ರಾಜ್ಯ ಬಿಜೆಪಿ ಸರ್ಕಾರ ಲೂಟಿಗೆ ಮುಂದಾಗಿದೆ: ರಣದೀಪ್ ಸಿಂಗ್ ಸುರ್ಜೇವಾಲ
ಕೇವಲ ಒಂದು ತಿಂಗಳಲ್ಲಿ ಚುನಾವಣೆ ಘೋಷಣೆಯಾಗಲಿದ್ದು, ರಾಜ್ಯ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಹೊಸದಾಗಿ ಹತ್ತು ಸಾವಿರ ಕೋಟಿಗೂ ಅಧಿಕ ಮೊತ್ತದ ಟೆಂಡರ್ ನೀಡುತ್ತಿದೆ. ಮತ್ತೆ ಶೇ.40 ಕಮಿಷನ್ ಪಡೆಯಲು ಈ ಕೃತ್ಯಕ್ಕೆ ಮುಂದಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದರು.
ಕೋಲಾರ (ಫೆ.17): ಕೇವಲ ಒಂದು ತಿಂಗಳಲ್ಲಿ ಚುನಾವಣೆ ಘೋಷಣೆಯಾಗಲಿದ್ದು, ರಾಜ್ಯ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಹೊಸದಾಗಿ ಹತ್ತು ಸಾವಿರ ಕೋಟಿಗೂ ಅಧಿಕ ಮೊತ್ತದ ಟೆಂಡರ್ ನೀಡುತ್ತಿದೆ. ಮತ್ತೆ ಶೇ.40 ಕಮಿಷನ್ ಪಡೆಯಲು ಈ ಕೃತ್ಯಕ್ಕೆ ಮುಂದಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆ ಗಮನದಲ್ಲಿಟ್ಟುಕೊಂಡು ಸಾರ್ವಜನಿಕರ ಹಣವನ್ನು ಬಿಜೆಪಿ ಸರ್ಕಾರ ಮತ್ತೆ ಲೂಟಿ ಮಾಡಲು ಮುಂದಾಗಿದೆ. ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ ಎಲ್ಲ ಟೆಂಡರ್ ರದ್ದುಗೊಳಿಸಿ, ತನಿಖೆ ನಡೆಸಲಾಗುವುದು. ತಪ್ಪು ಕಂಡು ಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಹಣ ಪಾವತಿಸಿ ಹಣ ಪಡೆಯುವ ಸೂತ್ರ: ವಿವಿಧ ಕಾಮಗಾರಿ ನಡೆಸಿದ ಸಂಬಂಧ 20 ಸಾವಿರ ಕೋಟಿ ಬಿಲ್ ಪಾವತಿಸಿಲ್ಲವೆಂದು ಗುತ್ತಿಗೆದಾರರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಕೇವಲ 30 ದಿನ ಮಾತ್ರ ಈ ಸರ್ಕಾರ ಇರಲಿದ್ದು, ಇದರ ನೂತನ ಸೂತ್ರವೆಂದರೆ ಹಣ ಪಾವತಿಸಿ ಹಣ ವಾಪಸ್ ಪಡೆಯುವುದು ಎಂದರು. ಇತ್ತಿಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಿರಿಯ ನಾಯಕ ಯಡಿಯೂರಪ್ಪರನ್ನು ವೇದಿಕೆಯಲ್ಲೇ ಯಾವ ರೀತಿ ಅವಮಾನ ಮಾಡಿದರೆಂಬುದು ಎಲ್ಲರಿಗೂ ಗೊತ್ತು. ರಾಜಕೀಯವಾಗಿ ನಾವು ಯಡಿಯೂರಪ್ಪ ಅವರನ್ನು ವಿರೋಧಿಸುತ್ತೇವೆ. ಆದರೆ, ತಂದೆ ವಯಸ್ಸಿನ ಯಡಿಯೂರಪ್ಪ ಅವರನ್ನು ಬಿಜೆಪಿ ನಡೆಸಿಕೊಳ್ಳುವ ರೀತಿಯೇ ಇದು ಎಂದು ಪ್ರಶ್ನಿಸಿದರು.
ಭಾರತದಲ್ಲೇ ಅತಿ ದೊಡ್ಡ ಭ್ರಷ್ಟ ಸರ್ಕಾರ ಬಿಜೆಪಿ: ರಣದೀಪ್ ಸಿಂಗ್ ಸುರ್ಜೇವಾಲ
ಕಾಂಗ್ರೆಸ್ ಟಿಕೆಟ್ ಘೋಷಣೆಗೂ ಮುನ್ನವೇ ಒಮ್ಮತ ಸೃಷ್ಟಿಗೆ ಯತ್ನ: ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಲುವಾಗಿ ಗುರುವಾರ ಕೆಪಿಸಿಸಿ ಚುನಾವಣಾ ಸಮಿತಿ ಸುದೀರ್ಘ ಸಭೆ ನಡೆಸಿದ್ದು, ಈ ವೇಳೆ ಅಭ್ಯರ್ಥಿಗಳ ಹೆಸರು ಘೋಷಣೆಗೂ ಮೊದಲು ಕ್ಷೇತ್ರದಲ್ಲಿನ ಆಕಾಂಕ್ಷಿಗಳಲ್ಲಿ ಒಮ್ಮತ ಮೂಡಿಸುವ ಪ್ರಯತ್ನ ಮಾಡಬೇಕು. ಒಟ್ಟಾರೆ ಪಕ್ಷದ ಅಭ್ಯರ್ಥಿ ಗೆಲ್ಲುವ ವಾತಾವರಣ ಸೃಷ್ಟಿಸಬೇಕು ಎಂದು ಚರ್ಚಿಸಲಾಗಿದೆ.
