ವರಿಷ್ಠರು ಒಪ್ಪಿದರೆ ಜಾರಕಿಹೊಳಿ, ಈಶ್ವರಪ್ಪಗೆ ಶೀಘ್ರ ಸಚಿವ ಸ್ಥಾನ: ಸಿಎಂ ಬೊಮ್ಮಾಯಿ
ಸಚಿವ ಸಂಪುಟದಲ್ಲಿ ಮತ್ತೆ ಸ್ಥಾನ ಸಿಗದ್ದಕ್ಕೆ ತೀವ್ರ ಬೇಸರಗೊಂಡಿದ್ದ ಹಿರಿಯ ಶಾಸಕರಾದ ಕೆ.ಎಸ್.ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಮಾತುಕತೆ ನಡೆಸಿದ್ದು, ಸಂಧಾನ ಫಲಪ್ರದವಾಗಿದೆ.
ಬೆಳಗಾವಿ/ಬೆಂಗಳೂರು (ಡಿ.22): ಸಚಿವ ಸಂಪುಟದಲ್ಲಿ ಮತ್ತೆ ಸ್ಥಾನ ಸಿಗದ್ದಕ್ಕೆ ತೀವ್ರ ಬೇಸರಗೊಂಡಿದ್ದ ಹಿರಿಯ ಶಾಸಕರಾದ ಕೆ.ಎಸ್.ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಮಾತುಕತೆ ನಡೆಸಿದ್ದು, ಸಂಧಾನ ಫಲಪ್ರದವಾಗಿದೆ. ಉಭಯ ನಾಯಕರ ಸಮ್ಮುಖದಲ್ಲೇ ಮುಖ್ಯಮಂತ್ರಿ ಬೊಮ್ಮಾಯಿ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಮುಂದಿನ ವಾರ ಸಂಪುಟದ ಆಕಾಂಕ್ಷಿಗಳ ಪಟ್ಟಿಯೊಂದಿಗೆ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ. ಅಧಿವೇಶನದ ಕಾರ್ಯಕಲಾಪ ನೋಡಿಕೊಂಡು ಬರುವ ಸೋಮವಾರವೇ ದೆಹಲಿಗೆ ತೆರಳುವ ಸಾಧ್ಯತೆಯಿದೆ.
ವರಿಷ್ಠರು ಒಪ್ಪಿದರೆ ಜನವರಿ ಮೊದಲ ವಾರದಲ್ಲೇ ಇಬ್ಬರಿಗೂ ಸಚಿವ ಸ್ಥಾನ ನೀಡುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಅವರು ಗುರುವಾರದಿಂದ ಸದನಕ್ಕೆ ಹಾಜರಾಗಲು ಒಪ್ಪಿಕೊಂಡಿದ್ದಾರೆ. ಸಂಧಾನ ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಈಶ್ವರಪ್ಪ, ಮಂಗಳವಾರ ಮುಖ್ಯಮಂತ್ರಿ ಬೊಮ್ಮಾಯಿ ಅವರು ನನಗೆ ಕರೆ ಮಾಡಿ ರಮೇಶ ಜಾರಕಿಹೊಳಿ ಜೊತೆ ಆಗಮಿಸುವಂತೆ ತಿಳಿಸಿದ್ದರು. ಅದರಂತೆ ಬುಧವಾರ ರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ರಮೇಶ ಜಾರಕಿಹೊಳಿ ಜೊತೆ ಆಗಮಿಸಿ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ.
ಮಂತ್ರಿಗಿರಿ ಸ್ಥಾನ ಬಗ್ಗೆ ಸಿಎಂ ಬೊಮ್ಮಾಯಿ ಭರವಸೆ: ಈಶ್ವರಪ್ಪ ಶಾಂತ
‘ಇಬ್ಬರನ್ನೂ ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಹೈಕಮಾಂಡ್ ಜೊತೆ ಮಾತನಾಡಿದ್ದೇನೆ. ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಈಗಾಗಲೇ ದೊರೆತಿದೆ. ಆದರೂ, ಮತ್ತೊಮ್ಮೆ ಇದನ್ನು ದೃಢಪಡಿಸಿಕೊಳ್ಳುವ ಸಲುವಾಗಿ ಈ ಸದನ ಮುಗಿಯುವುದರೊಳಗೆ, ಬಹುಶಃ ಸೋಮವಾರ ಮತ್ತೊಮ್ಮೆ ದೆಹಲಿಗೆ ತೆರಳಿ ವರಿಷ್ಠರ ಜೊತೆ ಮಾತುಕತೆ ನಡೆಸುತ್ತೇನೆ. ವರಿಷ್ಠರು ಹಸಿರು ನಿಶಾನೆ ತೋರಿಸಿದರೆ ಸಂಪುಟ ವಿಸ್ತರಣೆಗೆ ಜನವರಿಯಲ್ಲಿ ಚಾಲನೆ ಸಿಗಬಹುದು’ ಎಂದು ಬೊಮ್ಮಾಯಿ ತಿಳಿಸಿದ್ದಾರೆ ಎಂದು ಹೇಳಿದರು. ಮುಖ್ಯಮಂತ್ರಿಗಳ ಮೇಲೆ ನನಗೆ ಭರವಸೆ ಇದೆ. ಹೀಗಾಗಿ, ನನಗೆ ಹಾಗೂ ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತ. ಬೇರೆಯವರ ಬಗ್ಗೆ ನನಗೆ ಗೊತ್ತಿಲ್ಲ. ಈ ಹಿನ್ನೆಲೆಯಲ್ಲಿ ಗುರುವಾರದಿಂದ ನಾವು ಸದನಕ್ಕೆ ಹಾಜರಾಗುತ್ತಿದ್ದೇವೆ ಎಂದರು.
