ಪಕ್ಷದ ಬಗ್ಗೆ ನಿಷ್ಠೆ ಮತ್ತು ಯಾವುದೇ ಷರತ್ತುಗಳಿಲ್ಲದೆ ಯಾರೇ ಪಕ್ಷಕ್ಕೆ ಬಂದರೂ ಸ್ವಾಗತಿಸುವುದಾಗಿ ತಿಳಿಸಿದರು. ಉತ್ತರದ ಮೂರು ರಾಜ್ಯಗಳ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ನಮ್ಮ ರಾಜ್ಯದಲ್ಲೂ 150 ಸ್ಥಾನಗಳನ್ನು ಪಡೆದು ಮತ್ತೆ ಅಧಿಕಾರವನ್ನು ಪಡೆಯುವುದು ಖಚಿತವೆಂದ ನಳಿನ್‌ ಕುಮಾರ್‌ ಕಟೀಲ್‌ 

ಶಿಡ್ಲಘಟ್ಟ(ಮಾ.10): ಬೆಂಗಳೂರು ನಗರದ ಬಿಜೆಪಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಸೀಕಲ್‌ ರಾಮಚಂದ್ರೇ ಗೌಡ ಮತ್ತು ಜೆಟಿ ದೇವೇಗೌಡ ರವರ ಅಳಿಯ ಆನಂದ್‌ ಗೌಡ ರವರು ಬಿಜೆಪಿಗೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ, ಪಕ್ಷದ ಬಗ್ಗೆ ನಿಷ್ಠೆ ಮತ್ತು ಯಾವುದೇ ಷರತ್ತುಗಳಿಲ್ಲದೆ ಯಾರೇ ಪಕ್ಷಕ್ಕೆ ಬಂದರೂ ಸ್ವಾಗತಿಸುವುದಾಗಿ ತಿಳಿಸಿದರು. ಉತ್ತರದ ಮೂರು ರಾಜ್ಯಗಳ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ನಮ್ಮ ರಾಜ್ಯದಲ್ಲೂ 150 ಸ್ಥಾನಗಳನ್ನು ಪಡೆದು ಮತ್ತೆ ಅಧಿಕಾರವನ್ನು ಪಡೆಯುವುದು ಖಚಿತವೆಂದರು.

CHIKKABALLAURA : ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಜಿಲ್ಲೆಗೆ ಶಾಶ್ವತ ನೀರು

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಸೀಕಲ್‌ ರಾಮಚಂದ್ದೇ ಗೌಡ ತಮ್ಮ ನೂರಾರು ಬೆಂಬಲಿಗರೊಂದಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ತಾಲ್ಲೂಕು ಬಿಜೆಪಿ ಅಧ್ಯಕ್ಷ ಕಂಬದ ಹಳ್ಳಿ ಸುರೇಂದ್ರ ಗೌಡ ಹಾಗೂ ಮಾಜಿ ಶಾಸಕ ಎಂ. ರಾಜಣ್ಣ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

ಸೇರ್ಪಡೆಯ ನಂತರ ಮಾತನಾಡಿದ ರಾಮಚಂದ್ರ ಗೈಡ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸರ್ಕಾರಗಳ ಅವಧಿಯಲ್ಲಿ ಶಿಡ್ಲಘಟ್ಟ ತಾಲೂಕು ಯಾವುದೇ ಅಭಿವೃದ್ಧಿಯನ್ನು ಕಂಡಿಲ್ಲ ತಾಲೂಕಿನ ಯಾವುದೇ ಸಮಸ್ಯೆಗಳ ಬಗ್ಗೆ ಕಿಂಚಿತ್ತೂ ಸ್ಪಂದಿಸಿಲ್ಲ. ಆದರೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಜನರ ಮೂಲಭೂತ ಸೌಕರ್ಯಗಳ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದು ರೈತರ ಮತ್ತು ನಿರುದ್ಯೋಗ ಸಮಸ್ಯೆಗಳ ನಿವಾರಣೆಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಜನರು ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಬಯಸುತ್ತಿದ್ದಾರೆ ಎಂದರು.