ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಾರಕಿಹೊಳಿಗೆ ರಕ್ಷಾ ಬಂಧನ

* ಇಂದು (ಆ.22) ರಕ್ಷಾಬಂಧನ ಹಿನ್ನೆಲೆ
* ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೂ ರಕ್ಷಾ ಬಂಧನ
* ಬಸವರಾಜ ಬೊಮ್ಮಾಯಿರಾಖಿ ಕಟ್ಟಿ ಶುಭ ಕೋರಿದ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಸಹೋದರಿಯರು

Raksha Bandhan Brahma Kumari Sisters ties Rakhi to CM Basavaraj Bommai rbj

ಬೆಂಗಳೂರು, (ಆ.22): ಇಂದು (ಆ.22) ರಕ್ಷಾಬಂಧನದ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಸಹೋದರಿಯರು ರಾಖಿ ಕಟ್ಟಿದ್ದಾರೆ. 

 ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಉಪ ವಲಯ‌ ಸಂಚಾಲಕರಾದ ಬಿ ಕೆ ಲೀಲಾ ಅವರು  ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರಿಗೆ ರಕ್ಷಾ ಬಂಧನ ಹಬ್ಬದ ಅಂಗವಾಗಿ ರಾಖಿ ಕಟ್ಟಿ ಶುಭ ಕೋರಿದರು. 

ಬೆಂಗಳೂರಿನ ಶಾಲಾ ಮಕ್ಕಳ ಜೊತೆ ರಕ್ಷಾ ಬಂಧನ ಆಚರಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು!

ಮುಖ್ಯಮಂತ್ರಿಗಳ ಆರ್ ಟಿ ನಗರ ನಿವಾಸದಲ್ಲಿ ಲೀಲಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಖಿ ಕಟ್ಟಿದರು. ರಾಖಿ ಕಟ್ಟಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಶ್ವರಿಯ ವಿಶ್ವವಿದ್ಯಾಲಯದ ಬ್ರಹ್ಮ ಕುಮಾರಿಯರಿಗೆ ಧನ್ಯವಾದಗಳನ್ನು ಅರ್ಪಿಸಿದರು.

ಇನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರೂ ರಕ್ಷಾ ಬಂಧನ ಆಚರಿಸಿದ್ದಾರೆ. ಗೋಕಾಕ ಶಾಸಕರಾಗಿರುವ ಅವರಿಗೆ ಬಿಜೆಪಿ ಕಾರ್ಯಕರ್ತೆಯರೂ ಹಾಗೂ ಅವರ ಸಾಮಾಜಿಕ ಜೀವನದ ಸಹೋದರಿಯರು ರಾಖಿ ಕಟ್ಟಿದ್ದಾರೆ.

Latest Videos
Follow Us:
Download App:
  • android
  • ios