ರಾಮನಗರ, (ನ. 06): ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತ ಎಣಿಕೆಗೂ ಮುನ್ನವೇ ಜೆಡಿಎಸ್ ಕಾರ್ಯಕರ್ತರ ಸಂಭ್ರಮಾಚರಣೆ ಜೋರಾಗಿ ನಡೆದಿದೆ.

ಬಿಜೆಪಿ ಅಭ್ಯರ್ಥಿ ಚಂದ್ರ ಶೇಖರ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದರಿಂದ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿವುದು ಬಹುತೇಕ ಪಕ್ಕಾ ಆಗಿದೆ.

ಕರ್ನಾಟಕ ಉಪಚುನಾವಣೆ ಫಲಿತಾಂಶ Live Updates

 ಮತ ಎಣಿಕೆ ಆರಂಭವಾಗುವ ಮೊದಲೇ ರಾಮನಗರದಲ್ಲಿ ಅಲ್ಲಲ್ಲಿ 'ಅನಿತಾ ಕುಮಾರಸ್ವಾಮಿ ಜಯಭೇರಿ' ಎಂಬ ಬ್ಯಾನರ್ ಗಳು ಕಾಣಿಸಿಕೊಳ್ಳುತ್ತಿವೆ. ಮಾಹಿತಿ ಪ್ರಕಾರ ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಬಾರೀ ಮುನ್ನಡೆ ಸಾಧಿಸಿದ್ದು, ಬಹುತೇಕ ಗೆಲುವು ಖಚಿತ.

ನ.3 ರಂದು ನಡೆದ ರಾಮನಗರ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು [ಮಂಗಳವಾರ] ಹೊರಬೀಳುತ್ತಿದ್ದು, ಈ ಕ್ಷೇತ್ರದಲ್ಲಿ ಜೆಡಿಎಸ್ ನ ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಮತ್ತು ರಾಮನಗರ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಜಯಗಳಿಸಿದ್ದರು. 

ನಂತರ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಂಡಿದ್ದರಿಂದ ರಾಮನಗರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿತ್ತು. ನ.3 ರಂದು ಚುನಾವಣೆ ನಡೆದಿತ್ತು.