ರಾಮನಗರದಲ್ಲಿ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಚಂದ್ರಶೇಖರ್ ಅವರು ಕಣದಿಂದಲೇ ಹಿಂದೆ ಸರಿದ್ದು ಇದು ಬಿಜೆಪಿಗೆ ಬಿಗ್ ಶಾಕ್ ಆಗಿತ್ತು. ಆದರೆ ಇದೀಗ ಬಿಜೆಪಿ ಜಿಲ್ಲಾಧ್ಯಕ್ಷರೂ ಕೂಡ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. 

ರಾಮನಗರ: ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಶ್ ಅವರು ಜಿಲ್ಲೆಯಲ್ಲಿ ನಡೆದ ರಾಜಕೀಯ ಬೆಳವಣಿಗೆಯಿಂದ ಮನನೊಂದು ರಾಜೀನಾಮೆಯತ್ತ ಮನಸ್ಸು ಮಾಡಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಚಂದ್ರಶೇಖರ್ ಅವರು ಚುನಾವಣಾ ಕಣದಿಂದಲೇ ನಿವೃತ್ತರಾದರು. ಕಾಂಗ್ರೆಸ್ ನಲ್ಲಿದ್ದ ಚಂದ್ರಶೇಖರ್ ಅವರನ್ನು ಬಿಜೆಪಿಗೆ ಕರೆ ತರುವಲ್ಲಿ ರುದ್ರೇಶ್ ಪ್ರಮುಖ ಪಾತ್ರ ವಹಿಸಿದ್ದರು. 

ಆದರೆ ಇದೀಗ ಇಂತಹ ಬೆಳವಳಿಗೆ ಅವರನ್ನು ರಾಜೀನಾಮೆಯತ್ತ ಮನಸ್ಸು ಮಾಡಲು ಕಾರಣವಾಗಿದೆ ಎನ್ನುವ ಮಾತುಗಳು ಕೇಳಿ ಬಂದಿದೆ. 

ಆದರೆ ಈ ಬಗ್ಗೆ ಮಾತನಾಡಿರುವ ರುದ್ರೇಶ್ ಈ ಬಗ್ಗೆ ಭಾನುವಾರ ಸುದ್ದಿಗೋಷ್ಠಿ ನಡೆಸಿ ಎಲ್ಲಾ ವಿಚಾರಗಳನ್ನು ತಿಳಿಸುತ್ತೇನೆ ಎಂದಿದ್ದಾರೆ. ಅಲ್ಲದೇ ನಾನಿಲ್ಲೂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎಂದಿದ್ದು ಪಕ್ಷದ ಮುಖಂಡರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.