ನಮ್ಮ ಮಂತ್ರಿಗಿರಿ ಖಾತ್ರಿಯಾಗಿದೆ, ಇಂದಿನಿಂದ ಕಲಾಪಕ್ಕೆ: ಸಚಿವ ಸಂಪುಟದಲ್ಲಿ ಮತ್ತೆ ಸ್ಥಾನ ಸಿಗದಿದ್ದಕ್ಕೆ ತೀವ್ರ ಬೇಸರಗೊಂಡಿದ್ದ ಕೆ.ಎಸ್.ಈಶ್ವರಪ್ಪ ಮತ್ತು ಗೋಕಾಕ ಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಮಾತುಕತೆ ನಡೆಸಿದ್ದು, ಸಂಧಾನ ಫಲಪ್ರದವಾಗಿದೆ. ವರಿಷ್ಠರು ಒಪ್ಪಿದರೆ ಜನವರಿಯಲ್ಲಿ ಇಬ್ಬರಿಗೂ ಸಚಿವ ಸ್ಥಾನ ನೀಡುವ ಭರವಸೆಯನ್ನು ಮುಖ್ಯಮಂತ್ರಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರದಿಂದ ಸದನಕ್ಕೆ ಹಾಜರಾಗುವುದಾಗಿ ಈಶ್ವರಪ್ಪ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಈಶ್ವರಪ್ಪ, ಮಂಗಳವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನಂತರ ಸಿಎಂ ಅವರು ನನಗೆ ಕರೆ ಮಾಡಿದ್ದರು. ರಮೇಶ ಜಾರಕಿಹೊಳಿ ಜೊತೆ ಆಗಮಿಸುವಂತೆ ತಿಳಿಸಿದ್ದರು. ಅದರಂತೆ ಬುಧವಾರ ರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ರಮೇಶ ಜಾರಕಿಹೊಳಿ ಜೊತೆ ಆಗಮಿಸಿ, ಬೊಮ್ಮಾಯಿ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ‘ಇಬ್ಬರನ್ನೂ ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಹೈಕಮಾಂಡ್ ಜೊತೆ ಮಾತನಾಡಿದ್ದೇನೆ. ಅವರಿಂದ ಸಕಾರಾತ್ಮ ಪ್ರತಿಕ್ರಿಯೆ ಈಗಾಗಲೇ ದೊರೆತಿದೆ.
2 ವರ್ಷದಿಂದ ಅಲ್ಪಸಂಖ್ಯಾತರಿಗೆ ಅನುದಾನ ನೀಡಿಲ್ಲ: ಸಿಎಂ ಬೊಮ್ಮಾಯಿ
ಆದರೂ, ಮತ್ತೊಮ್ಮೆ ಇದನ್ನು ದೃಢಪಡಿಸಿಕೊಳ್ಳುವ ಸಲುವಾಗಿ ಈ ಸದನ ಮುಗಿಯುವುದರೊಳಗೆ, ಬಹುಶಃ ಸೋಮವಾರ ಮತ್ತೊಮ್ಮೆ ದೆಹಲಿಗೆ ತೆರಳಿ ವರಿಷ್ಠರ ಜೊತೆ ಮಾತುಕತೆ ನಡೆಸುತ್ತೇನೆ. ವರಿಷ್ಠರು ಹಸಿರು ನಿಶಾನೆ ತೋರಿಸಿದರೆ ಸಂಪುಟ ವಿಸ್ತರಣೆಗೆ ಜನವರಿಯಲ್ಲಿ ಚಾಲನೆ ಸಿಗಬಹುದು’ ಎಂದು ಸಿಎಂ ಸ್ಪಷ್ಟಭರವಸೆ ನೀಡಿದ್ದಾರೆ ಎಂದು ಹೇಳಿದರು. ಸಿಎಂ ಬಗ್ಗೆ ನನಗೆ ಭರವಸೆ ಇದೆ. ಹೀಗಾಗಿ, ನನಗೆ ಹಾಗೂ ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗುವುದು ಖಾತ್ರಿ ಆಗಿದೆ. ಬೇರೆಯವರ ಬಗ್ಗೆ ನನಗೆ ಗೊತ್ತಿಲ್ಲ. ಈ ಹಿನ್ನೆಲೆಯಲ್ಲಿ ಗುರುವಾರದಿಂದ ನಾವು ಸದನಕ್ಕೆ ಹಾಜರಾಗುತ್ತಿದ್ದೇವೆ ಎಂದು ತಿಳಿಸಿದರು. ಮತ್ತೆ ಸಚಿವ ಸ್ಥಾನ ನೀಡದ್ದಕ್ಕೆ ತೀವ್ರ ಬೇಸರಗೊಂಡಿದ್ದ ಈಶ್ವರಪ್ಪ ಅವರು ಅಧಿವೇಶನದಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿ ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದು ‘ಸೌಮ್ಯ ರೀತಿಯ’ ಪ್ರತಿಭಟನೆ ವ್ಯಕ್ತಪಡಿಸಿದ್ದರು.