ನಾಟಕದಲ್ಲೂ ಸಹ ಜೆಡಿಎಸ, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರುಗಳು ಸಹ ಈ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.