ಬೆಳಗಾವಿ (ಡಿ.01): ಮಾಜಿ ಸಚಿವ ಎಚ್‌.ವಿಶ್ವನಾಥ್‌ ಪ್ರಕರಣದಲ್ಲಿ ಹೈಕೋರ್ಟ್‌ ಏನು ತೀರ್ಪು ನೀಡಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ವಿಶ್ವನಾಥ್‌ ಜತೆಗೆ ನಾನಿರುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಶ್ವನಾಥ್‌ ಕುರಿತು ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶದ ಬಗ್ಗೆ ಏನು ಮಾಡಬೇಕು ಎನ್ನುವ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. 

ಚಾಲೇಂಜ್ ಹಾಕಿದ ಸಾಹುಕಾರ್ : ನನ್ನ ರಾಜೀನಾಮೆ ಖಚಿತ ಎಂದ ರಮೇಶ್ ಜಾರಕಿಹೊಳಿ ...

ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ.

ಬಿಜೆಪಿಗೆ ಸೇರ್ಪಡೆಯಾದ ಉಳಿದ ಶಾಸಕರ ಸಭೆ ಕರೆದು ಚರ್ಚೆ ಮಾಡುತ್ತೇವೆ. ನಮ್ಮಲ್ಲಿ ಒಬ್ಬರಿಗೆ ಅನ್ಯಾಯ ಆಗಿರುವ ಕಾರಣಕ್ಕೆ ಎಲ್ಲರೂ ಒಟ್ಟಾಗಿ ಸೇರುತ್ತೇವೆ. ಎಚ್‌.ವಿಶ್ವನಾಥ ಜತೆಗೆ ನಾನಿರುತ್ತೇನೆ ಎಂದು ಭರವಸೆ ನೀಡಿದರು.