ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಸರ್ಕಾರದ ವಿರುದ್ಧ ಬಿಜೆಪಿ ಶುಕ್ರವಾರ ಅವಿಶ್ವಾಸ ಗೊತ್ತುವಳಿಯೊಂದನ್ನು ಮಂಡಿಸಲು ನಿರ್ಧರಿಸಿದೆ. ಈ ಮಧ್ಯೆ ಅಶೋಕ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿರುವ ಸಚಿನ್‌ ಪೈಲಟ್‌ ಕೈ ಕುಲುಕಿ ಭಿನ್ನಾಭಿಪ್ರಾಯ ಕೊನೆಗೊಳಿಸುವ ಸೂಚನೆ ನೀಡಿದ್ದಾರೆ.

ರಾಜಸ್ಥಾನ ವಿಧಾನಸಭೆ ಅಧಿವೇಶನ ಶುಕ್ರವಾರದಿಂದ ಆರಂಭವಾಗಲಿದ್ದು, ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಕುರಿತಂತೆ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ಇತರ ಬಿಜೆಪಿ ಮುಖಂಡರು ಗುರುವಾರ ಮುಂಜಾನೆ ಸಭೆ ಸೇರಿ ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರ ವಿಶ್ವಾಸಮತ ಯಾಚನೆಗೆ ಸಿದ್ಧತೆ ಮಾಡಿಕೊಂಡಿದೆ. ಶುಕ್ರವಾರ ಅಧಿವೇಶನದ ವೇಳೆ ಗೆಹ್ಲೋಟ್‌ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡರೊಬ್ಬರು ತಿಳಿಸಿದ್ದಾರೆ.

ಬಂಡಾಯ ನಾಯಕ ಪೈಲಟ್ ಮೆತ್ತಗಾಗಿದ್ದರ ಅಸಲಿಯತ್ತು: ತೆರೆ ಹಿಂದಿನ ರಹಸ್ಯವಿದು!

ಇದೇ ವೇಳೆ ಸಚಿನ್‌ ಪೈಲಟ್‌ ಬಣದಲ್ಲಿ ಗುರುತಿಸಿಕೊಂಡಿದ್ದ ಇಬ್ಬರ ಶಾಸಕರಾದ ಭನ್ವರ್‌ಲಾಲ್‌ ಶರ್ಮಾ ಮತ್ತು ವಿಶ್ವೇಂದ್ರ ಸಿಂಗ್‌ ಅವರ ಅಮಾನತು ಆದೇಶವನ್ನು ಕಾಂಗ್ರೆಸ್‌ ಗುರುವಾರ ಹಿಂತೆದುಕೊಂಡಿದ್ದು, ಸರ್ಕಾರಕ್ಕೆ ಇನ್ನಷ್ಟು ಬಲ ಬಂದಂತಾಗಿದೆ. ಈ ಸಭೆಯಲ್ಲಿ ಕಾಂಗ್ರೆಸ್‌ ಮುಖಂಡರಾದ ಕೆ.ಸಿ. ವೇಣುಗೋಪಾಲ್‌, ರಣದೀಪ್‌ ಸುರ್ಜೇವಾಲ, ಅಜಯ್‌ ಮಕೇನ್‌ ಭಾಗಿಯಾಗಿದ್ದರು.