ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ ಮಧ್ಯೆ ಎರಡು ಹೊಸ ಜಿಲ್ಲಾ ಉಸ್ತುವಾರಿಗಳ ನೇಮಕ
ಕೊರೋನಾ ವೈರಸ್ ಬಿಕ್ಕಟ್ಟಿನ ನಡುವೆ ರಾಜ್ಯ ಸರ್ಕಾರ ಎರಡು ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು, (ಜೂನ್, 02): ಬೆಳಗಾವಿ ಹಾಗೂ ಹಾಸನ ಜಿಲ್ಲೆಗಳಿಗೆ ನೂತನ ಉಸ್ತುವಾರಿ ಸಚಿವರ ನೇಮಕವಾಗಿದೆ.
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ಅವರಿಗೆ ಕೊನೆಗೂ ಬೆಳಗಾವಿ ಉಸ್ತುವಾರಿಯಾಗಿದ್ದರೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕೆ. ಗೋಪಾಲಯ್ಯನವರಿಗೆ ಹಾಸನ ಜಿಲ್ಲಾ ಜವಾಬ್ದಾರಿ ವಹಿಸಲಾಗಿದೆ.
ಎರಡೂ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ ಮಾಡಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸೌಭಾಗ್ಯ ಇಂದು (ಮಂಗಳವಾರ) ಆದೇಶ ಹೊರಡಿಸಿದ್ದಾರೆ.
ಸುವರ್ಣ ಸ್ಪೆಷಲ್: ಬಿಎಸ್‌ವೈ ವಿರುದ್ಧ ಬಂಡೆದ್ದವರ ಬುಡದಲ್ಲಿಯೇ ಸ್ಫೋಟ
ಈ ಹಿಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ರಮೇಶ್ ಜಾರಕಿಹೊಳಿ, ಕೆ. ಗೋಪಾಲಯ್ಯ ಮತ್ತು ಶ್ರೀಮಂತ ಪಾಟೀಲ್ ಗೆ ಯಾವುದೇ ಜಿಲ್ಲಾ ಉಸ್ತುವಾರಿ ನೀಡಲಾಗಿರಲಿಲ್ಲ.
ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರನ್ನೇ ಬೆಳಗಾವಿಯ ಉಸ್ತುವಾರಿಗೂ ನೇಮಿಸಲಾಗಿತ್ತು. ಇನ್ನು ಸಚಿವ ಮಾಧುಸ್ವಾಮಿ ಅವರಿಗೆ ಹೆಚ್ಚುವರಿಯಾಗಿ ಹಾಸನ ಜಿಲ್ಲಾ ಉಸ್ತುವಾರಿ ನೀಡಲಾಗತ್ತು.
ಇದೀಗ ದಿಢೀರ್ ಎರಡು ಜಿಲ್ಲೆಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಿರುವುದು ಹಲವು ರಾಜಕೀಯ ಲೆಕ್ಕಾಚಾರಗಳ ಆರಂಭಕ್ಕೆ ಕಾರಣವಾಗಿದೆ.