ಸವದಿ ಬದಲು ಕುಮಟಳ್ಳಿಗೆ ಟಿಕೆಟ್: ಜಾರಕಿಹೊಳಿ ಪಟ್ಟು
ಅಥಣಿ ಕ್ಷೇತ್ರ ಚರ್ಚೆಗೆ ಬಂದಾಗ ಟಿಕೆಟ್ ಆಕಾಂಕ್ಷಿ ಲಕ್ಷ್ಮಣ ಸವದಿ ಹೆಸರು ಪ್ರಸ್ತಾಪಿಸದೆ ತಮ್ಮ ಬೆಂಬಲಿಗ ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡಬೇಕು. ಅಂತೆಯೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸುವ ಹೊಣೆ ತಮ್ಮದು. ಹೀಗಾಗಿ ನಾಗೇಶ್ ಮನ್ನೋಳ್ಕರಗೆ ಹಾಗೂ ಕಾಗವಾಡ ಕ್ಷೇತ್ರದಲ್ಲಿ ಶ್ರೀಮಂತ ಪಾಟೀಲ್‌ಗೆ ಟಿಕೆಟ್ ನೀಡುವಂತೆ ಜಾರಕಿಹೊಳಿ ಸಭೆಯಲ್ಲಿ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು(ಏ.02): ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರಕ್ಕೆ ತಮ್ಮ ಪರಮಾಪ್ತ ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡುವುದು ಸೇರಿದಂತೆ ಕೆಲವು ಕ್ಷೇತ್ರಗಳಲ್ಲಿ ತಾವು ಹೇಳಿದವರಿಗೆ ಟಿಕೆಟ್ ನೀಡುವಂತೆ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಬೆಳಗಾವಿ ಜಿಲ್ಲಾ ಕೋರ್ ಕಮಿಟಿ ಸಭೆಯಲ್ಲಿ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.
ಶನಿವಾರ ನಗರದ ಹೊರವಲಯದ ಖಾಸಗಿ ರೆಸಾರ್ಚ್‌ನಲ್ಲಿ ನಡೆದ ಸಭೆಯಲ್ಲಿ ಬೆಳಗಾವಿ ನಗರ, ಬೆಳಗಾವಿ ಗ್ರಾಮಾಂತರ ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್ ನೀಡುವ ಸಂಬಂಧ ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಯಿತು. ಈ ವೇಳೆ ರಮೇಶ್ ಜಾರಕಿಹೊಳಿ ಅವರು ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಅವಧಿಯಲ್ಲಿ ಭಾರತವನ್ನ ಹೀಯಾಳಿಸಲಾಗ್ತಿತ್ತು: ಲಕ್ಷ್ಮಣ ಸವದಿ
ಅಥಣಿ ಕ್ಷೇತ್ರ ಚರ್ಚೆಗೆ ಬಂದಾಗ ಟಿಕೆಟ್ ಆಕಾಂಕ್ಷಿ ಲಕ್ಷ್ಮಣ ಸವದಿ ಹೆಸರು ಪ್ರಸ್ತಾಪಿಸದೆ ತಮ್ಮ ಬೆಂಬಲಿಗ ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡಬೇಕು. ಅಂತೆಯೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸುವ ಹೊಣೆ ತಮ್ಮದು. ಹೀಗಾಗಿ ನಾಗೇಶ್ ಮನ್ನೋಳ್ಕರಗೆ ಹಾಗೂ ಕಾಗವಾಡ ಕ್ಷೇತ್ರದಲ್ಲಿ ಶ್ರೀಮಂತ ಪಾಟೀಲ್‌ಗೆ ಟಿಕೆಟ್ ನೀಡುವಂತೆ ಜಾರಕಿಹೊಳಿ ಸಭೆಯಲ್ಲಿ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.
ಅಭ್ಯರ್ಥಿ ಆಯ್ಕೆಯಲ್ಲಿ ಬಿಜೆಪಿ ಎಚ್ಚರಿಕೆ ನಡೆ! ಗುಜರಾತ್ ಮಾದರಿಗೆ ತಾಲೀಮು!