Asianet Suvarna News Asianet Suvarna News

ಬೆಂಗಳೂರಲ್ಲಿ ಶೀಘ್ರ 1 ಲಕ್ಷ ಜನರ ಸೇರಿಸಿ ರ್‍ಯಾಲಿ: ಬಿಎಸ್‌ವೈ ಹೇಳಿದ್ದೇನು?

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಅಭಿನಂದನೆ ಸಲ್ಲಿಸಲು ಬೆಂಗಳೂರಲ್ಲಿ 1 ಲಕ್ಷ ಜನರನ್ನು ಸೇರಿಸಿ ದೊಡ್ಡ ಸಮಾರಂಭ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

Rally to gather 1 lakh people soon in Bengaluru Says BS Yediyurappa gvd
Author
First Published Nov 16, 2023, 9:44 AM IST

ಬೆಂಗಳೂರು (ನ.16): ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಅಭಿನಂದನೆ ಸಲ್ಲಿಸಲು ಬೆಂಗಳೂರಲ್ಲಿ 1 ಲಕ್ಷ ಜನರನ್ನು ಸೇರಿಸಿ ದೊಡ್ಡ ಸಮಾರಂಭ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. ಬುಧವಾರ ಬಿಜೆಪಿ ಕಚೇರಿಯಲ್ಲಿ ವಿಜಯೇಂದ್ರ ಅವರು ಪಕ್ಷದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಆದೇಶದಂತೆ ವಿಜಯೇಂದ್ರ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸಲು ಅಮಿತ್‌ ಶಾ ಅವರನ್ನು ಬೆಂಗಳೂರಿಗೆ ಕರೆಸಿ ಒಂದು ಲಕ್ಷ ಜನ ಸೇರಿಸಿ ದೊಡ್ಡ ಸಮಾರಂಭ ಮಾಡುವ ಆಪೇಕ್ಷೆ ಇದೆ ಎಂದರು. ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ವಿಜಯೇಂದ್ರ ಅವರನ್ನು ಘೋಷಣೆ ಮಾಡಿದ ಬಳಿಕ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಬಂದಿದೆ. ಮುಂದಿನ ದಿನದಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷವನ್ನು ಮತ್ತಷ್ಟು ಬಲಗೊಳಿಸಲಾಗುವುದು ಎಂದು ಹೇಳಿದರು.

ರಾಜ್ಯಾಧ್ಯಕ್ಷರಿಗೆ ಶಾಸಕ ಚವ್ಹಾಣ್‌, ಸಲಗರ ಅಭಿನಂದನೆ: ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ವಿಜಯೇಂದ್ರ ಯಡಿಯೂರಪ್ಪ ಅವರನ್ನು ಔರಾದ್‌ ಶಾಸಕ ಪ್ರಭು ಚವ್ಹಾಣ್‌ ಹಾಗೂ ಬಸವಕಲ್ಯಾಣ ಶಾಸಕ ಶರಣು ಸಲಗರ ಅವರು ಬೆಂಗಳೂರಿನಲ್ಲಿ ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದಿಸಿದರು. ಬಳಿಕ ಮಾತನಾಡಿದ ಚವ್ಹಾಣ್‌, ಅವರ ತಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಂತೆ ಅತ್ಯಂತ ಕ್ರಿಯಾಶೀಲವಾಗಿ, ಸಂಘಟನಾ ಚತುರರಾಗಿ ಜನರನ್ನು ಆಕರ್ಷಿಸುವ ಶಕ್ತಿಯನ್ನು ವಿಜಯೇಂದ್ರ ಹೊಂದಿದ್ದಾರೆ. ಅವರ ಕೆಲಸವನ್ನು ಗಮನಿಸಿಯೇ ವರಿಷ್ಠರು ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಾರೆ. ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಲಿದ್ದಾರೆ ಎಂದರು.

ಇನ್ನೆಂದೂ ಇಂಥ ಘಟನೆ ಆಗದಂತೆ ನೋಡಿಕೊಳ್ಳುವೆ: ಪೊಲೀಸ್ ವಿಚಾರಣೆ ವೇಳೆ ನಟ ದರ್ಶನ್ ಮಾತು

ಶಿಕಾರಿಪುರ ಕ್ಷೇತ್ರದ ಜನಪ್ರೀಯ ಶಾಸಕರಾಗಿರುವ ವಿಜಯೇಂದ್ರ ಅವರು ಯುವ ಸಂಘಟಕರಾಗಿದ್ದು, ಪಕ್ಷದ ಸರ್ವರೂ ಇಷ್ಟಪಡುವ, ಎಲ್ಲಾ ಸಮುದಾಯದವರು ಬೆಂಬಲಿಸುವ ನಾಯಕರಾಗಿದ್ದಾರೆ. ಇವರ ನೇಮಕದಿಂದ ಪಕ್ಷಕ್ಕೆ ಹೊಸ ಚೈತನ್ಯ ಸಿಕ್ಕಿದೆ. ಇವರ ನೇತೃತ್ವದಲ್ಲಿ ಪಕ್ಷವು ಇನ್ನಷ್ಟು ಬಲಿಷ್ಟವಾಗಿ ಬೆಳೆಯಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಸವಕಲ್ಯಾಣ ಕ್ಷೇತ್ರದ ಶಾಸಕ ಶರಣು ಸಲಗರ ಹಾಗೂ ಇತರರು ಉಪಸ್ಥಿತರಿದ್ದರು.

Follow Us:
Download App:
  • android
  • ios