ನಗರದ ಹೊರ ವಲಯದ ಖಾಸಗಿ ರೆಸಾರ್ಚ್‌ನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ 54 ಮಂದಿ ಕೆಪಿಸಿಸಿ ಚುನಾವಣಾ ಸಮಿತಿ ಸದಸ್ಯರೊಂದಿಗೆ ಚರ್ಚೆ ನಡೆಯಿತು. ಈ ವೇಳೆ ಎಲ್ಲಾ 54 ಮಂದಿಗೂ ಮಾತನಾಡಲು ಅವಕಾಶ ನೀಡಲಿಲ್ಲ. ಬದಲಿಗೆ ಕೆಲವು ಮಂದಿಗಷ್ಟೇ ಅವಕಾಶ ನೀಡಿ ಎಲ್ಲರಿಗೂ ಲಿಖಿತ ಅಭಿಪ್ರಾಯ ಸಲ್ಲಿಸಲು ತಿಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಇದರ ನಡುವೆ ನಡೆದ ಚರ್ಚೆಯಲ್ಲಿ ಹೈಕಮಾಂಡ್ ಮಟ್ಟದಲ್ಲಿ ನಡೆಯುವ ಎಐಸಿಸಿ ಚುನಾವಣಾ ಸಮಿತಿ ಸಭೆ, ಸ್ಕ್ರೀನಿಂಗ್ ಸಮಿತಿ ಸಭೆಗೆ ಮೊದಲೇ ಕ್ಷೇತ್ರಗಳಲ್ಲಿನ ಆಕಾಂಕ್ಷಿಗಳ ನಡುವೆ ಸಹಮತ ಮೂಡಿಸುವ ಪ್ರಯತ್ನ ಮಾಡಬೇಕು. ಭಿನ್ನ ನಿಲುವುಗಳನ್ನು ಹೊಂದಿರುವ ಆಕಾಂಕ್ಷಿಗಳನ್ನು ಒಟ್ಟುಗೂಡಿಸಿ ಗೆಲ್ಲುವ ಮಾನದಂಡ ಆಧಾರದ ಮೇಲೆ ಟಿಕೆಟ್ ನೀಡಲಾಗುವುದು. ಟಿಕೆಟ್ ಯಾರಿಗೇ ನೀಡಿದರೂ ಪಕ್ಷಕ್ಕಾಗಿ ಕೆಲಸ ಮಾಡಬೇಕು ಎಂಬ ಬಗ್ಗೆ ಒಮ್ಮತ ಮೂಡಿಸಬೇಕು ಎಂದು ಚರ್ಚಿಸಲಾಯಿತು. ಇನ್ನು ಬಹುತೇಕ ಎಲ್ಲಾ ಹಾಲಿ ಶಾಸಕರಿಗೂ ಟಿಕೆಟ್ ನೀಡಬೇಕು.
ಕೋಲಾರದಿಂದ ಸ್ಪರ್ಧೆ, ಸಿದ್ದು ಕೈಗೊಂಡ ತಪ್ಪು ನಿರ್ಧಾರ: ಸಿ.ಎಂ.ಇಬ್ರಾಹಿಂ
ಕಡಿಮೆ ಪೈಪೋಟಿ ಇರುವ 30 ಕ್ಷೇತ್ರಗಳಲ್ಲೂ ಒಂದೇ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಬೇಕು. ಉಳಿದಂತೆ 80ರಿಂದ 100 ಕ್ಷೇತ್ರಗಳಿಗೆ 2-3 ಸಂಭವನೀಯರು ಹಾಗೂ ಹೆಚ್ಚು ಪೈಪೋಟಿ ಇರುವ ಬೆರಳೆಣಿಕೆ ಕ್ಷೇತ್ರಗಳಿಗೆ ಮಾತ್ರ 5-6 ಮಂದಿ ಆಕಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಬೇಕು ಎಂದು ನಿರ್ಧರಿಸಲಾಯಿತು. ಜತೆಗೆ ಫೆ.10ರ ವೇಳೆಗೆ ಮೊದಲ ಪಟ್ಟಿಯನ್ನು ಪ್ರಕಟಿಸಬೇಕು. ತನ್ಮೂಲಕ ಪಕ್ಷದ ಅಭ್ಯರ್ಥಿಗಳಿಗೆ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಹೆಚ್ಚಿನ ಕಾಲಾವಕಾಶ ನೀಡಬೇಕು. ಇಲ್ಲದಿದ್ದರೆ ಪ್ರಚಾರಕ್ಕಾಗಿ ಸೂಕ್ತ ಸಮಯ ದೊರೆಯದೆ ಪಕ್ಷದ ಅಭ್ಯರ್ಥಿಗಳು ಪರದಾಡಬೇಕಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.