Asianet Suvarna News Asianet Suvarna News

ಸರ್ಕಾರ ಬೀಳಿಸೋ ಶಕ್ತಿ ಇರೋದು ರಮೇಶ್‌ಗಷ್ಟೇ: ಸತೀಶ್‌ ಜಾರಕಿಹೊಳಿ

ಸರ್ಕಾರ ಬೀಳಿಸುವ ಶಕ್ತಿ ರಮೇಶರಲ್ಲಿ ಮಾತ್ರ ಇದೆ. ಅವರು ಮತ್ತೊಮ್ಮೆ ಸರ್ಕಾರ ಬೀಳಿಸುವ ಪ್ರಯತ್ನ ಮಾಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. 

ramesh jarakiholi has the power to topple the government says satish jarkiholi gvd
Author
First Published Sep 25, 2022, 2:45 AM IST

ಗೋಕಾಕ (ಸೆ.25): ಸರ್ಕಾರ ಬೀಳಿಸುವ ಶಕ್ತಿ ರಮೇಶರಲ್ಲಿ ಮಾತ್ರ ಇದೆ. ಅವರು ಮತ್ತೊಮ್ಮೆ ಸರ್ಕಾರ ಬೀಳಿಸುವ ಪ್ರಯತ್ನ ಮಾಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಶನಿವಾರ ನಗರದಲ್ಲಿ ನಡೆದ ಉಪ್ಪಾರ ಸಮಾಜದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಾರಕಿಹೊಳಿ ಕುಟುಂಬದಲ್ಲಿ ಪ್ರಸ್ತುತ ನಾವು ನಾಲ್ಕು ಜನ ಸಹೋದರರು ಅಧಿಕಾರದಲ್ಲಿ ಇದ್ದರೂ ನಮ್ಮ ನಡೆ, ನುಡಿಗಳು ಬೇರೆ, ಬೇರೆಯಾಗಿವೆ. 

ಸರ್ಕಾರ ಬೀಳಿಸುವ ಕಾರ್ಯ ಶಾಸಕ ರಮೇಶ ಜಾರಕಿಹೊಳಿ ಅವರಿಂದ ಮಾತ್ರ ಸಾಧ್ಯ. ನಾನು ರಮೇಶ ಜಾರಕಿಹೊಳಿ ಅವರಲ್ಲಿ ವಿನಂತಿ ಮಾಡಿಕೊಳ್ಳುತ್ತೇನೆ. ಅವರು ಮತ್ತೊಮ್ಮೆ ಅಂತಹ ಪ್ರಯೋಗ ಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು. ಜಾರಕಿಹೊಳಿ ಸಹೋದರಿಗೆ ಸರ್ಕಾರ ಉರಳಿಸುವ ಶಕ್ತಿ ಇದೆ ಎಂದು ಹೇಳುತ್ತಾರೆ. ಆದರೆ, ನಾವು ನಾಲ್ವರು ಒಂದೇ ಎಂದು ಭಾವಿಸಬಾರದು. ಸರ್ಕಾರ ಉರಳಿಸುವ ಶಕ್ತಿ ರಮೇಶ್‌ ಜಾರಕಿಹೊಳಿ ಮಾತ್ರ ಇದೆ. ಉಳಿದ ಸಹೋದರರು ಸರ್ಕಾರ ಉರಳಿಸುವುದರ ಭಾಗವಾಗುವುದಿಲ್ಲ ಎಂದು ಹೇಳಿದರು.

ನಮ್‌ ತಾಕತ್‌ ಚುನಾವಣೆಯಲ್ಲಿ ತೋರಿಸಿದ್ದೇವೆ: ಸಿಎಂ ಬೊಮ್ಮಾಯಿಗೆ ಜಾರಕಿಹೊಳಿ ಟಾಂಗ್‌

ಮಕ್ಕಳ ಭವಿಷ್ಯದ ಚಿಂತನೆ ಆಗಬೇಕು: ಮಕ್ಕಳೇ ಸಮಾಜದ ಆಸ್ತಿಯಾಗಿದ್ದು, ಅವರಿಗೆ ಗುಣಮಟ್ಟದ ಶಿಕ್ಷಣ ನೀಡಿ ಸಮಾಜದ ಆಸ್ತಿಯನ್ನಾಗಿ ಮಾಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಶನಿವಾರ ನಗರದ ಮಹಾಲಕ್ಷ್ಮೀ ಸಭಾ ಭವನದಲ್ಲಿ ಗೋಕಾಕ ಮತ್ತು ಮೂಡಲಗಿ ಭಗೀರಥ ಉಪ್ಪಾರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡ ಬೆಳಗಾವಿ ಜಿಲ್ಲಾಮಟ್ಟದ ಉಪ್ಪಾರ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಎಲ್ಲ ಸಮುದಾಯದ ಮಕ್ಕಳು ಉತ್ತಮ ಸಾಧಕರಾಗುತ್ತಿದ್ದು, ಅವರ ಮುಂದಿನ ಭವಿಷ್ಯದ ಚಿಂತನೆ ಆಗಬೇಕು. ಸಮಾಜದ ಮುಖಂಡರು ಉನ್ನತ ಹುದ್ದೆಯಲ್ಲಿರುವವರು ಅವರ ಭವಿಷ್ಯಕ್ಕೆ ಸಹಕಾರ ನೀಡಬೇಕು. ಸ್ವಾಮೀಜಿ ಅವರ ಹೋರಾಟದಿಂದ ಇಂದು ಸಮಾಜ ಜಾಗೃತವಾಗಿ ರಾಜ್ಯದಲ್ಲಿ ಗುರುತಿಸಿಕೊಳ್ಳುತ್ತಿದೆ. ಸಮಾಜಬಾಂಧವರು ಸಂಘಟಿತರಾಗಿ ಅವರನ್ನು ಬೆಂಬಲಿಸಬೇಕು. ವಿದ್ಯಾರ್ಥಿಗಳು ಉನ್ನತ ಹುದ್ದೆಗೆ ಪ್ರಯತ್ನಶೀಲರಾಗಿ ಅದರೊಂದಿಗೆ ಕೃಷಿ ಹಾಗೂ ಉದ್ಯೋಗಗಳಿಗೂ ಹೆಚ್ಚಿನ ಮಹತ್ವ ನೀಡಿ ಸಮಾಜದ ಅಭಿವೃದ್ಧಿಗೆ ಶ್ರಮಿಸುವಂತೆ ಹೇಳಿದರು.

