Asianet Suvarna News Asianet Suvarna News

ರಮೇಶ್ ಜಾರಕಿಹೊಳಿಗೆ ಹೈಕಮಾಂಡ್ ವಾರ್ನಿಂಗ್: ಆದ್ರೂ ಸವಾಲು ಹಾಕಿದ ಸಾಹುಕಾರ

ಸಚಿವ ರಮೇಶ್ ಜಾರಕಿಹೊಳಿ‌ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಟಾಕ್ ವಾರ್ ಮುಂದುವರೆದಿದೆ. ಈ ವಿಚಾರದಲ್ಲಿ ರಮೇಶ್ ಜಾರಕಿಹೊಳಿಗೆ  ವರಿಷ್ಠರು ವಾರ್ನಿಂಗ್ ಕೊಟ್ಟಿದ್ದಾರಂತೆ.

ramesh jarkiholi open challenge for lakshmi hebbalkar on winning Next election rbj
Author
Bengaluru, First Published Dec 25, 2020, 8:13 PM IST

ಬೆಳಗಾವಿ, (ಡಿ.25): ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾತಾಡಬೇಡ ಎಂದು ವರಿಷ್ಠರ ವಾರ್ನಿಂಗ್ ಇದೆ. ಹಾಗಾಗಿ ಕಳೆದ 6 ತಿಂಗಳಿನಿಂದ ಒಂದು ಶಬ್ದ ಮಾತನಾಡಿಲ್ಲ. ಮುಂದಿನ ಬಾರಿ ಕ್ಷೇತ್ರದಲ್ಲಿ ಶಾಸಕಿ ಗೆದ್ರೆ ಹಾರ ಹಾಕೋಣ ಎಂದು ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಪ್ರಹಾರ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಬಾರಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಗೆದ್ರೆ ಹಾರ ಹಾಕೋಣ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಬಗ್ಗೆ ಮಾತನಾಡಬೇಡ ಎಂದು ವರಿಷ್ಠರ ವಾರ್ನಿಂಗ್ ಇದೆ ಎಂದು ಸ್ಪಷ್ಟಪಡಿಸಿದರು.

6 ಶಾಸಕರು ಬಿಜೆಪಿ ಸೇರ್ಪಡೆ: ಸಂಚಲನ ಮೂಡಿಸಿದ ರಾಜಕೀಯ ಬೆಳವಣಿಗೆ

ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಯುವರಾಜ ಕದಂ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ‌, ನಾನು ಸೇಡು ತೀರಿಸಿಕೊಳ್ಳುತ್ತಿಲ್ಲ. ಕಳೆದ ಬಾರಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಜನ ನನ್ನ ನಂಬಿ ಮತ ಹಾಕಿದ್ರು. ಮುಂದಿನ ಬಾರಿ ಅವರಿಗೆ ಮತ ಹಾಕಿದ್ರೆ ಶಾಸಕಿಗೆ ಮಾಲೆ ಹಾಕೋಣ ಎಂದು‌ ಸವಾಲು ಹಾಕಿದರು.

ಚುನಾವಣೆ ಗೆದ್ದ ಬಳಿಕ ಬೇರೆ ರೂಪ ತಾಳಿದ್ರು. ಹಾಗಾಗಿ ಕಳೆದ 6 ತಿಂಗಳಿನಿಂದ ಒಂದು ಶಬ್ದ ಮಾತನಾಡಿಲ್ಲ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಪ್ರಯತ್ನ ನಡೆಯುತ್ತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಯಾವ ಮಟ್ಟಿಗೆ ತಯಾರಿ ಮಾಡಿದ್ದೇವು ಎಲ್ಲರಿಗೂ ಗೊತ್ತಿದೆ. ಆದರೆ ಚುನಾವಣೆ ಗೆದ್ದ ಬಳಿಕ ಬೇರೆ ರೂಪ ತಾಳಿದ್ರು ಎಂದು ಪರೋಕ್ಷವಾಗಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕಿಡಿಕಾರಿದರು.

Follow Us:
Download App:
  • android
  • ios