ಇತಿಹಾಸ ಬಲ್ಲವರು ಇತಿಹಾಸ ನಿರ್ಮಿಸುತ್ತಾರೆ. ಆ ನಿಟ್ಟಿನಲ್ಲಿ ಎಲ್ಲರೂ ಇತಿಹಾಸ ತಿಳಿದುಕೊಳ್ಳಬೇಕು. ಪ್ರಸ್ತುತ ದಿನಗಳಲ್ಲಿ ಎಲ್ಲಾ ಸಮಾಜದವರಿಗೆ ಮೀಸಲಾತಿ ಒಂದು ದೊಡ್ಡ ಗೊಂದಲ ಆಗಿಬಿಟ್ಟಿದೆ. ಬಾಬಾಸಾಹೇಬ ಅಂಬೇಡ್ಕರ್‌ ಮೀಸಲಾತಿಯನ್ನು ಕೆವಲ ಹತ್ತು ವರ್ಷಕ್ಕೆ ಅಷ್ಟೇ ಮಾಡಿದ್ದರು. ಆದರೆ ಇದು ಇನ್ನುವರೆಗೂ ಪೂರೈಸಿಲ್ಲ. ಅಂಬೇಡ್ಕರ್‌ ಅವರನ್ನು ದೂರವಿಟ್ಟುವರೇ ಇಂದು ಅಂಬೇಡ್ಕರ್‌ ಭಾವಚಿತ್ರ ಇಟ್ಟು ಹೋರಾಟ ಮಾಡುತ್ತಿದ್ದಾರೆ. ಅಂಬೇಡ್ಕರ್‌ ತತ್ವಗಳನ್ನು ಬಿಟ್ಟರೆ ಏನು ಸಾಧಿಸಲೂ ಸಾಧ್ಯವಿಲ್ಲ ಎಂದರು.

ಬಿಜೆಪಿಗರಿಗೆ ಸುಳ್ಳನ್ನು ನಿಜ ಮಾಡೋದು, ನಿಜವನ್ನು ಸುಳ್ಳು ಮಾಡೋದು ಬಿಟ್ಟರೆ ಬೇರೆ ಏನು ಗೊತ್ತಿಲ್ಲ: ಜಾರಕಿಹೊಳಿ

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಗಿರೀಶ ಉಪ್ಪಾರ ರಾಜ್ಯದಲ್ಲಿ ಒಟ್ಟು 36 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ್ಪಾರ ಸಮಾಜದ ಪ್ರಾಬಲ್ಯವಿದೆ. ಬೆಳಗಾವಿ ಜಿಲ್ಲೆಯ 9 ಕ್ಷೇತ್ರಗಳಲ್ಲಿ ಸಮಾಜದ ಮತಗಳು ನಿರ್ಣಾಯಕವಾಗಿವೆ. ಬರುವ ಚುನಾವಣೆಯಲ್ಲಿ ಕನಿಷ್ಟ4 ರಿಂದ 5 ಕ್ಷೇತ್ರಗಳಲ್ಲಿಯಾದರೂ ಗೆಲ್ಲಲೇಬೇಕು ಎನ್ನುವ ಹಠದಿಂದ ಎಲ್ಲ ಕಡೆ ಸಂಘಟನೆ ಮಾಡುತ್ತಿದ್ದೇವೆ. ಉಳಿದ ಕ್ಷೇತ್ರಗಳಲ್ಲಿ ನಾವು ಗೆಲ್ಲದಿದ್ದರೂ ಅಲ್ಲಿಯ ಅಭ್ಯರ್ಥಿಯನ್ನು ಸೋಲಿಸುವಷ್ಟುಶಕ್ತಿ ಹೊಂದಿದ್ದೇವೆ. ಪೂಜ್ಯರ ನೇತೃತ್ವದಲ್ಲಿ ನಾವೆಲ್ಲ ಸಂಘಟಿತರಾಗಿ ಸಮಾಜದ ಅಭಿವೃದ್ಧಿಗೆ ಶ್ರಮಿಸೋಣ ಎಂದರು.

Follow Us:
Download App:
  • android
  • ios